ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ಹಾಸ್ಟೆಲ್ ಕಟ್ಟಡದಿಂದ ಜಿಗಿದು MBBS ಪ್ರಥಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ!

ಜಬಲ್ ಪುರ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಸಂಖ್ಯೆ 4 ರ ನಾಲ್ಕನೇ ಮಹಡಿಯಿಂದ ಮಧ್ಯಾಹ್ನ 12.30 ರ ಸುಮಾರಿಗೆ ಶಿವಾಂಶ್ ಗುಪ್ತಾ ಎಂಬ ವಿದ್ಯಾರ್ಥಿ ಜಿಗಿದಿದ್ದಾನೆ

ಭೋಪಾಲ್: ಸರ್ಕಾರಿ ವೈದ್ಯಕೀಯ ಕಾಲೇಜಿನ MBBS ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಜಬಲ್ ಪುರ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಸಂಖ್ಯೆ 4 ರ ನಾಲ್ಕನೇ ಮಹಡಿಯಿಂದ ಮಧ್ಯಾಹ್ನ 12.30 ರ ಸುಮಾರಿಗೆ ಶಿವಾಂಶ್ ಗುಪ್ತಾ ಎಂಬ ವಿದ್ಯಾರ್ಥಿ ಜಿಗಿದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ. ಶಿವಾಂಶ್ ಸುಮಾರು ಹದಿನೈದು ದಿನಗಳ ಕಾಲ ತೀವ್ರ ಖಿನ್ನತೆಗೆ ಒಳಗಾಗಿದ್ದರು, ಆದರೆ ಸಮಸ್ಯೆ ಏನು ಎಂಬುದನ್ನು ಯಾರೊಂದಿಗೂ ಹಂಚಿಕೊಂಡಿರಲಿಲ್ಲ ಎಂದು ಅವರ ಬ್ಯಾಚ್‌ಮೇಟ್‌ಗಳು ಪೊಲೀಸರಿಗೆ ತಿಳಿಸಿದ್ದಾರೆ.

ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ, ಶಿವಾಂಶ್ ಮಧ್ಯ ಪ್ರದೇಶದ ರೇವಾ ಜಿಲ್ಲೆಯವರಾಗಿದ್ದು, ಅವರ ತಂದೆ ಗುರುಗ್ರಾಮ್‌ನಲ್ಲಿ ಉದ್ಯೋಗಿಯಾಗಿದ್ದಾರೆ. ಆತ್ಮಹತ್ಯೆಗೂ ಆತ ಸ್ನೇಹಿತರಿಗೆ ಕಳುಹಿಸಿದ ಸಂದೇಶಗಳನ್ನು ಪೊಲೀಸರು ವಿಶ್ಲೇಷಿಸುತ್ತಿದ್ದಾರೆ. ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ಜಬಲ್ ಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ನಿಮಗೆ ಆತ್ಮಹತ್ಯೆಯಂತಹ ಆಲೋಚನೆಗಳು ಇದ್ದಲ್ಲಿ, ಅಥವಾ ಸ್ನೇಹಿತನ ಬಗ್ಗೆ ಚಿಂತಿಸುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದಲ್ಲಿ ಸಹಾಯವಾಣಿಗಳಾದ ಸ್ನೇಹ ಫೌಂಡೇಶನ್ - 04424640050, ಟೆಲಿ ಮನಸ್ - 14416 (24x7 ಲಭ್ಯವಿರುತ್ತದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ 02225521111 ಸಂಪರ್ಕಿಸಬಹುದು. ಇದು ಸೋಮವಾರದಿಂದ ಶನಿವಾರದವರೆಗೂ ಬೆಳಗ್ಗೆ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಲಭ್ಯವಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT