ಜೈರಾಮ್ ರಮೇಶ್ 
ದೇಶ

ವಿಶೇಷ ಅಧಿವೇಶನ ಬೇಡಿಕೆ ತಪ್ಪಿಸಲು 47 ದಿನ ಮುಂಚಿತವಾಗಿ ಮುಂಗಾರು ಅಧಿವೇಶನ ಘೋಷಣೆ: ಕಾಂಗ್ರೆಸ್

ಸಂಸತ್ ಮುಂಗಾರು ಅಧಿವೇಶನ ಜುಲೈ 21 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಹೇಳಿದ್ದಾರೆ.

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಮತ್ತು ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ಕುರಿತು ಚರ್ಚಿಸಲು ತಕ್ಷಣ ವಿಶೇಷ ಅಧಿವೇಶನ ಕರೆಯಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯಿಂದ ತಪ್ಪಿಸಿಕೊಳ್ಳಲು ಕೇಂದ್ರ ಸರ್ಕಾರ ಸಂಸತ್ ಮುಂಗಾರು ಅಧಿವೇಶನವನ್ನು 47 ದಿನ ಮುಂಚಿತವಾಗಿ ಘೋಷಿಸಿದೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.

ಸಂಸತ್ ಮುಂಗಾರು ಅಧಿವೇಶನ ಜುಲೈ 21 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಹೇಳಿದ್ದಾರೆ.

ಕಿರಣ್ ರಿಜಿಜು ಹೇಳಿಕೆಗೆ X ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಾಮಾನ್ಯವಾಗಿ ಸಂಸತ್ ಅಧಿವೇಶನದ ದಿನಾಂಕಗಳನ್ನು ಕೆಲವು ದಿನಗಳ ಮುಂಚಿತವಾಗಿ ಘೋಷಿಸಲಾಗುತ್ತದೆ. ಆದರೆ ಮುಂಗಾರು "ಅಧಿವೇಶನವನ್ನು ಆರಂಭವಾಗುವ 47 ದಿನಗಳ ಮುಂಚೆ ಯಾವತ್ತೂ ಘೋಷಿಸಿಲ್ಲ" ಎಂದು ಹೇಳಿದ್ದಾರೆ.

"ಪಹಲ್ಗಾಮ್‌ ಉಗ್ರ ದಾಳಿ ಮತ್ತು ಭಯೋತ್ಪಾದಕರನ್ನು ಬಂಧಿಸುವಲ್ಲಿ ಕೇಂದ್ರದ ವಿಫಲತೆ, ಆಪರೇಷನ್ ಸಿಂಧೂರ್‌ನ ಪರಿಣಾಮಗಳು ಮತ್ತು ಅದರ ಸ್ಪಷ್ಟ ರಾಜಕೀಯೀಕರಣ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯ ನಿರಂತರ ಹೇಳಿಕೆ, ನಮ್ಮ ವಿದೇಶಾಂಗ ನೀತಿ ಮತ್ತು ರಾಜತಾಂತ್ರಿಕ ವೈಫಲ್ಯಗಳ ಕುರಿತು ಚರ್ಚಿಸಲು ತಕ್ಷಣ ವಿಶೇಷ ಅಧಿವೇಶನ ಕರೆಯಬೇಕೆಂಬ ಇಂಡಿಯಾ ಮೈತ್ರಿಕೂಟ ಮತ್ತು ಇತರ ಪ್ರತಿಪಕ್ಷಗಳ ಬೇಡಿಕೆಯಿಂದ ತಪ್ಪಿಸಿಕೊಳ್ಳಲು ಮಾತ್ರ ಮುಂಗಾರು ಅಧಿವೇಶನದ ದಿನಾಂಕ ಪ್ರಕಟಿಸಲಾಗಿದೆ" ಎಂದು ಜೈರಾಮ್ ರಮೇಶ್ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!