ಸಾಂದರ್ಭಿಕ ಚಿತ್ರ 
ದೇಶ

ಎರಡು ಹಂತಗಳಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ: ಕೇಂದ್ರ ಸರ್ಕಾರದಿಂದ ವೇಳಾಪಟ್ಟಿ ಪ್ರಕಟ!

ಜನಗಣತಿ-2027ನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಇದರೊಂದಿಗೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ.

ನವದೆಹಲಿ: ದೇಶದಲ್ಲಿ ಎರಡು ಹಂತಗಳಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ ನಡೆಸಲಾಗುವುದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.

ಅಕ್ಟೋಬರ್ 1,2026 ರಿಂದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ಹಿಮಚಾದಿತ ಪ್ರದೇಶಗಳಲ್ಲಿ ಮತ್ತು ಮಾರ್ಚ್ 1,2027 ರಿಂದ ದೇಶದ ಉಳಿದ ಭಾಗಗಳಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ ನಡೆಸಲಾಗುವುದು ಎಂದು ಸಚಿವಾಲಯ ಪ್ರಕಟಿಸಿದೆ.

ಜನಗಣತಿ-2027ನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಇದರೊಂದಿಗೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ.

ಮಾರ್ಚ್ 2027ರ ಮೊದಲ ದಿನದಿಂದಲೇ ಗಣತಿ ಕಾರ್ಯ ಪ್ರಾರಂಭವಾಗಲಿದೆ. ಈ ಸಂಬಂಧ ಜನಗಣತಿ ಕಾಯ್ದೆ 1948ರ ಸೆಕ್ಷನ್ 3ರ ನಿಬಂಧನೆಯಂತೆ 16.06,2025 ರಂದು ತಾತ್ಕಾಲಿಕವಾಗಿ ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

2011 ರಲ್ಲಿ ಕೊನೆಯ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Donald Trump ಆಪ್ತ ಬೆಂಬಲಿಗ ಚಾರ್ಲಿ ಕಿರ್ಕ್ ನ ಗುಂಡಿಕ್ಕಿ ಹತ್ಯೆ: ಅಮೆರಿಕಾ ಅಧ್ಯಕ್ಷ ತೀವ್ರ ಸಂತಾಪ

ನೇಪಾಳ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಜನರಲ್-ಝಡ್ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ

ಸ್ಲಂ ಬೋರ್ಡ್ ಅಡಿ 42,000 ಮನೆಗಳ ನಿರ್ಮಿಸಲಾಗುತ್ತಿದ್ದು, ಮೂಲಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದಿಂದ ಅನುದಾನ: ಸಿಎಂ

ಮುಸ್ಲಿಮರಿಗೆ ಹೆಚ್ಚಿನ ಬೆಂಬಲ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು: ಆರ್.ಅಶೋಕ್

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ

SCROLL FOR NEXT