ಜಾರ್ಖಂಡ್ ನಕ್ಸಲ್ ಎನ್ಕೌಂಟರ್ 
ದೇಶ

Jharkhand: 3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು!

ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು.

ರಾಂಚಿ: ಜಾರ್ಖಂಡ್‌ನಲ್ಲಿ ಶನಿವಾರ ಮುಂಜಾನೆ ನಡೆದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು. ಈ ವೇಳೆ ಇದರ ಮಾಹಿತಿ ಪಡೆದ ಭದ್ರತಾ ಪಡೆಗಳು ಗುಪ್ತಚರ ಮಾಹಿತಿಯನ್ನಾಧರಿಸಿ ದಿಢೀರ್ ದಾಳಿ ನಡೆಸಿವೆ.

ಸುಳಿವಿನ ಮೇರೆಗೆ ಜಾರ್ಖಂಡ್ ಜಾಗ್ವಾರ್ ಮತ್ತು ಗುಮ್ಲಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು. ಎರಡೂ ಕಡೆಯಿಂದ ಹಲವಾರು ಸುತ್ತಿನ ಗುಂಡುಗಳನ್ನು ಹಾರಿಸಲಾಗಿದೆ. ಈ ವೇಳೆ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ನಿಂತ ನಂತರ ಸ್ಥಳದಿಂದ ಒಂದು ಎಕೆ -47 ಮತ್ತು ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಜಾರ್ಖಂಡ್ ಪೊಲೀಸರ ಐಜಿ (ಕಾರ್ಯಾಚರಣೆ) ಮೈಕೆಲ್ ಎಸ್ ರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್