ಶಶಿ ತರೂರ್, ಕೆ. ಮುರಳೀಧರನ್ 
ದೇಶ

ತರೂರ್ ನಮ್ಮೊಂದಿಗಿಲ್ಲ; ತಿರುವನಂತಪುರಂನಲ್ಲಿ ಆಯೋಜಿಸುವ ಕಾಂಗ್ರೆಸ್ ಕಾರ್ಯಕ್ರಮಕ್ಕೂ ಕರೆಯಲ್ಲ: ಕೆ ಮುರಳೀಧರನ್

ಇಂದಿರಾ ಗಾಂಧಿ ಮತ್ತು ತುರ್ತು ಪರಿಸ್ಥಿತಿ ಕುರಿತಾದ ಶಶಿ ತರೂರ್ ಅವರ ಲೇಖನ ಪ್ರಕಟವಾದ ನಂತರ ಅವರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ತಿರುವನಂತಪುರಂ: ದೇಶದ ಭದ್ರತೆ ವಿಚಾರದಲ್ಲಿ ಶಶಿ ತರೂರ್ ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುರಳೀಧರನ್, ತರೂರ್ ಅವರ ಇತ್ತೀಚಿನ ಹೇಳಿಕೆಗಳು ಪಕ್ಷದ ಸಾಮೂಹಿಕ ನಿಲುವಿನಿಂದ ಅವರನ್ನು ದೂರವಿಟ್ಟಿದೆ. ಅವರು ನಮ್ಮೊಂದಿಗಿಲ್ಲ, ಹೀಗಾಗಿ ಅವರು ಕಾರ್ಯಕ್ರಮ ಬಹಿಷ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಪಾದಿಸಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ ಸೇರಿದಂತೆ ಇತ್ತೀಚಿನ ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಶಸಾಸ್ತ್ರ ಪಡೆಯನ್ನು ಬಹಿರಂಗವಾಗಿ ಬೆಂಬಲಿಸಿದ ಶಶಿ ತರೂರ್ ಬಗ್ಗೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿರುವಂತೆಯೇ ಕೆ.ಮುರಳೀಧರನ್ ಈ ರೀತಿಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಕೊಚ್ಚಿಯಲ್ಲಿ ಶನಿವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಶಶಿ ತರೂರ್, ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದರು. ಕಾಂಗ್ರೆಸ್ ನಾಯಕರೊಂದಿಗೆ ತಮ್ಮ ಭಿನ್ನಾಭಿಪ್ರಾಯದ ನಡುವೆ, ಸಂಸದ ಶಶಿ ತರೂರ್, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಕೆಲವೊಮ್ಮೆ ಇತರ ಪಕ್ಷಗಳೊಂದಿಗೆ ಸಹಕರಿಸುವುದು ಅಗತ್ಯವಾಗುತ್ತದೆ ಎಂದು ಹೇಳಿದ್ದರು.

ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಶಶಿ ತರೂರ್, ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ತಿರುವನಂತಪುರಂನಲ್ಲಿ ಆಯೋಜಿಸುವ ಯಾವುದೇ ಕಾಂಗ್ರೆಸ್ ಸಮಾರಂಭಕ್ಕೂ ಕರೆಯಲ್ಲ ಎಂದು ಮುರಳೀಧರನ್ ಹೇಳಿದರು. ತರೂರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ ಎಂದರು.

ಕೇರಳ ಸಿಎಂ ಸ್ಥಾನಕ್ಕೆ ಶಶಿ ತರೂರ್ UDF ನ ಟಾಪ್ ಆಯ್ಕೆ ಎಂದು ಸೂಚಿಸುವ ಸಮೀಕ್ಷೆಯೊಂದನ್ನು ತರೂರ್ ಹಂಚಿಕೊಂಡ ನಂತರ ಅಸಮಾಧಾನ ಮತ್ತಷ್ಟು ಹೆಚ್ಚಾಗಿದೆ. ತರೂರ್ ಯಾವ ಪಕ್ಷಕ್ಕೆ ಸೇರಿದವರು ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಮುರಳೀಧರನ್ ಟೀಕಿಸಿದ್ದಾರೆ.

ಮಲಯಾಳಂ ದೈನಿಕದಲ್ಲಿ ಇಂದಿರಾ ಗಾಂಧಿ ಮತ್ತು ತುರ್ತು ಪರಿಸ್ಥಿತಿ ಕುರಿತಾದ ಶಶಿ ತರೂರ್ ಅವರ ಲೇಖನ ಪ್ರಕಟವಾದ ನಂತರ ಅವರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಶಶಿ ತರೂರ್ ಅವರು ಕಾಂಗ್ರೆಸ್‌ನೊಳಗೆ ಮುಂದುವರಿಯಬೇಕೆ ಅಥವಾ ಸ್ವತಂತ್ರ ರಾಜಕೀಯ ಮಾರ್ಗವನ್ನು ಅನುಸರಿಸಬೇಕೆ ಎಂದು ಅವರೇ ನಿರ್ಧರಿಸಲಿ ಎಂದು ಮುರುಳೀಧರನ್ ಈ ಹಿಂದೆ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!