ಪೊಲೀಸ್ ಅಧಿಕಾರಿ ಆಕಾಶ್ ರಾವ್ ಗಿರೆಪುಂಜೆ  
ದೇಶ

ಛತ್ತೀಸ್ ಗಢ: ನಕ್ಸಲೀಯರು ಇರಿಸಿದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮ

ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲೀಯರು ಇರಿಸಿದ ಸುಧಾರಿತ ಸ್ಫೋಟಕ ಸಾಧನ (IED)ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಇತರ ಕೆಲವು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿಯಾಗಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಕೊಂಟಾ ವಿಭಾಗ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ ಎಂದು ಗೃಹ ಖಾತೆಯನ್ನು ಹೊಂದಿರುವ ರಾಜ್ಯದ ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಅವರು ತಿಳಿಸಿದ್ದಾರೆ.

ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.

ASP ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಕೊಂಟಾ-ಎರ್ರಾಬೋರ್ ರಸ್ತೆಯ ದೊಂಡ್ರಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿಗೆ ಬಿಜಾಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಹತ್ಯೆಯಾಗಿದ್ದರು. ಇದರ ಬೆನ್ನಲ್ಲೇ ಮತ್ತೆ ಚುರುಕು ಆಗಿರುವ ನಕ್ಸಲೀಯರು ಸೋಮವಾರ ಐಇಡಿ ಸ್ಫೋಟಿಸುವ ಮೂಲಕ ಹಿರಿಯ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT