ಪ್ರಧಾನಿ ಮೋದಿ 
ದೇಶ

ಜುಲೈ 23 ರಿಂದ ಪ್ರಧಾನಿ ಮೋದಿ ಯುಕೆ, ಮಾಲ್ಡೀವ್ಸ್‌ಗೆ ಪ್ರವಾಸ

ತಮ್ಮ ಪ್ರವಾಸದ ಮೊದಲ ಚರಣದಲ್ಲಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆಗಾಗಿ ಲಂಡನ್‌ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಿಂದ ನಾಲ್ಕು ದಿನ ಯುನೈಟೆಡ್ ಕಿಂಗ್‌ಡಮ್ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಈ ಭೇಟಿಯ ಉದ್ದೇಶವಾಗಿದೆ.

ತಮ್ಮ ಪ್ರವಾಸದ ಮೊದಲ ಚರಣದಲ್ಲಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆಗಾಗಿ ಲಂಡನ್‌ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಭಾರತ-ಯುಕೆ ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಕುರಿತು ಪಿಎಂ ಸ್ಟಾರ್ಮರ್ ಅವರೊಂದಿಗೆ ಪ್ರಧಾನಿ ಮೋದಿ ವ್ಯಾಪಕ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಪ್ರಾದೇಶಿಕ ಮತ್ತು ಜಾಗತಿಕ ಮಹತ್ವದ ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಲಿದ್ದಾರೆ.

ಮೋದಿಯವರ ಯುಕೆ ಪ್ರವಾಸವು ಅವರ ನಾಲ್ಕನೇ ಭೇಟಿಯಾಗಿದ್ದು, ರಾಜ ಮೂರನೇ ಚಾರ್ಲ್ಸ್ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದು MEA ಹೇಳಿದೆ.

ಭೇಟಿ ವೇಳೆ ವ್ಯಾಪಾರ ಮತ್ತು ಆರ್ಥಿಕತೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಭದ್ರತೆ, ಹವಾಮಾನ, ಆರೋಗ್ಯ, ಶಿಕ್ಷಣ ಮತ್ತು ಜನರ ನಡುವಿನ ಸಂಬಂಧಗಳ ಮೇಲೆ ಗಮನ ಕೇಂದ್ರೀಕರಿಸಿದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ (CSP) ಪ್ರಗತಿ ಕುರಿತು ಉಭಯ ದೇಶಗಳ ನಾಯಕರು ಪರಾಮರ್ಶೆ ನಡೆಸಲಿದ್ದಾರೆ.

ಜುಲೈ 26 ರಂದು ದ್ವೀಪರಾಷ್ಟ್ರದ 60ನೇ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಮೋದಿ ಅವರು ಲಂಡನ್‌ನಿಂದ ಮಾಲ್ಡೀವ್ಸ್‌ಗೆ ಪ್ರಯಾಣಿಸಲಿದ್ದಾರೆ.

ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜುಲೈ 25 ರಿಂದ 26 ರವರೆಗೆ ಮಾಲ್ಡೀವ್ಸ್‌ಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಲ್ಡೀವ್ಸ್‌ಗೆ ಮೋದಿಯವರ ಮೂರನೇ ಭೇಟಿ ಇದಾಗಿದೆ. ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮುಯಿಝು ಅವರು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BBMPಯಲ್ಲಿ ಭ್ರಷ್ಟಾಚಾರ: ನಾಗಮೋಹನ ದಾಸ್ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

ಛಲ ಬಿಡದ ಪ್ರಯತ್ನಕ್ಕೆ ಫಲ: 216 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ಉಡುಪಿಯ ದೀಕ್ಷಾ!

ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್‌; ನ್ಯೂಯಾರ್ಕ್ ಟೈಮ್ಸ್ ವರದಿ

ಬಿಹಾರದಲ್ಲಿ ಆರಂಭವಾದ 'Voter Adhikar Yatra' ದೇಶಾದ್ಯಂತ ವಿಸ್ತರಿಸಲಿದೆ: ರಾಹುಲ್ ಗಾಂಧಿ

ರಾಜ್ಯದ ಜನತೆಗ ಮತ್ತೊಂದು ಶಾಕ್: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ; ನಾಳೆಯಿಂದಲೇ ಜಾರಿ

SCROLL FOR NEXT