ತೇಜಸ್ವಿ ಯಾದವ್ 
ದೇಶ

SIR ಖಂಡಿಸಿ ಬಿಹಾರ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು RJD ಮುಂದು!

ರಾಜ್ಯ ವಿಧಾನಸಭೆಯ ಹೊರಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು, ಚುನಾವಣಾ ಆಯೋಗವು ಸರ್ಕಾರದ "ರಾಜಕೀಯ ಸಾಧನ" ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಪಾಟ್ನಾ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯನ್ನು ಖಂಡಿಸಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವುದು ನಮ್ಮ ಮುಂದಿನ ಆಯ್ಕೆಯಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಗುರುವಾರ ಹೇಳಿದ್ದಾರೆ.

ಮಳೆಗಾಲದ ಅಧಿವೇಶನದ ಕೊನೆಯ ದಿನದಂದು ರಾಜ್ಯ ವಿಧಾನಸಭೆಯ ಹೊರಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು, ಚುನಾವಣಾ ಆಯೋಗವು ಸರ್ಕಾರದ "ರಾಜಕೀಯ ಸಾಧನ" ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಚುನಾವಣಾ ಆಯೋಗವು ಉದ್ದೇಶಪೂರ್ವಕವಾಗಿಯೇ ಪ್ರತಿಪಕ್ಷವನ್ನು, ವಿಶೇಷವಾಗಿ ರಾಷ್ಟ್ರೀಯ ಜನತಾ ದಳವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಆರ್ ಜೆಡಿ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ತೆಗೆದು ಹಾಕಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ವಿಶೇಷ ಸಮಗ್ರ ಮತ ಪರಿಷ್ಕರಣೆ ಅನ್ನೋದು ಪಿತೂರಿ. ಸಾಂಪ್ರದಾಯಿಕ ರಾಷ್ಟ್ರೀಯ ಜನತಾ ದಳದ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಹೀಗೆ ಮಾಡುವ ಮೂಲಕ ಭಾರತೀಯ ಚುನಾವಣಾ ಆಯೋಗವು ಆಡಳಿ­ತಾ­ರೂಢ ಪಕ್ಷದ ಅಣತಿಯಂತೆ ಕಾರ್ಯ­ನಿರ್ವಹಿಸುತ್ತಿದೆ ಎಂಬ ಅನುಮಾನ ಮೂಡಿದೆ. ಈ ಬಗ್ಗೆ ಅಧಿವೇಶನದಲ್ಲಿಯೂ ಚರ್ಚಿಸಲಾಗಿದೆ. ನಮ್ಮ ಮತದಾರರನ್ನು ಗುರಿಯಾಗಿಸಿಕೊಂಡು ಆಯೋಗವು ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದ್ದು, ಇದನ್ನೆಲ್ಲ ನೋಡಿದರೆ ಚುನಾವಣೆ ನಡೆಸುವುದೇ ಅರ್ಥ­­ಹೀನ ಎಂದು ಅನ್ನಿಸುತ್ತದೆ ಎಂದು ತೇಜಸ್ವಿ ಯಾದವ್‌ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿಪ್ರೋ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಿ: ಅಜೀಂ ಪ್ರೇಮ್‌ಜಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ: ಅರ್ಚಕ ರಾಜು ನಿಧನ

Indian Dressing Room: ಪಾಕ್ ಪಂದ್ಯದ ಬಳಿಕ ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದ ತಿಲಕ್ ವರ್ಮಾ! ಕಾರಣವೇನು? Video ನೋಡಿ...

Israel-Hamas War: ಹಮಾಸ್ ಬಂಡುಕೋರರಿಗೆ ಖಡಕ್ ಎಚ್ಚರಿಕೆ ನೀಡಿದ ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌! ಹೇಳಿದ್ದೇನು?

ಪಾಕ್ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ ಅಕ್ಟೋಬರ್ 24 ರವರೆಗೆ ವಿಸ್ತರಿಸಿದ ಭಾರತ

SCROLL FOR NEXT