ಲೋಕಸಭೆಯ ವಿರೋಧ ಪಕ್ಷದ ನಾಯಕರಿಂದ ಪ್ರತಿಭಟನೆ 
ದೇಶ

'Bihar SIR' ಗದ್ದಲಕ್ಕೆ ಐದು ದಿನಗಳ ಸಂಸತ್ ಕಲಾಪ ಬಲಿ; ತೆರಿಗೆದಾರರ ಹಣ ವ್ಯರ್ಥ

ಸಭಾಪತಿ ಸ್ಥಾನದಲ್ಲಿದ್ದ ಬಿಜೆಪಿ ಸಂಸದ ಘನಶ್ಯಾಮ್ ತಿವಾರಿ ಅವರು ಪ್ರತಿಭಟನಾನಿರತ ಸದಸ್ಯರ ಮನವೊಲಿಸಲು ಪ್ರಯತ್ನಿಸಿದರು.

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಕುರಿತು ಚರ್ಚೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದಿಂದ ಸಂಸತ್ತಿನ ಉಭಯ ಸದನಗಳ ಐದನೇ ದಿನದ ಕಲಾಪವೂ ಬಲಿಯಾಗಿದ್ದು, ತೆರಿಗೆದಾರರ ನೂರಾರು ಕೋಟಿ ರೂಪಾಯಿ ವ್ಯರ್ಥವಾಗಿದೆ.

ಇಂದು ಲೋಕಸಭೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಕಳೆದ ಐದು ದಿನಗಳಿಂದ ನಡೆಸುತ್ತಿರುವ ಪಟ್ಟು ಮುಂದುವರಿಸಿದರು. ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪಿಸಿ ಅಡ್ಡಿಪಡಿಸಿ ನಿಯಮದ ಪ್ರಕಾರ ಕಲಾಪ ನಡೆಯಲಿ ಎನ್ನುತ್ತಿದ್ದಂತೆ ಮತ್ತೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಗದ್ದಲ ಕೋಲಾಹಲ, ಆರೋಪ, ಪ್ರತ್ಯಾರೋಪ ತಾರಕಕ್ಕೇರಿತು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಶುಕ್ರವಾರವೂ ಪ್ರತಿಭಟನೆ ನಡೆಸಿದ್ದರಿಂದ ಉಭಯ ಸದನಗಳ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಮಧ್ಯಾಹ್ನ ಸಭೆ ಸೇರಿದಾಗ, ಬಿಜೆಪಿ ಸಂಸದ ಕೆ. ಲಕ್ಷ್ಮಣ್ ಚರ್ಚೆಯನ್ನು ಆರಂಭಿಸಿದರು. ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಂದ ವಿಕ್ಷಿತ್ ಕೃಷಿ ಸಂಕಲ್ಪ ಅಭಿಯಾನದ ವಿವರಗಳನ್ನು ತಿಳಿದುಕೊಳ್ಳಲು ಬಯಸಿದ್ದರು.

ಆದರೆ ಚೌಹಾಣ್ ಮಾತನಾಡಲು ಆರಂಭಿಸುತ್ತಿದ್ದಂತೆ ವಿರೋಧ ಪಕ್ಷದ ಸಂಸದರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು ಮತ್ತು SIR ಪ್ರಕ್ರಿಯೆ ನಿಲ್ಲಿಸಬೇಕೆಂದು ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದು ಮುಖ್ಯವಾದ ಮತ್ತು ರೈತರು ಹಾಗೂ ಮಹಿಳೆಯರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಶ್ನೆಯಾಗಿರುವುದರಿಂದ ನಾನು ಉತ್ತರಿಸಲು ಬಯಸುತ್ತೇನೆ ಎಂದು ಚೌಹಾಣ್ ಹೇಳಿದರು. ಆದರೆ ವಿರೋಧ ಪಕ್ಷಗಳು ಸಚಿವ ಮಾತು ಕೇಳದೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ವೈಜ್ಞಾನಿಕ ಸಂಶೋಧನೆಯ ಪ್ರಯೋಜನಗಳು ರೈತರಿಗೆ ಸರಿಯಾದ ಸಮಯದಲ್ಲಿ ತಲುಪಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಾಗಿದೆ ಮತ್ತು ಅದಕ್ಕಾಗಿಯೇ ಸರ್ಕಾರ ವಿಕ್ಷಿತ್ ಕೃಷಿ ಸಂಕಲ್ಪ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು.

ಸಭಾಪತಿ ಸ್ಥಾನದಲ್ಲಿದ್ದ ಬಿಜೆಪಿ ಸಂಸದ ಘನಶ್ಯಾಮ್ ತಿವಾರಿ ಅವರು ಪ್ರತಿಭಟನಾನಿರತ ಸದಸ್ಯರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಅವರ ಸಂಧಾನ ಯತ್ನ ವಿಫಲವಾದಾಗ, ಸೋಮವಾರ ಮತ್ತೆ ಸಭೆ ಸೇರಲು ಸದನವನ್ನು ದಿನದ ಮಟ್ಟಿಗೆ ಮುಂದೂಡಿದರು.

ಇತ್ತ, ರಾಜ್ಯಸಭೆಯಲ್ಲೂ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿಷಯದ ಚರ್ಚೆಗೆ ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದ ಕಾರಣ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಬಿಹಾರದ ಎಸ್ಐಆರ್ ಸೇರಿದಂತೆ ವಿವಿಧ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ನಡೆಸುತ್ತಿರುವ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ಆರೋಪ, ಪ್ರತ್ಯಾರೋಪದಿಂದ ಇಂದು ಸಹ ಕಲಾಪ ನಡೆಯಲಿಲ್ಲ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷದ ಸದಸ್ಯರು ದಿನದ ಎಲ್ಲಾ ಕಾರ್ಯಕಲಾಪ ಬದಿಗೊತ್ತಿ ಗಂಭೀರ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಗಿಪಟ್ಟು ಹಿಡಿದಿದ್ದಾರೆ. ಪ್ರತಿಪಕ್ಷಗಳ ಬೇಡಿಕೆಗೆ ಆಡಳಿತ ಪಕ್ಷದ ಸದ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉಭಯ ಸದನಗಳಲ್ಲಿ ಗದ್ದಲ ಮಾತಿನ ಚಕಮಕಿ ಕೋಲಾಹಲ ನಡೆದು ಕಲಾಪ ಮುಂದೂಡಿಕೆಯಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಸಾಯೋವರೆಗೂ ಜೈಲು!

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ನೌಗಮ್ ಠಾಣಾ ಸ್ಫೋಟ: ರಸಾಯನಶಾಸ್ತ್ರ ಮತ್ತು ನಿರ್ಲಕ್ಷ್ಯಗಳ ದುರಂತ ಸಂಗಮ

ಬಿಜೆಪಿಗೆ ಬಿಸಿ ತುಪ್ಪವಾದ ಚಿರಾಗ್ ಪಾಸ್ವಾನ್: ನಿತೀಶ್ ಅವರೇ ನಮ್ಮ ಸಿಎಂ; ನೂತನ ಸರ್ಕಾರ ಸೇರುತ್ತೇವೆ ಎಂದ ಕೇಂದ್ರ ಸಚಿವ! Video

SCROLL FOR NEXT