ಸಂಗ್ರಹ ಚಿತ್ರ 
ದೇಶ

ಛತ್ತೀಸ್‌ಗಢ: ಸುಕ್ಮಾದಲ್ಲಿ IED ಸ್ಫೋಟ; ASP ಸೇರಿ ಇತರ ಸಿಬ್ಬಂದಿಗಳಿಗೆ ಗಾಯ

ಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಇತರ ಕೆಲವು ಸಿಬ್ಬಂದಿಗಳಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.

ಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಕೊಂಟಾ ವಿಭಾಗ) ಆಕಾಶ್ ರಾವ್ ಗಿರಿಪುಂಜೆ ಮತ್ತು ಇತರ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ನಕ್ಸಲರು ಬಂದ್'ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಿ, ಅಧಿಕಾರಿಗಳು ಗಸ್ತು ತಿರುಗುತ್ತಿದ್ದರು. ಈ ವೇಳೆ ಐಇಡಿ ಸ್ಫೋಟಗೊಂಡಿದ್ದು, ಸ್ಫೋಟದಲ್ಲಿ ಎಎಸ್‌ಪಿ, ಇತರ ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಎಲ್ಲಾ ಗಾಯಾಳು ಸಿಬ್ಬಂದಿಯನ್ನು ಕೊಂಟಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಎಎಸ್‌ಪಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಎಎಸ್‌ಪಿಯನ್ನು ಸ್ಥಳಾಂತರಿಸಲು ಪ್ರಯತ್ನಗಳ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್