ಭದ್ರತಾ ಪಡೆಗಳ ಮುಂದೆ ಶರಣಾದ ನಕ್ಸಲೀಯರು 
ದೇಶ

Chhattisgarh: 2.27 ಕೋಟಿ ರೂ ಬಹುಮಾನ ಘೋಷಿಸಲ್ಪಟ್ಟ 49 ಮಂದಿ ಸೇರಿದಂತೆ 66 ನಕ್ಸಲರು ಶರಣಾಗತಿ

ಛತ್ತೀಸ್ ಗಢ ಸರ್ಕಾರದ ದೂರದ ಹಳ್ಳಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವ 'ನಿಯಾದ್ ನೆಲ್ಲನಾರ್' ಯೋಜನೆ ಮತ್ತು ಶರಣಾದ ನಕ್ಸಲೀಯರಿಗೆ ಪುನರ್ವಸತಿ ನೀತಿಯಿಂದ ಪ್ರಭಾವಿತರಾಗಿ ಶರಣಾಗಿರುವುದಾಗಿ ನಕ್ಸಲೀಯರು ಹೇಳಿಕೊಂಡಿದ್ದಾರೆ.

ಬಸ್ತಾರ್: ಛತ್ತೀಸ್‌ಗಢದ ಬಸ್ತಾರ್ ವಿಭಾಗದ ಐದು ಜಿಲ್ಲೆಗಳಲ್ಲಿ ಒಟ್ಟು 2.27 ಕೋಟಿ ಬಹುಮಾನ ಘೋಷಿಸಲ್ಪಟ್ಟ 49 ಮಂದಿ ಸೇರಿದಂತೆ ಒಟ್ಟು 66 ನಕ್ಸಲೀಯರು ಗುರುವಾರ ಶರಣಾಗಿದ್ದಾರೆ.

ಬಿಜಾಪುರದಲ್ಲಿ 25 ನಕ್ಸಲೀಯರು, ದಾಂತೇವಾಡದಲ್ಲಿ 15, ಕಾಂಕೇರ್‌ನಲ್ಲಿ 13, ನಾರಾಯಣಪುರದಲ್ಲಿ ಎಂಟು ಮತ್ತು ಸುಕ್ಮಾದಲ್ಲಿ ಐದು ಮಂದಿ ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿದ್ದಾರೆ. ಇವರಲ್ಲಿ 27 ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೊಳ್ಳು ನಕ್ಸಲ್ ಸಿದ್ದಾಂತ, ಅಮಾಯಕ ಬುಡಕಟ್ಟು ಜನರ ಮೇಲೆ ನಕ್ಸಲೀಯರು ನಡೆಸುತ್ತಿರುವ ದೌರ್ಜನ್ಯ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ನಿರಾಶೆ ವ್ಯಕ್ತಪಡಿಸಿ ಹಿರಿಯ ಪೊಲೀಸ್, ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಗಡಿ ಭದ್ರತಾ ಪಡೆ (BSF) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ಸಿಬ್ಬಂದಿ ಮುಂದೆ ನಕ್ಸಲೀಯರು ಶರಣಾಗಿದ್ದಾರೆ.

ಛತ್ತೀಸ್ ಗಢ ಸರ್ಕಾರದ ದೂರದ ಹಳ್ಳಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವ 'ನಿಯಾದ್ ನೆಲ್ಲನಾರ್' ಯೋಜನೆ ಮತ್ತು ಶರಣಾದ ನಕ್ಸಲೀಯರಿಗೆ ಪುನರ್ವಸತಿ ನೀತಿಯಿಂದ ಪ್ರಭಾವಿತರಾಗಿ ಶರಣಾಗಿರುವುದಾಗಿ ನಕ್ಸಲೀಯರು ಹೇಳಿಕೊಂಡಿದ್ದಾರೆ.

ಬಿಜಾಪುರದಲ್ಲಿ ಶರಣಾದ 25 ನಕ್ಸಲೀಯರಲ್ಲಿ 23 ಮಂದಿಗೆ ರೂ. 1.15 ಕೋಟಿ ಬಹುಮಾನ ಘೋಷಿಸಲಾಗಿತ್ತು ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ.

ದಾಂತೇವಾಡದಲ್ಲಿ ಶರಣಾದ 15 ನಕ್ಸಲೀಯರಲ್ಲಿ ಐವರಿಗೆ ರೂ. 17 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ದಾಂತೇವಾಡ ಹೆಚ್ಚುವರಿ ಎಸ್ ಪಿ ಉದಿತ್ ಪುಷ್ಕರ್ ಹೇಳಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೂ 1,020 ನಕ್ಸಲೀಯರು ಜಿಲ್ಲೆಯಲ್ಲಿ ಹಿಂಸಾಚಾರ ತೊರೆದಿದ್ದಾರೆ ಎಂದು ಅವರು ಹೇಳಿದರು.

ಕಾಂಕೇರ್ ನಲ್ಲಿ 13, ನಾರಾಯಣಪುರದಲ್ಲಿ 8 ಮತ್ತು ಸುಕ್ಮಾದಲ್ಲಿ 5 ಮಂದಿ ನಕ್ಸಲೀಯರು ಶರಣಾಗಿದ್ದಾರೆ. ಅವರೆಲ್ಲರಿಗೂ ತಲಾ ರೂ. 50,000 ಆರ್ಥಿಕ ನೆರವು ನೀಡಲಾಗುವುದು ಹಾಗೂ ರಾಜ್ಯ ಸರ್ಕಾರದ ಪುನರ್ವಸತಿ ನೀತಿಯಡಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!