ಜಗದೀಪ್ ಧಂಖರ್  
ದೇಶ

Vice Presidential election: ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು INDIA bloc ತೀರ್ಮಾನ; ಹಳೆ ತಪ್ಪುಗಳು ಮರುಕಳಿಸದಂತೆ ಎಚ್ಚರಿಕೆ

ಭಾರತೀಯ ಜನತಾ ಪಕ್ಷ ನೇತೃತ್ವದ ಆಡಳಿತಾರೂಢ ಎನ್‌ಡಿಎ ತನ್ನ ಅಭ್ಯರ್ಥಿಯನ್ನು ದೃಢಪಡಿಸಿದ ನಂತರವೇ ಪಕ್ಷವು ತನ್ನ ಅಭ್ಯರ್ಥಿಯನ್ನು ಘೋಷಿಸುತ್ತದೆ ಎಂದು ಮೂಲಗಳು ಹೇಳುತ್ತಿವೆ.

ನವದೆಹಲಿ: ತನ್ನ ಹಿಂದಿನ ತಪ್ಪುಗಳನ್ನು ಪುನರಾವರ್ತಿಸದಿರಲು ನಿರ್ಧರಿಸಿರುವ ವಿರೋಧ ಪಕ್ಷ ಇಂಡಿಯಾ ಬ್ಲಾಕ್ ಬಣ, ಜಗದೀಪ್ ಧಂಖರ್ ಅವರ ರಾಜೀನಾಮೆಯ ನಂತರ ಮುಂಬರುವ ಉಪ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಯೋಜಿಸಿದೆ.

ಭಾರತೀಯ ಜನತಾ ಪಕ್ಷ ನೇತೃತ್ವದ ಆಡಳಿತಾರೂಢ ಎನ್‌ಡಿಎ ತನ್ನ ಅಭ್ಯರ್ಥಿಯನ್ನು ದೃಢಪಡಿಸಿದ ನಂತರವೇ ಪಕ್ಷವು ತನ್ನ ಅಭ್ಯರ್ಥಿಯನ್ನು ಘೋಷಿಸುತ್ತದೆ ಎಂದು ಮೂಲಗಳು ಹೇಳುತ್ತಿವೆ. ವಿರೋಧ ಪಕ್ಷಗಳ ನಾಯಕರ ಸಭೆಯು ಶೀಘ್ರದಲ್ಲೇ 'ಒಮ್ಮತದ ಅಭ್ಯರ್ಥಿ'ಯನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ. ಉಪ ರಾಷ್ಟ್ರಪತಿ ಹುದ್ದೆಗೆ ಆಡಳಿತ ಮೈತ್ರಿಕೂಟಕ್ಕೆ ಭಾರೀ ಪೈಪೋಟಿ ನೀಡಲು ವಿರೋಧ ಪಕ್ಷಗಳು ನಿರ್ಧರಿಸಿವೆ ಎನ್ನಲಾಗುತ್ತಿದೆ.

2022 ರಲ್ಲಿ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ, ತೃಣಮೂಲ ಕಾಂಗ್ರೆಸ್ (TMC) ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ಅವರನ್ನು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಬೆಂಬಲಿಸಲು ನಿರಾಕರಿಸಿತು. 17 ರಾಜಕೀಯ ಪಕ್ಷಗಳ ಸಭೆಯ ನಂತರ ಮಾರ್ಗರೇಟ್ ಆಳ್ವಾ ಅವರ ನಾಮಪತ್ರವನ್ನು ಅನುಮೋದಿಸಲಾಯಿತು. ಆದಾಗ್ಯೂ, ಟಿಎಂಸಿ ಸಭೆಗೆ ಹಾಜರಾಗಲಿಲ್ಲ. ಅದು ಚುನಾವಣೆಯಲ್ಲಿ ಮತದಾನದಿಂದ ದೂರವಿತ್ತು.

ಉಪ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಷಯವನ್ನು ಇಂಡಿಯಾ ಬ್ಲಾಕ್ ಸದಸ್ಯರೊಂದಿಗೆ ಚರ್ಚಿಸಲಾಗುವುದು. ಕಳೆದ ಚುನಾವಣೆಯಲ್ಲಿ ಟಿಎಂಸಿ ಮತದಾನದಿಂದ ದೂರ ಉಳಿಯಲು ನಿರ್ಧರಿಸಿದ ಪರಿಸ್ಥಿತಿ ಪುನರಾವರ್ತನೆಯಾಗಬಾರದು ಎಂದು ನಾವು ಬಯಸುತ್ತೇವೆ. ಒಗ್ಗಟ್ಟಿನಿಂದ ಆಡಳಿತ ಪಕ್ಷ ಜೊತೆ ಹೋರಾಡಬೇಕಿದೆ. ಎರಡೂ ಸದನಗಳಲ್ಲಿ, ವಿರೋಧ ಪಕ್ಷಗಳು ಉತ್ತಮ ಉಪಸ್ಥಿತಿಯನ್ನು ಹೊಂದಿವೆ; 40-60 ಅನುಪಾತವಿದೆ, ನಾವು ಹೋರಾಡಬೇಕು. ಸಾಮಾನ್ಯ ಅಭ್ಯರ್ಥಿಯ ಸುತ್ತ ಒಮ್ಮತವನ್ನು ನಿರ್ಮಿಸಲು ಪಕ್ಷವು ತನ್ನ ಮಿತ್ರಪಕ್ಷಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತದೆ ಎಂದು ಹಿರಿಯ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹೇಳುತ್ತಾರೆ.

ಸರ್ಕಾರವು ತನ್ನ ಅಭ್ಯರ್ಥಿಯನ್ನು ಘೋಷಿಸಲಿ, ನಂತರ ನಾವು ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕಲು ಕನಿಷ್ಠ 30 ಪಕ್ಷಗಳು ಒಗ್ಗೂಡಿ 2023 ರಲ್ಲಿ ಇಂಡಿಯಾ ಬ್ಲಾಕ್ ರಚಿಸಿದವು. ಲೋಕಸಭೆಯಲ್ಲಿ ಇಂಡಿಯಾ ಬ್ಲಾಕ್ 235 ಸಂಸದರನ್ನು ಹೊಂದಿದ್ದರೆ, ರಾಜ್ಯಸಭೆಯಲ್ಲಿ ಅದರ ಬಲ 78 ಆಗಿದೆ.

ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯ ನಂತರ, ಭಾರತೀಯ ಚುನಾವಣಾ ಆಯೋಗ (ECI) ಮುಂದಿನ ಉಪ ರಾಷ್ಟ್ರಪಚಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಗೃಹ ಸಚಿವಾಲಯ (MHA), ಜುಲೈ 22 ರಂದು ಗೆಜೆಟ್ ಅಧಿಸೂಚನೆಯ ಮೂಲಕ ಧಂಖರ್ ಅವರ ರಾಜೀನಾಮೆಯನ್ನು ಔಪಚಾರಿಕವಾಗಿ ತಿಳಿಸಿತು, ಇದು ಸಾಂವಿಧಾನಿಕ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಚುನಾವಣಾ ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟಿತು. ರಾಜಕೀಯ ಪಕ್ಷಗಳು ಒಂದೆರಡು ದಿನಗಳಲ್ಲಿ ಚುನಾವಣೆಗೆ ಔಪಚಾರಿಕ ವೇಳಾಪಟ್ಟಿಗೆ ಸಂಬಂಧಿಸಿದ ಅಧಿಸೂಚನೆಯನ್ನು ನಿರೀಕ್ಷಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT