ಸಾಂದರ್ಭಿಕ ಚಿತ್ರ  
ದೇಶ

Operation Shivshakti: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ

ಇಂದು ನಸುಕಿನ ಜಾವ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿರುವುದಾಗಿ ತಿಳಿಸಿದೆ.

ಶ್ರೀನಗರ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭಯೋತ್ಪಾದಕರು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.

ಇಂದು ನಸುಕಿನ ಜಾವ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿರುವುದಾಗಿ ತಿಳಿಸಿದೆ.

ಪೂಂಚ್ ಸೆಕ್ಟರ್‌ನ ಜನರಲ್ ಪ್ರದೇಶದಲ್ಲಿ ಬೇಲಿಯ ಉದ್ದಕ್ಕೂ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನಗಳು ಗಮನಕ್ಕೆ ಬಂದಿವೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿತ್ತು.

ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಮಾಧ್ಯಮಗಳಿಗೆ ಸುದ್ದಿಯನ್ನು ಖಚಿತಪಡಿಸಿ, ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಭಾರತಕ್ಕೆ ನುಸುಳಿದ್ದ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ತಿಳಿಸಿದ್ದಾರೆ.

ಪೂಂಚ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 26 ಅಮಾಯಕರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಭಯೋತ್ಪಾದಕರು ಶ್ರೀನಗರ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಎರಡು ದಿನಗಳ ನಂತರ ಪೂಂಚ್‌ನಲ್ಲಿ ಈ ಎನ್‌ಕೌಂಟರ್ ನಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಸಂಸತ್ತಿನಲ್ಲಿ ಆಪರೇಷನ್ ಸಿಂದೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ, ಆಪರೇಷನ್ ಮಹಾದೇವ್‌ನಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರು - ಸುಲೇಮಾನ್, ಅಫ್ಘಾನಿ ಮತ್ತು ಜಿಬ್ರಾನ್ - ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಅಮಾಯಕರನ್ನು ಕ್ರೂರವಾಗಿ ಗುಂಡಿಕ್ಕಿ ಕೊಂದ ಕೊಲೆಗಾರರು ಎಂದು ಹೇಳಿದ್ದರು.

ಈ ಮೂವರು ಭಯೋತ್ಪಾದಕರು ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಸರ್ಕಾರ ಹೇಗೆ ದೃಢಪಡಿಸಿತು ಎಂಬುದನ್ನು ವಿವರಿಸಿದ ಗೃಹ ಸಚಿವರು, ಈ ಭಯೋತ್ಪಾದಕರಿಗೆ ಆಶ್ರಯ ನೀಡಿದವರನ್ನು NIA ಮೊದಲೇ ಬಂಧಿಸಿತು. ಅವರ ಶವಗಳನ್ನು ಶ್ರೀನಗರಕ್ಕೆ ತಂದಾಗ, ಶವಗಳನ್ನು ಗುರುತಿಸಲು ನಾವು ಅವರಿಂದ ಸಹಾಯ ಪಡೆದುಕೊಂಡೆವು ಎಂದರು.

ಹೆಚ್ಚಿನ ದೃಢೀಕರಣಕ್ಕಾಗಿ, ಪಹಲ್ಗಾಮ್ ದಾಳಿ ಸ್ಥಳದಿಂದ ವಶಪಡಿಸಿಕೊಳ್ಳಲಾದ ಗುಂಡು ಚಿಪ್ಪುಗಳ ವಿಧಿವಿಜ್ಞಾನ ವರದಿಗಳನ್ನು ಬಳಸಲಾಗಿದೆ ಎಂದು ಅವರು ಹೇಳಿದರು. ಈ ಭಯೋತ್ಪಾದಕರನ್ನು ಕೊಂದ ನಂತರ, ಅವರ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಒಂದು M9, ಇನ್ನೆರಡು AK-47 ರೈಫಲ್ ಗಳು. ನಾವು ಈ ರೈಫಲ್‌ಗಳನ್ನು ವಿಶೇಷ ವಿಮಾನದಲ್ಲಿ ಚಂಡೀಗಢ ಕೇಂದ್ರ FSL (ವಿಧಿ ವಿಜ್ಞಾನ ಪ್ರಯೋಗಾಲಯ)ಕ್ಕೆ ಕಳುಹಿಸಿದೆವು. ಈ ಮೂರು ರೈಫಲ್‌ಗಳನ್ನು ನಮ್ಮ ಮುಗ್ಧ ನಾಗರಿಕರನ್ನು ಕೊಲ್ಲಲು ಬಳಸಲಾಗಿದೆ ಎಂದು ದೃಢಪಡಿಸಲಾಯಿತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

SCROLL FOR NEXT