ಇಂಡಿಗೋ ವಿಮಾನ (ಸಂಗ್ರಹ ಚಿತ್ರ) 
ದೇಶ

ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಕೊನೆ ಕ್ಷಣದಲ್ಲಿ ಟೇಕ್ ಆಫ್ ರದ್ದು; ರನ್‌ವೇಯಲ್ಲೇ ನಿಲ್ಲಿಸಿದ ಪೈಲಟ್!

ಅಹಮದಾಬಾದ್‌ನಿಂದ ಡಿಯುಗೆ ಕಾರ್ಯನಿರ್ವಹಿಸುತ್ತಿದ್ದ ಇಂಡಿಗೋ ವಿಮಾನ 6E7966 ರಲ್ಲಿ ಟೇಕ್-ಆಫ್ ಆಗುವ ಸ್ವಲ್ಪ ಮೊದಲು ತಾಂತ್ರಿಕ ದೋಷದ ಸೂಚನೆ ಕಂಡುಬಂದಿದೆ ಎಂದು ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.

ಅಹಮದಾಬಾದ್: ಸುಮಾರು 50 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಅಹಮದಾಬಾದ್‌ನಿಂದ ಡಿಯುಗೆ ಹೊರಟಿದ್ದ ಇಂಡಿಗೋ ವಿಮಾನ ಬುಧವಾರ ಕೊನೆ ಕ್ಷಣದಲ್ಲಿ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಅನ್ನು ರದ್ದುಗೊಳಿಸಿತು ಎಂದು ಮೂಲಗಳು ತಿಳಿಸಿವೆ.

ವೇಳಾಪಟ್ಟಿಯ ಪ್ರಕಾರ, ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 11.15ಕ್ಕೆ ಹೊರಡಬೇಕಿತ್ತು ಎಂದು ಅವರು ಹೇಳಿದರು.

ಪೈಲಟ್ ರನ್‌ವೇಯಲ್ಲಿ ಅದನ್ನು ನಿಲ್ಲಿಸಲು ನಿರ್ಧರಿಸಿದಾಗ ವಿಮಾನವು ಟೇಕ್-ಆಫ್ ರೋಲ್ ಹಂತದಲ್ಲಿತ್ತು.

"ಜುಲೈ 23 ರಂದು ಅಹಮದಾಬಾದ್‌ನಿಂದ ಡಿಯುಗೆ ಕಾರ್ಯನಿರ್ವಹಿಸುತ್ತಿದ್ದ ಇಂಡಿಗೋ ವಿಮಾನ 6E7966 ರಲ್ಲಿ ಟೇಕ್-ಆಫ್ ಆಗುವ ಸ್ವಲ್ಪ ಮೊದಲು ತಾಂತ್ರಿಕ ದೋಷದ ಸೂಚನೆ ಕಂಡುಬಂದಿದೆ" ಎಂದು ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಸರಿಸಿ, ಪೈಲಟ್‌ಗಳು ಅಧಿಕಾರಿಗಳಿಗೆ ಮಾಹಿತಿ ನೀಡಿ ವಿಮಾನವನ್ನು ಬೇಗೆ ಹಿಂತಿರುಗಿಸಿದರು ಎಂದು ಇಂಡಿಯಾ ಹೇಳಿದೆ.

ಕಾರ್ಯಾಚರಣೆಯನ್ನು ಪುನರಾರಂಭಿಸುವ ಮೊದಲು ವಿಮಾನವನ್ನು ಅಗತ್ಯ ಪರಿಶೀಲನೆ ಮತ್ತು ನಿರ್ವಹಣೆಗೆ ಒಳಪಡಿಸಲಾಗುತ್ತಿದೆ ಎಂದು ಇಂಡಿಯೋ ತಿಳಿಸಿದೆ.

ಮುಂದಿನ ಲಭ್ಯವಿರುವ ವಿಮಾನದಲ್ಲಿ ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವುದಾಗಿ ಅಥವಾ ಅವರ ಆದ್ಯತೆಯ ಪ್ರಕಾರ ರದ್ದತಿಯ ವಿರುದ್ಧ ಪೂರ್ಣ ಮರುಪಾವತಿಯನ್ನು ನೀಡುವುದಾಗಿ ವಿಮಾನಯಾನ ಸಂಸ್ಥೆ ಹೇಳಿದೆ.

ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಇಂಡಿಗೋ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್