ಜಗದೀಪ್ ಧಂಖರ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು(NDA) ಮುನ್ನಡೆ ಸಾಧಿಸಲು ಸಾಕಷ್ಟು ಸಂಖ್ಯಾಬಲ ಸಂಸತ್ತಿನ ಉಭಯ ಸದನಗಳಲ್ಲಿ ಇದೆ.
ಉಪ ರಾಷ್ಟ್ಪಪತಿ ಆಯ್ಕೆ ಚುನಾವಣೆ ಹೇಗೆ ನಡೆಯುತ್ತದೆ ಎಂದು ನೋಡಿದರೆ, ಉಪ ರಾಷ್ಟ್ರಪತಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ, ಅಲ್ಲಿ ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ತಮ್ಮ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
543 ಸದಸ್ಯ ಬಲದ ಲೋಕಸಭೆಯಲ್ಲಿ ಒಂದು ಸ್ಥಾನ ಖಾಲಿ ಇದೆ - ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರ. 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಐದು ಸ್ಥಾನಗಳು ಖಾಲಿ ಇವೆ.
ರಾಜ್ಯಸಭೆಯಲ್ಲಿ ಖಾಲಿ ಇರುವ ಐದು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳು ಜಮ್ಮು ಮತ್ತು ಕಾಶ್ಮೀರದಿಂದ ಮತ್ತು ಒಂದು ಸ್ಥಾನ ಪಂಜಾಬ್‌ನಿಂದ ಬಂದಿದ್ದು, ಕಳೆದ ತಿಂಗಳು ನಡೆದ ಉಪ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ನಂತರ ಹಾಲಿ ಸದಸ್ಯ ಸಂಜೀವ್ ಅರೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಎರಡೂ ಸದನಗಳ ಪರಿಣಾಮಕಾರಿ ಬಲ 786 ಆಗಿದ್ದು, ಉಪ ರಾಷ್ಟ್ರಪತಿಗಳ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಯು 394 ಮತಗಳನ್ನು ಗೆಲ್ಲಬೇಕಾಗುತ್ತದೆ, ಎಲ್ಲಾ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದನ್ನು ಪರಿಗಣಿಸಬೇಕಾಗುತ್ತದೆ.
ಲೋಕಸಭೆಯಲ್ಲಿ, ಭಾರತೀಯ ಜನತಾ ಪಕ್ಷ ನೇತೃತ್ವದ NDA 542 ಸದಸ್ಯರ ಸದನದಲ್ಲಿ 293 ಸದಸ್ಯರ ಬೆಂಬಲವನ್ನು ಹೊಂದಿದೆ.
ನಾಮನಿರ್ದೇಶಿತ ಸದಸ್ಯರು ಎನ್ ಡಿಎ ನಾಮನಿರ್ದೇಶಿತರಿಗೆ ಬೆಂಬಲವಾಗಿ ಮತ ಚಲಾಯಿಸಿದರೆ, ಆಡಳಿತ ಮೈತ್ರಿಕೂಟವು 240 ಸದಸ್ಯರ ಪರಿಣಾಮಕಾರಿ ಬಲವನ್ನು ಹೊಂದಿರುವ ರಾಜ್ಯಸಭೆಯಲ್ಲಿ 129 ಸದಸ್ಯರ ಬೆಂಬಲವನ್ನು ಹೊಂದಿದೆ.
ಆಡಳಿತ ಮೈತ್ರಿಕೂಟವು 786 ಸದಸ್ಯರಲ್ಲಿ 422 ಸದಸ್ಯರ ಬೆಂಬಲವನ್ನು ಹೊಂದಿದೆ, ಇದು ಎರಡೂ ಸದನಗಳ ಸಂಯೋಜಿತ ಬಲವಾಗಿದೆ.
ಸಂವಿಧಾನದ 68 ನೇ ವಿಧಿಯ ಷರತ್ತು 2 ರ ಪ್ರಕಾರ, ಉಪ ರಾಷ್ಟ್ರಪತಿಗಳ ನಿಧನ, ರಾಜೀನಾಮೆ ಅಥವಾ ಪದಚ್ಯುತಿಗೆ ಸಂಬಂಧಿಸಿದಂತೆ ಅಥವಾ ಇನ್ಯಾವುದೇ ಕಾರಣದಿಂದ ಉಂಟಾಗುವ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಚುನಾವಣೆಯನ್ನು ಸಾಧ್ಯವಾದಷ್ಟು ಬೇಗ ನಡೆಸಲಾಗುತ್ತದೆ.
ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಆಯ್ಕೆಯಾದ ವ್ಯಕ್ತಿಯು "ವರು ತಮ್ಮ ಹುದ್ದೆಯನ್ನು ವಹಿಸಿಕೊಂಡ ದಿನಾಂಕದಿಂದ ಐದು ವರ್ಷಗಳ ಪೂರ್ಣ ಅವಧಿಗೆ ಅಧಿಕಾರ ಹೊಂದಿರುತ್ತಾರೆ.
ಸಂವಿಧಾನದ 66 (1) ನೇ ವಿಧಿಯು ಏಕ ವರ್ಗಾವಣೆ ಮಾಡಬಹುದಾದ ಮತದ ಮೂಲಕ ಅನುಪಾತ ಪ್ರಾತಿನಿಧ್ಯ ವ್ಯವಸ್ಥೆಯ ಅನುಸಾರವಾಗಿ ಚುನಾವಣೆಯನ್ನು ನಡೆಸಬೇಕು ಮತ್ತು ಅಂತಹ ಚುನಾವಣೆಯಲ್ಲಿ ಮತದಾನವು ರಹಸ್ಯ ಮತದಾನದ ಮೂಲಕವಾಗಿರುತ್ತದೆ.
ಈ ವ್ಯವಸ್ಥೆಯಲ್ಲಿ, ಮತದಾರರು ಅಭ್ಯರ್ಥಿಗಳ ಹೆಸರಿನ ವಿರುದ್ಧ ಆದ್ಯತೆಗಳನ್ನು ಗುರುತಿಸಬೇಕಾಗುತ್ತದೆ. ಉಪ ರಾಷ್ಟ್ರಪತಿಗಳು ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುತ್ತಾರೆ. ಅವರು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ, ಆದರೆ ಅವಧಿ ಮುಗಿದರೂ, ಉತ್ತರಾಧಿಕಾರಿ ಅಧಿಕಾರ ವಹಿಸಿಕೊಳ್ಳುವವರೆಗೆ ಅಧಿಕಾರದಲ್ಲಿ ಮುಂದುವರಿಯಬಹುದು.
ಧಂಖರ್ ಸೋಮವಾರ ಸಂಜೆ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಉಪ ರಾಷ್ಟ್ರಪತಿಗಳ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.