ಪ್ರಾತಿನಿಧಿಕ ಚಿತ್ರ 
ದೇಶ

ಮದುವೆ ಮನೆಯಿಂದ ಅಪಹರಿಸಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ

ವಿಶಾಖಪಟ್ಟಣಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಜಾಂ: ಈ ವಾರದ ಆರಂಭದಲ್ಲಿ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ 14 ಮತ್ತು 15 ವರ್ಷದ ಇಬ್ಬರು ಬಾಲಕಿಯರನ್ನು ಮದುವೆ ಮನೆಯಿಂದ ಅಪಹರಿಸಿ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶಾಖಪಟ್ಟಣಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಹ್ಮಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶ್ರವಣ್ ವಿವೇಕ್ ಅವರ ಪ್ರಕಾರ, ಈ ಘಟನೆ ಜೂನ್ 3 ರಂದು ನಡೆದಿದೆ.

ಅಪ್ರಾಪ್ತರು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಆರೋಪಿಗಳು ಅವರನ್ನು ಅಪಹರಿಸಿದ್ದಾರೆ. ಬಳಿಕ ಅವರ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಾರೆ. ನಂತರ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಕುಟುಂಬ ಆರೋಪಿಸಿದ್ದಾರೆ ಎಂದು ಎಸ್‌ಪಿ ಹೇಳಿದರು.

ಪ್ರಾಥಮಿಕ ತನಿಖೆಯಲ್ಲಿ, ಬಾಲಕಿಯರನ್ನು ಇಬ್ಬರು ಪುರುಷರು ಕರೆದೊಯ್ದಿದ್ದಾರೆ. ಅವರಲ್ಲಿ ಒಬ್ಬ ಬಾಲಕಿಗೆ ಆರೋಪಿಗಳ ಪರಿಚಯವಿತ್ತು. ನಂತರ ಈ ಇಬ್ಬರು ಪುರುಷರೊಂದಿಗೆ ಇನ್ನಿಬ್ಬರು ಸೇರಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಜೂನ್ 4 ರಂದು ದೂರು ದಾಖಲಿಸಲಾಗಿದ್ದು, ಜೂನ್ 6 ರಂದು ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಯಿತು.

'ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಗೋಲಂತ್ರ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಸಂತ್ರಸ್ತರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಸಮಾಲೋಚನೆಗಾಗಿ ಹಾಜರುಪಡಿಸಲಾಯಿತು' ಎಂದು ವಿವೇಕ್ ಹೇಳಿದರು.

ಆರೋಪಿಗಳು ವಿಶಾಖಪಟ್ಟಣಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video