ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಪ್ರಧಾನಿ ಮೋದಿ ಹೇಳಿದ್ದೇನು?

ಜಗದೀಪ್ ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.
Manjula VN
Updated On : 22 Jul 2025, 1:16 pm

ನವದೆಹಲಿ: ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ನಡುವೆ ಜಗದೀಪ್ ಧನಕರ್ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಜಗದೀಪ್ ಧನಕರ್​ ಅವರಿಗೆ ಭಾರತದ ಉಪ ರಾಷ್ಟ್ರಪತಿ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಲು, ದೇಶಕ್ಕೆ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶಗಳು ಸಿಕ್ಕಿವೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.

ಜಗದೀಪ್ ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.

Advertisement

Advertisement

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆಂದು ಎಂದು ಪತ್ರದಲ್ಲಿ ತಿಳಿಸಿದ್ದರು.

Also Read

BAC ಸಭೆಗೆ ನಡ್ಡಾ-ಕಿರಣ್ ರಿಜಿಜು ಗೈರು: Dhankar ದಿಢೀರ್​ ರಾಜೀನಾಮೆಗೆ ಇದೇ ಕಾರಣ? ಕೇಂದ್ರ ಸರ್ಕಾರ ಹೇಳಿದ್ದೇನು?

ನಾನು ನನ್ನ ಆರೋಗ್ಯ ರಕ್ಷಣೆಯತ್ತ ಗಮನ ಹರಿಸಲು ಬಯಸುತ್ತೇನೆ. ಈ ನಿಟ್ಟಿನಲ್ಲಿ, ವೈದ್ಯರ ಸಲಹೆಯ ಮೇರೆಗೆ ನಾನು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಂವಿಧಾನದ 67(ಎ) ವಿಧಿಯ ಪ್ರಕಾರ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ನನ್ನ ನಿರ್ಧಾರ ತಕ್ಷಣವೇ ಜಾರಿಗೆ ಬರಲಿದೆ. ಉಪರಾಷ್ಟ್ರಪತಿ ಹುದ್ದೆಯ ಜವಾಬ್ದಾರಿಗಳನ್ನು ಪೂರೈಸುವ ಅವಧಿಯಲ್ಲಿ ಸಂಪೂರ್ಣ ಬೆಂಬಲ ನೀಡಿದ್ದಕ್ಕಾಗಿ ಅಧ್ಯಕ್ಷ ಮುರ್ಮು, ಪ್ರಧಾನಿ ಮೋದಿ, ಕೇಂದ್ರ ಸಚಿವರು ಮತ್ತು ಎಲ್ಲಾ ಸಂಸತ್ ಸದಸ್ಯರಿಗೆ ನಾನು ಕೃತಜ್ಞನಾಗಿದ್ದೇನೆ.

ನಿಮ್ಮೆಲ್ಲರಿಂದ ನನಗೆ ದೊರೆತ ಅಮೂಲ್ಯ ಬೆಂಬಲ ಮತ್ತು ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ನಾನು ಉಪರಾಷ್ಟ್ರಪತಿಯಾಗಿದ್ದ ವರ್ಷಗಳಲ್ಲಿ ಅನೇಕ ಅಮೂಲ್ಯ ವಿಷಯಗಳನ್ನು ಕಲಿತಿದ್ದೇನೆ. ನಾನು ಅನೇಕ ಜೀವನ ಅನುಭವಗಳನ್ನು ಗಳಿಸಿದ್ದೇನೆ. ಉಪರಾಷ್ಟ್ರಪತಿಯಾಗಿ, ಇಂತಹ ಪರಿವರ್ತನಾ ಸಮಯದಲ್ಲಿ ದೇಶದ ಆರ್ಥಿಕ ಪ್ರಗತಿ ಮತ್ತು ಅಭಿವೃದ್ಧಿಯನ್ನು ಗಮನಿಸಿದ್ದೇನೆ. ಈ ಅವಕಾಶವನ್ನು ನಾನು ಗೌರವವೆಂದು ಪರಿಗಣಿಸುತ್ತೇನೆ. ಇದು ನನಗೆ ಹೆಚ್ಚಿನ ತೃಪ್ತಿಯನ್ನು ನೀಡುತ್ತದೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಈ ರಾಜೀನಾಮೆಯೊಂದಿಗೆ ಅಧಿಕಾರದಲ್ಲಿರುವಾಗ ರಾಜೀನಾಮೆ ನೀಡಿದ ಮೂರನೇ ಉಪರಾಷ್ಟ್ರಪತಿಯಾಗಿ ಧನಕರ್​ ದಾಖಲೆ ಪುಸ್ತಕಗಳಲ್ಲಿ ದಾಖಲಾಗಿದ್ದಾರೆ.

ಈ ಹಿಂದೆ, ವಿವಿ ಗಿರಿ ಮತ್ತು ಆರ್. ವೆಂಕಟರಾಮನ್ ಇದೇ ರೀತಿಯ ರಾಜೀನಾಮೆಗಳನ್ನು ಸಲ್ಲಿಸಿದ್ದರು. ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಬ್ಬರೂ ರಾಜೀನಾಮೆ ನೀಡಿದ್ದರು. ಆದರೆ, ಅನಾರೋಗ್ಯದ ಕಾರಣ ಧನಕರ್​ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement