ಜ್ಯೋತಿಷಾ ದಾಸ್  
ದೇಶ

ನಕಲಿ ಬಿಲ್​​​ ಪಾಸ್​ ಮಾಡಲು ಒತ್ತಡ: ಅಧಿಕಾರಿಗಳ ಹೆಸರು ಬರೆದಿಟ್ಟು ಸರ್ಕಾರಿ ಇಂಜಿನಿಯರ್ ಸಾವಿಗೆ ಶರಣು

ನಕಲಿ ಬಿಲ್‌ಗಳನ್ನು ಪಾಸ್​ ಮಾಡಲು ಹಿರಿಯ ಅಧಿಕಾರಿಗಳು ತೀವ್ರ ಒತ್ತಡ ಹೇರಿದ್ದರಿಂದ ಸಾವಿಗೆ ಶರಣಾಗಿರುವುದಾಗಿ ಜ್ಯೋತಿಷಾ ಬರೆದಿದ್ದಾರೆ ಎನ್ನಲಾದ ಕೈಬರಹದ ಡೆತ್​ನೋಟ್​ ಪತ್ತೆಯಾಗಿದೆ.

ಅಸ್ಸಾಂ: ಅಸ್ಸಾಂ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಕೆಲಸ ಮಾಡುತ್ತಿದ್ದ 30 ವರ್ಷದ ಸಹಾಯಕ ಎಂಜಿನಿಯರ್ ಮಂಗಳವಾರ ಮಧ್ಯಾಹ್ನ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತರನ್ನು ಜ್ಯೋತಿಷಾ ದಾಸ್​ (30) ಎಂದು ಗುರುತಿಸಲಾಗಿದೆ. ಇವರು ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ (ಜುಲೈ 22) ಮಧ್ಯಾಹ್ನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನಕಲಿ ಬಿಲ್‌ಗಳನ್ನು ಪಾಸ್​ ಮಾಡಲು ಹಿರಿಯ ಅಧಿಕಾರಿಗಳು ತೀವ್ರ ಒತ್ತಡ ಹೇರಿದ್ದರಿಂದ ಸಾವಿಗೆ ಶರಣಾಗಿರುವುದಾಗಿ ಜ್ಯೋತಿಷಾ ಬರೆದಿದ್ದಾರೆ ಎನ್ನಲಾದ ಕೈಬರಹದ ಡೆತ್​ನೋಟ್​ ಪೊಲೀಸರಿಗೆ ಆಕೆಯ ಮನೆಯಲ್ಲಿ ಪತ್ತೆಯಾಗಿದೆ. ಅದರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಬ್ಬರು ಹಿರಿಯ ಅಧಿಕಾರಿಗಳ ಹೆಸರನ್ನು ಮಹಿಳೆ ಹೆಸರಿಸಿದ್ದಾರೆ.

ಅಪೂರ್ಣಗೊಂಡ ಕೆಲಸದ ಬಿಲ್‌ಗಳನ್ನು ಪಾಸ್​ ಮಾಡುವಂತೆ ಇಬ್ಬರು ಹಿರಿಯ ಅಧಿಕಾರಿಗಳು ನಿರಂತರ ಒತ್ತಡ ಹೇರಿದರು. ಇದರಿಂದಾಗಿ ನಾನು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ. ನನ್ನ ಕೆಲಸದ ಒತ್ತಡದಿಂದಾಗಿ ನಾನು ಈ ಹೆಜ್ಜೆ ಇಡುತ್ತಿದ್ದೇನೆ. ಕಚೇರಿಯಲ್ಲಿ ನನಗೆ ಮಾರ್ಗದರ್ಶನ ನೀಡಲು ಯಾರೂ ಇಲ್ಲ. ನಾನು ದಣಿದಿದ್ದೇನೆ. ನನ್ನ ಹೆತ್ತವರು ನನಗಾಗಿ ಚಿಂತಿತರಾಗಿದ್ದಾರೆ ಎಂದು ಡೆತ್​ನೋಟ್​ನಲ್ಲಿ ಇಂಜಿನಿಯರ್ ಆರೋಪಿಸಿದ್ದಾರೆ.

ಜ್ಯೋತಿಷಾ ಅವರ ಕುಟುಂಬವು ಪೊಲೀಸ್ ದೂರು ದಾಖಲಿಸಿದ್ದು, ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ.

ಡೆತ್​ನೋಟ್​ ಆಧಾರದ ಮೇಲೆ, ಇತ್ತೀಚೆಗೆ ಬಡ್ತಿ ಪಡೆದ ಸೂಪರಿಂಟೆಂಡೆಂಟ್ ಇಂಜಿನಿಯರ್ ಹಾಗೂ ಈ ಹಿಂದೆ ಬೊಂಗೈಗಾಂವ್‌ನಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ದಿನೇಶ್ ಮೇಧಿ ಶರ್ಮಾ ಮತ್ತು ಪ್ರಸ್ತುತ ಬೊಂಗೈಗಾಂವ್‌ನಲ್ಲಿ ನಿಯೋಜನೆಗೊಂಡಿರುವ ಉಪ-ವಿಭಾಗೀಯ ಅಧಿಕಾರಿ (ಎಸ್‌ಡಿಒ) ಅಮೀನುಲ್ ಇಸ್ಲಾಂ ಅವರನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವಿವರವಾದ ತನಿಖೆಗೆ ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಮತ್ತು ಚೀನಾ 'ಸ್ನೇಹಿತರಾಗಿರುವುದೇ' ಸರಿಯಾದ ಆಯ್ಕೆ: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

Dharmasthala Case: NIA ತನಿಖೆ ಅಗತ್ಯವಿಲ್ಲ, SITಗೆ ಸ್ವಾತಂತ್ರ್ಯ ನೀಡಲಾಗಿದೆ; ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್‌ನಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆ; ಪ್ರವಾಹ, ಭೂಕುಸಿತದ ಬಗ್ಗೆ IMD ಎಚ್ಚರಿಕೆ

ಆಪರೇಷನ್ ಸಿಂಧೂರ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ? ಕಾಂಗ್ರೆಸ್

ಬೆಂಗಳೂರು: ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ BMTC ಬಸ್ ಕಂಡೆಕ್ಟರ್; ನೆಟ್ಟಿಗರು ಆಕ್ರೋಶ, Video!

SCROLL FOR NEXT