ಸಂತ್ರಸ್ತ ಬಾಲಕಿಯನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುತ್ತಿರುವುದು. 
ದೇಶ

ಭುವನೇಶ್ವರ: ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು; AIIMSಗೆ ದಾಖಲು, ಆಕ್ರೋಶ

ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆಂದು ತಿಳಿದುಬಂದಿದೆ.

ಭುವನೇಶ್ವರ: ಒಡಿಶಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, 15 ವರ್ಷದ ಬಾಲಕಿಯ ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಬಲಂಗಾ ಪ್ರದೇಶದಲ್ಲಿ ಶನಿವಾರ ನಡೆದಿದೆ.

ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದು, ಆಕೆಯನ್ನು ಭುವನೇಶ್ವರದ ಏಮ್ಸ್'ಗೆ ದಾಖಲಿಸಲಾಗಿದೆ.

ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆಂದು ತಿಳಿದುಬಂದಿದೆ.

ಬಾಲಕಿಗೆ ಬೆಂಕಿ ಹಚ್ಚಿದ ಬಳಿಕ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದು, ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಮೊದಲು ಆಕೆಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾಲೆ. ನಂತರ ಏಮ್ಸ್'ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಘಟನೆ ಕುರಿತು ಎಸ್ಪಿ ಪ್ರಭಾರಿ ಪಿನಾಕ್ ಮಿಶ್ರಾ ಅವರು ಪ್ರತಿಕ್ರಿಯೆ ನೀಡಿದ್ದು, ಘಟನೆ ಸಂಬಂಧ ಯಾವುದೇ ದೂರುಗಳು ಬಂದಿಲ್ಲ. ಗ್ರಾಮಸ್ಥರು ಮಾಹಿತಿ ನೀಡಲು ಹಿಂಜರಿಯುತ್ತಿದ್ದಾರೆ. ಇನ್ನು ಬಾಲಕಿಯ ಕುಟುಂಬದ ಆಕೆಗೆ ಯಾರೊಂದಿಗೂ ವೈಯಕ್ತಿಕ ದ್ವೇಷವಿಲ್ಲ ಎಂದು ಹೇಳಿದೆ, ಪ್ರಸ್ತುತ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಘಟನೆಗೆ ಉಪ ಮುಖ್ಯಮಂತ್ರಿ, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಪ್ರವತಿ ಪರಿದಾ ಅವರು ಆಘಾತ ವ್ಯಕ್ತಪಡಿಸಿದ್ದು, ಸಂತ್ರಸ್ತೆಯನ್ನು ತಕ್ಷಣವೇ ಭುವನೇಶ್ವರದ ಏಮ್ಸ್‌ಗೆ ಸ್ಥಳಾಂತರಿಸಲಾಗಿದ್ದು, ಅತ್ಯುತ್ತಮ ಚಿಕಿತ್ಸೆಗಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಆಕೆಯ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಅಪರಾಧಿಗಳ ತಕ್ಷಣವೇ ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

H1B ವೀಸಾ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯಾಗುತ್ತದೆ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಲುಟ್ನಿಕ್

ಗಾಜಾ ಸಂಘರ್ಷ ಕೊನೆಗೆ ಡೊನಾಲ್ಡ್ ಟ್ರಂಪ್ 20 ಅಂಶಗಳ ಯೋಜನೆ: ಪ್ರಧಾನಿ ಮೋದಿ ಸ್ವಾಗತ

ಪುರುಷರ Asia Cup ಹೈಡ್ರಾಮಾ: ಮಹಿಳಾ ವಿಶ್ವಕಪ್ ನಲ್ಲಿ ಏನಾಗುತ್ತದೆ,ಅ.5ರ ಪಂದ್ಯ ಮೇಲೆ ಎಲ್ಲರ ಚಿತ್ತ

ನೆತನ್ಯಾಹು-ಟ್ರಂಪ್ ಗಾಜಾ ಶಾಂತಿ ಒಪ್ಪಂದ ಘೋಷಣೆ: ಹಂತ ಹಂತವಾಗಿ ಹಿಂದೆ ಸರಿಯಲಿರುವ ಇಸ್ರೇಲ್

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ: ಹಾನಿ ಬಗ್ಗೆ ಕುರಿತು ಇಂದು ಸಿಎಂ ವೈಮಾನಿಕ ಸಮೀಕ್ಷೆ

SCROLL FOR NEXT