ಪುಣೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ 
ದೇಶ

ಪುಣೆಯಲ್ಲೂ RCB ಸಂಭ್ರಮಾಚರಣೆ: 40 ಮಂದಿಯ ವಿರುದ್ಧ ಪ್ರಕರಣ ದಾಖಲು

ಆರ್ ಸಿಬಿ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆಯೇ ಪುಣೆಯ ನಾಮ್ದಾರ್ ಗೋಪಾಲ ಕೃಷ್ಣ ಗೋಖಲೆ ಚೌಕದಲ್ಲಿ (Goodluck Chowk) ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಗಿದೆ.

ಪುಣೆ: ಮಹಾರಾಷ್ಟ್ರದ ಪುಣೆಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಮಾಡಲಾಗಿದೆ.

ಜೂನ್ 3 ರಂದು ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋಲಿಸಿ ಆರ್ ಸಿಬಿ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆಯೇ ಪುಣೆಯ ನಾಮ್ದಾರ್ ಗೋಪಾಲ ಕೃಷ್ಣ ಗೋಖಲೆ ಚೌಕದಲ್ಲಿ (Goodluck Chowk) ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಗಿದೆ.

ಈ ಹಿನ್ನೆಲೆಯಲ್ಲಿ 40 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. RCB ಸಂಭ್ರಮಾಚರಣೆ ವೇಳೆಯಲ್ಲಿ ಪಟಾಕಿ ಸಿಡಿಸಿ, ಗದ್ದಲ ಉಂಟುಮಾಡಿದ್ದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಡೆಕ್ಕನ್ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

ಪಟಾಕಿ ಸಿಡಿಸಿುವ ಮೂಲಕ ಶಾಂತಿಗೆ ಭಂಗ ತಂದ, ಸಾರ್ವಜನಿಕ ವಾಹನಗಳು ಹಾಗೂ ನಾಗರಿಕರಿಗೆ ತೊಂದರೆ ನೀಡಿದ ಆರೋಪದ ಮೇರೆಗೆ ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ನಿಬಂಧನೆಗಳಡಿ ಸುಮಾರು 40 ವ್ಯಕ್ತಿಗಳ ಮೇಲೆ ಆರೋಪ ಹೊರಿಸಲಾಗಿದೆ. ಸಂಭ್ರಮಾಚರಣೆಯಿಂದ ವಾಹನ ಸವಾರರಿಗೆ ಅನಾನೂಕೂಲವಾಗಿದೆ. ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಮತ್ತಷ್ಟು ಅಭಿಮಾನಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿ ಹೇಳಿದರು.

ಮಂಗಳವಾರ ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ರನ್ ಗಳಿಂದ ರೋಚಕ ಗೆಲುವು ಸಾಧಿಸಿದ RCB ತನ್ನ ಚೊಚ್ಚಲ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಆ ಮೂಲಕ 18 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್