ಕನ್ವರ್ ಯಾತ್ರೆ online desk
ದೇಶ

ಕನ್ವಾರ್ ಯಾತ್ರೆ ಮಾರ್ಗದಲ್ಲಿರುವ ಹೋಟೆಲ್‌ಗಳು ಲೈಸೆನ್ಸ್, ನೋಂದಣಿ ಪ್ರದರ್ಶಿಸುವುದು ಕಡ್ಡಾಯ: ಸುಪ್ರೀಂ ಕೋರ್ಟ್

ಗೌಪ್ಯತೆ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಬಗ್ಗೆ ಕಳವಳಗಳನ್ನು ಉಲ್ಲೇಖಿಸಿ ಅರ್ಜಿದಾರರು ಕ್ಯೂಆರ್ ಕೋಡ್ ಪ್ರದರ್ಶನ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು.

ನವದೆಹಲಿ: ಕನ್ವಾರ್ ಯಾತ್ರೆ ಮಾರ್ಗದಲ್ಲಿರುವ ಎಲ್ಲಾ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್‌ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಎರಡು ರಾಜ್ಯಗಳ ಆದೇಶಕ್ಕೆ ತಡೆ ಕೋರಿ ಶಿಕ್ಷಣ ತಜ್ಞ ಅಪೂರ್ವಾನಂದ್ ಝಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠ, ಕನ್ವರ್ ಯಾತ್ರೆ ಮಾರ್ಗದಲ್ಲಿರುವ ಹೋಟೆಲ್ ಮತ್ತು ತಿನಿಸು ಅಂಗಡಿಗಳ ಮಾಲೀಕರು ಶಾಸನಬದ್ಧ ಅವಶ್ಯಕತೆಗಳಿಗೆ ಅನುಗುಣವಾಗಿ ತಮ್ಮ ಪರವಾನಗಿ ಮತ್ತು ನೋಂದಣಿ ಪ್ರಮಾಣಪತ್ರಗಳನ್ನು ಪ್ರದರ್ಶಿಸಬೇಕು ಎಂದು ನಿರ್ದೇಶಿಸಿದೆ.

ಗೌಪ್ಯತೆ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಬಗ್ಗೆ ಕಳವಳಗಳನ್ನು ಉಲ್ಲೇಖಿಸಿ ಅರ್ಜಿದಾರರು ಕ್ಯೂಆರ್ ಕೋಡ್ ಪ್ರದರ್ಶನ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು.

"ಇಂದು (ಮಂಗಳವಾರ) ಯಾತ್ರೆಯ ಕೊನೆಯ ದಿನ ಎಂದು ನಮಗೆ ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ, ಇದು ಮುಂದಿನ ದಿನಗಳಲ್ಲಿ ಕೊನೆಗೊಳ್ಳುವ ಸಾಧ್ಯತೆಯಿದೆ. ಆದ್ದರಿಂದ, ಈ ಹಂತದಲ್ಲಿ, ಎಲ್ಲಾ ಹೋಟೆಲ್ ಮಾಲೀಕರು ಶಾಸನಬದ್ಧ ಅವಶ್ಯಕತೆಗಳ ಪ್ರಕಾರ ಪರವಾನಗಿ ಮತ್ತು ನೋಂದಣಿ ಪ್ರಮಾಣಪತ್ರವನ್ನು ಪ್ರದರ್ಶಿಸಬೇಕು ಎಂಬ ಆದೇಶವನ್ನು ಮಾತ್ರ ನಾವು ರವಾನಿಸುತ್ತೇವೆ" ಎಂದು ಪೀಠ ತಿಳಿಸಿತು.

ಕನ್ವಾರ್ ಯಾತ್ರೆಯ ಸಂದರ್ಭದಲ್ಲಿ ಯಾತ್ರಿಗಳಿಗೆ ಆಹಾರ ಸೇವೆಗಳ ಸುರಕ್ಷತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸಲು ಈ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ರಾಜ್ಯ ಸರ್ಕಾರಗಳು ವಾದಿಸಿವೆ. ಈ ಕೋಡ್‌ಗಳ ಮೂಲಕ ಗ್ರಾಹಕರು ಆಹಾರ ಮಳಿಗೆಗಳ ಗುಣಮಟ್ಟ, ಪರವಾನಗಿ ಮತ್ತು ಶುಚಿತ್ವದ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT