ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ತಪ್ಪಾದ ಇಂಜೆಕ್ಷನ್ ಗೆ ಐವರು ಬಲಿ; ತನಿಖೆಗೆ ಆದೇಶ

ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಐಸಿಯುಗೆ ದಾಖಲಾಗಿದ್ದರು.

ಕೊರಾಪುಟ್‌: ಒಡಿಶಾದ ಕೊರಾಪುಟ್‌ನಲ್ಲಿರುವ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ದಾಖಲಾದ ಕೆಲವೇ ಗಂಟೆಗಳಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಐವರು ರೋಗಿಗಳು ಸಾವನ್ನಪ್ಪಿದ್ದಾರೆ. ಮಂಗಳವಾರ ರಾತ್ರಿ ಆಸ್ಪತ್ರೆ ಸಿಬ್ಬಂದಿ ತಪ್ಪು ಇಂಜೆಕ್ಷನ್ ನೀಡಿದ್ದರಿಂದ ಈ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಐಸಿಯುಗೆ ದಾಖಲಾಗಿದ್ದರು. ಅವರ ಸಾವಿಗೆ ಸ್ವಲ್ಪ ಮೊದಲು ಆಸ್ಪತ್ರೆ ಸಿಬ್ಬಂದಿ ರೋಗಿಗಳಿಗೆ ಇಂಜೆಕ್ಷನ್ ನೀಡಿದ್ದಾರೆ ಎಂದು ಅವರ ಕುಟುಂಬಗಳು ಆರೋಪಿಸಿವೆ.

ಈ ರೋಗಿಗಳನ್ನು ಶಸ್ತ್ರಚಿಕಿತ್ಸೆಯ ನಂತರದ ಆರೈಕೆ ಮತ್ತು ಗಂಭೀರ ಮೇಲ್ವಿಚಾರಣೆಗಾಗಿ ಐಸಿಯು ಮತ್ತು ಶಸ್ತ್ರಚಿಕಿತ್ಸಾ ವಾರ್ಡ್‌ಗಳಿಗೆ ದಾಖಲಿಸಲಾಗಿತ್ತು ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಸಾವಿಗೆ ನಿಖರ ಕಾರಣ ಕಂಡುಹಿಡಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು SLNMCH ನ ಸೂಪರಿಂಟೆಂಡೆಂಟ್ ಸುಸಂತಾ ಕುಮಾರ್ ಸಾಹು ತಿಳಿಸಿದ್ದಾರೆ.

ನಾವು ಎಲ್ಲಾ ಇಲಾಖಾ ಮುಖ್ಯಸ್ಥರ ಸಭೆಯನ್ನು ಕರೆದಿದ್ದೇವೆ. ಮಂಗಳವಾರ ರಾತ್ರಿ ಸಾವನ್ನಪ್ಪಿದ ರೋಗಿಗಳನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕವಾಗಿ, ಸಾವುಗಳು ಯಾವುದೇ ತಪ್ಪುಇಂಜೆಕ್ಷನ್‌ನಿಂದ ಸಂಭವಿಸಿಲ್ಲ ಎಂದು ತೋರುತ್ತದೆ. ಆದಾಗ್ಯೂ, ಆರೋಪಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ" ಎಂದು ಅವರು ಹೇಳಿದರು. ಮೂವರು ರೋಗಿಗಳು ಐಸಿಯುನಲ್ಲಿ ಸಾವನ್ನಪ್ಪಿದರೆ, ಇಬ್ಬರು ಸಾಮಾನ್ಯ ವಾರ್ಡ್‌ನಲ್ಲಿ ಮೃತ ಪಟ್ಟಿದ್ದರು. ಮೃತರ ಕುಟುಂಬಗಳು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು, ನಂತರ ಪೊಲೀಸರನ್ನು ನಿಯೋಜಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT