ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್​ಕೌಂಟರ್​ಗೆ ನಾಲ್ವರು ನಕ್ಸಲರು ಬಲಿ

ಇಂದು ಸಂಜೆ ಭದ್ರತಾ ಪಡೆಗಳ ತಂಡ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಿರಂತರವಾಗಿ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ರಾಯ್ಪುರ: ಛತ್ತೀಸ್‌ಗಢದ ರಾಯ್ಪುರದಿಂದ ದಕ್ಷಿಣಕ್ಕೆ ಸುಮಾರು 400 ಕಿ.ಮೀ ದೂರದಲ್ಲಿರುವ ಸಂಘರ್ಷಪೀಡಿತ ಬಿಜಾಪುರ ಜಿಲ್ಲೆಯ ನೈಋತ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇಂದು ಸಂಜೆ ಭದ್ರತಾ ಪಡೆಗಳ ತಂಡ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಿರಂತರವಾಗಿ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

“ಬಿಜಾಪುರ ಜಿಲ್ಲೆಯ ನಿರ್ದಿಷ್ಟ ಸ್ಥಳದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಸಂಜೆ ಗುಂಡಿನ ಚಕಮಕಿ ನಡೆಯಿತು. ಇಲ್ಲಿಯವರೆಗೆ, ಎನ್‌ಕೌಂಟರ್ ಸ್ಥಳದಿಂದ ಐಎನ್‌ಎಸ್‌ಎಎಸ್ ಅಸಾಲ್ಟ್ ರೈಫಲ್, ಸ್ವಯಂ-ಲೋಡಿಂಗ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳ ಜೊತೆಗೆ ನಾಲ್ಕು ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಬಸ್ತಾರ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರರಾಜ್ ಪಿ ಅವರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ನಡೆಯುತ್ತಿರುವುದರಿಂದ, ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚಿನ ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಳ್ಳಲಾಗಿಲ್ಲ.

ಕಳೆದ 18 ತಿಂಗಳಲ್ಲಿ, ಬಸ್ತಾರ್ ಶ್ರೇಣಿಯಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ 425 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT