ಸುಪ್ರೀಂ ಕೋರ್ಟ್ 
ದೇಶ

ಮುಂಬೈ ರೈಲು ಸರಣಿ ಸ್ಫೋಟ ಪ್ರಕರಣ: 12 ಆರೋಪಿಗಳ ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್​ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

2006ರ ಮುಂಬೈ ರೈಲು ಸ್ಫೋಟ ಪ್ರಕರಣದ ಎಲ್ಲ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ನವದೆಹಲಿ: 2006ರ ಜುಲೈ 11ರಂದು ಮುಂಬೈನ ಲೋಕಲ್ ರೈಲುಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.

ಆದಾಗ್ಯೂ, 12 ಜನರನ್ನು ಮತ್ತೆ ಜೈಲಿಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದ ನ್ಯಾಯಾಲಯ, ಭವಿಷ್ಯದ ಪ್ರಕರಣಗಳಲ್ಲಿ ಹೈಕೋರ್ಟ್ ತೀರ್ಪನ್ನು ಪೂರ್ವನಿದರ್ಶನವಾಗಿ ಪರಿಗಣಿಸಬಾರದು ಎಂದು ಒತ್ತಿ ಹೇಳಿದೆ.

ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ಪ್ರಕರಣದ ಎಲ್ಲ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿಯ ಕುರಿತು ಅವರ ಪ್ರತಿಕ್ರಿಯೆ ಕೋರಿದೆ.

'ಎಲ್ಲ ಪ್ರತಿವಾದಿಗಳನ್ನು ಈಗಾಗಲೇ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಮತ್ತು ಅವರನ್ನು ಮತ್ತೆ ಜೈಲಿಗೆ ಕರೆತರುವ ಪ್ರಶ್ನೆಯೇ ಇಲ್ಲ. ಆದಾಗ್ಯೂ, ಕಾನೂನಿನ ಪ್ರಶ್ನೆಗೆ ಸಂಬಂಧಿಸಿದಂತೆ ಸಾಲಿಸಿಟರ್ ಜನರಲ್ ಮಾಡಿದ ವಾದವನ್ನು ಗಮನಿಸಿ, ಆಕ್ಷೇಪಾರ್ಹ ತೀರ್ಪನ್ನು ಪೂರ್ವನಿದರ್ಶನವೆಂದು ಪರಿಗಣಿಸಬಾರದು ಎಂದು ನಾವು ಹೇಳುತ್ತೇವೆ. ಆ ಮಟ್ಟಿಗೆ, ಆಕ್ಷೇಪಾರ್ಹ ತೀರ್ಪಿಗೆ ತಡೆ ನೀಡಲಾಗುವುದು' ಎಂದು ಪೀಠ ಹೇಳಿದೆ.

ಮಹಾರಾಷ್ಟ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದ ಎಲ್ಲ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್

ಬಾಂಬೆ ಹೈಕೋರ್ಟ್‌ನ ಅನಿಲ್ ಕಿಲೊರ್ ಹಾಗೂ ಶ್ಯಾಮ್ ಚಾಂದಕ್ ನೇತೃತ್ವದ ನ್ಯಾಯಪೀಠವು, ಆರೋಪಿಗಳೆಲ್ಲರೂ ಅಪರಾಧ ಎಸಗಿದ್ದಾರೆ ಎಂದು ನಂಬಲು ಕಷ್ಟವಾಗಿತ್ತು. ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಎಲ್ಲ 12 ಆರೋಪಿಗಳನ್ನು ದೋಷಮುಕ್ತಗೊಳಿಸಿ ಸೋಮವಾರ ತೀರ್ಪು ನೀಡಿದೆ.

ಅಪರಾಧ ಕೃತ್ಯಕ್ಕೆ ಬಳಸಿದ್ದ ಬಾಂಬ್ ಮಾದರಿಗಳನ್ನು ಮುಂದಿಡಲು ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ. ಈಗ ಪ್ರಸ್ತುತಪಡಿಸಿರುವ ಸಾಕ್ಷ್ಯಗಳು ಆರೋಪಿಗಳನ್ನು ಶಿಕ್ಷಿಸಲು ನಿರ್ಣಾಯಕವಾಗಿಲ್ಲ. ಸಾಕ್ಷಿ ಹೇಳಿಕೆಗಳು ಹಾಗೂ ಆರಾಪಿಗಳಿಂದ ವಶಕ್ಕೆ ಪಡೆಯಲಾದ ವಸ್ತುಗಳಿಗೂ ಸಾಕ್ಷ್ಯದ ಮೌಲ್ಯವಿಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

12 ಜನರಲ್ಲಿ, ವಿಶೇಷ ನ್ಯಾಯಾಲಯವು ಐವರಿಗೆ ಮರಣದಂಡನೆ ಮತ್ತು ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳಲ್ಲಿ ಒಬ್ಬರು 2021 ರಲ್ಲಿ ನಿಧನರಾದರು.

2006ರ ಜುಲೈ 11 ರಂದು ಮುಂಬೈ ಲೋಕಲ್ ರೈಲುಗಳಲ್ಲಿ ವಿವಿಧ ಸ್ಥಳಗಳಲ್ಲಿ ನಡೆದ ಏಳು ಬಾಂಬ್ ಸ್ಫೋಟಗಳಲ್ಲಿ 180ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು ಮತ್ತು ನೂರಾರು ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲಿಸಿ, ಎನ್‌ಐಎ ತನಿಖೆಗೆ ವಹಿಸಿ: ಆರ್‌. ಅಶೋಕ ಆಗ್ರಹ

ಕೋಗಿಲು ಲೇಔಟ್ ತೆರವು: ಬಿಜೆಪಿ 'ಸತ್ಯ ಶೋಧನಾ ಸಮಿತಿ' ರಚನೆ, 'ಮಿನಿ ಬಾಂಗ್ಲಾದೇಶ' ಕುರಿತು ವರದಿ!

ಕೊಯಮತ್ತೂರು: ತಮಿಳು ಮಾತನಾಡದಿದ್ದಕ್ಕೆ ವಲಸೆ ಕಾರ್ಮಿಕನಿಗೆ ಚಾಕು ಇರಿತ; ಆರೋಪಿಗಳಿಗೆ ಹುಡುಕಾಟ

Video: ಹಿಂದೂ ದೇವರಿಗೆ 'ಅವಮಾನ': ಹೈದರಾಬಾದ್ ಯೂಟ್ಯೂಬರ್ Anvesh ವಿರುದ್ಧ ಪೊಲೀಸ್ ದೂರು, ಕಾರಣ ನಟ ಶಿವಾಜಿ!

SCROLL FOR NEXT