ಭೂಕುಸಿತ ಸಂಭವಿಸಿರುವ ಸ್ಥಳ. 
ದೇಶ

ಸಿಕ್ಕಿಂ ಭೂಕುಸಿತ: ನಾಪತ್ತೆಯಾಗಿರುವ 6 ಮಂದಿ ಸೇನಾ ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ, NDRF ಸಾಥ್

ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದರೆ, ನಾಲ್ವರು ಗಾಯಗೊಂಡಿದ್ದರು.

ಕೋಲ್ಕತ್ತಾ: ಸಿಕ್ಕಿಂನ ಸೇನಾ ಶಿಬಿರದ ಮೇಲೆ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿರುವ 6 ಮಂದಿ ಸೇನಾ ಸಿಬ್ಬಂದಿಗಳಿಗಾಗಿ ಕಾರ್ಯಾಚರಣೆ ಮುಂದುವರೆದಿದ್ದು, ಕಾರ್ಯಾಚರಣೆಗೆ ಇದೀಗ 23 ಮಂದಿ ಎನ್'ಡಿಆರ್'ಎಫ್ ಸಿಬ್ಬಂದಿ ಕೂಡ ಕೈಜೋಡಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್'ಡಿಆರ್'ಎಫ್) ಬಳಿ ಕಾರ್ಯಾಚರಣೆಗೆ ಅಗತ್ಯವಿರುವ ಸ್ಯಾಟಲೈಟ್ ಫೋನ್ ಹಾಗೂ ಅಗತ್ಯ ತುರ್ತು ಉಪಕರಣಗಳಿದ್ದು, ಕಾರ್ಯಾಚರಣೆಗೆ ಸಾಕಷ್ಟು ಸಹಾಯಕವಾಗಲಿದೆ ಎನ್ನಲಾಗಿದೆ.

ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದರೆ, ನಾಲ್ವರು ಗಾಯಗೊಂಡಿದ್ದರು. ಅಲ್ಲದೆ 6 ಮಂದಿ ಸೇನಾ ಸಿಬ್ಬಂದಿ ಕೂಡ ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದರು.

ಈ ನಡುವೆ ಹವಾಮಾನ ಪರಿಸ್ಥಿತಿಗಳನ್ನು ಅವಲಂಬಿಸಿ ಪರ್ಯಾಯ ಪಾದಚಾರಿ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಹೆಲಿಪ್ಯಾಡ್ ಕಾರ್ಯಾಚರಣೆಗಳ ಕಾರ್ಯಸಾಧ್ಯತೆಯನ್ನು ಪರಿಶೀಲಿಸುವಂತೆ ಆಡಳಿತ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್