ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆ: IMD

ಮುಂಗಾರು ಋತುವಿನ ಮೊದಲಾರ್ಧದಲ್ಲಿ(ಜೂನ್ ಮತ್ತು ಜುಲೈ) ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಪಡೆದಿದೆ.

ನವದೆಹಲಿ: ಮುಂಗಾರು ಋತುವಿನ ದ್ವಿತೀಯಾರ್ಧದಲ್ಲೂ(ಆಗಸ್ಟ್ ಮತ್ತು ಸೆಪ್ಟೆಂಬರ್) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಗುರುವಾರ ತಿಳಿಸಿದೆ.

ಪೂರ್ವ ಭಾರತದ ಈಶಾನ್ಯ ಮತ್ತು ಪಕ್ಕದ ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಆಗಸ್ಟ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಮಳೆ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಮುಂಗಾರು ಋತುವಿನ ಮೊದಲಾರ್ಧದಲ್ಲಿ(ಜೂನ್ ಮತ್ತು ಜುಲೈ) ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಪಡೆದಿದೆ. ಕೆಲವು ರಾಜ್ಯಗಳು, ವಿಶೇಷವಾಗಿ ಹಿಮಾಚಲ ಪ್ರದೇಶವು ಹಠಾತ್ ಪ್ರವಾಹವನ್ನು ಅನುಭವಿಸಿತು.

"ಒಟ್ಟಾರೆಯಾಗಿ, ನೈಋತ್ಯ ಮಾನ್ಸೂನ್ ಋತುವಿನ ದ್ವಿತೀಯಾರ್ಧದಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ (ದೀರ್ಘಾವಧಿಯ ಸರಾಸರಿ 422.8 ಮಿಮೀ) ಬೀಳುವ ಸಾಧ್ಯತೆಯಿದೆ" ಎಂದು ಮೊಹಾಪಾತ್ರ ತಿಳಿಸಿದ್ದಾರೆ.

"ಭೌಗೋಳಿಕವಾಗಿ, ಈಶಾನ್ಯ ಮತ್ತು ಪೂರ್ವ ಭಾರತದ ಅನೇಕ ಭಾಗಗಳು, ಮಧ್ಯ ಭಾರತದ ಪ್ರತ್ಯೇಕ ಪ್ರದೇಶಗಳು ಮತ್ತು ಪರ್ಯಾಯ ದ್ವೀಪ ಪ್ರದೇಶದ ನೈಋತ್ಯ ಪ್ರದೇಶಗಳನ್ನು ಹೊರತುಪಡಿಸಿ, ಹೆಚ್ಚಿನ ಪ್ರದೇಶಗಳಲ್ಲಿ ಸಾಮಾನ್ಯ ಮತ್ತು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ" ಎಂದು ಅವರು ಹೇಳಿದ್ದಾರೆ.

ಜೂನ್ 1 ರಿಂದ ಜುಲೈ 31 ರವರೆಗೆ ದೇಶದಲ್ಲಿ ಸಾಮಾನ್ಯ 445.8 ಮಿಮೀ ಮಳೆಗೆ ಬದಲಾಗಿ 474.3 ಮಿಮೀ ಮಳೆಯಾಗಿದೆ, ಇದು ಶೇಕಡಾ ಆರು ರಷ್ಟು ಹೆಚ್ಚಳವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ