ದೇವೇಂದ್ರ ಫಡ್ನವೀಸ್ - ರಾಜ್ ಠಾಕ್ರೆ ಭೇಟಿ 
ದೇಶ

ಎಂಎನ್‌ಎಸ್-ಸೇನಾ(ಯುಬಿಟಿ) ಮೈತ್ರಿ ವದಂತಿ ನಡುವೆ ಮಹಾ ಸಿಎಂ ಫಡ್ನವೀಸ್-ರಾಜ್ ಠಾಕ್ರೆ ಭೇಟಿ

ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ರಾಜಕೀಯವಾಗಿ ದೂರವಾಗಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬ ಊಹಾಪೋಹಗಳ ನಡುವೆ ಈ ಸಭೆ ನಡೆದಿದೆ.

ಮುಂಬೈ: ದೂರವಾಗಿರುವ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಅವರು ಮತ್ತೆ ಒಂದಾಗುತ್ತಾರೆ ಎಂಬ ಊಹಾಪೋಹಗಳ ನಡುವೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಗುರುವಾರ ಬೆಳಗ್ಗೆ ಮುಂಬೈನ ಹೋಟೆಲ್‌ನಲ್ಲಿ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ರಾಜಕೀಯವಾಗಿ ದೂರವಾಗಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬ ಊಹಾಪೋಹಗಳ ನಡುವೆ ಈ ಸಭೆ ನಡೆದಿದೆ.

ಬಿಜೆಪಿ ಹಿರಿಯ ನಾಯಕ ಫಡ್ನವೀಸ್ ಮತ್ತು ರಾಜ್ ಠಾಕ್ರೆ ಅವರು ಇಂದು ಬೆಳಗ್ಗೆ ಬಾಂದ್ರಾ ಪ್ರದೇಶದ ಪಂಚತಾರಾ ಹೋಟೆಲ್‌ನಲ್ಲಿ ಭೇಟಿಯಾದರು ಎಂದು ಮೂಲಗಳು ತಿಳಿಸಿವೆ. ಆದರೆ ಮಾತುಕತೆಯ ವಿವರ ನೀಡಲು ಅವರು ನಿರಾಕರಿಸಿದ್ದಾರೆ.

ಈ ಕುರಿತು ಬಿಜೆಪಿ ಮುಖ್ಯ ವಕ್ತಾರ ಕೇಶವ್ ಉಪಾಧ್ಯೆಯ ಅವರನ್ನು ಸಂಪರ್ಕಿಸಿದಾಗ, ಇಬ್ಬರು ನಾಯಕರು ಉತ್ತಮ ಸ್ನೇಹಿತರು ಮತ್ತು ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಲು ಭೇಟಿಯಾಗಿರಬಹುದು ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಈ ವಾರ ಮುಂಬೈ ಸೇರಿದಂತೆ 29 ನಗರ ಪಾಲಿಕೆಗಳಲ್ಲಿ ವಾರ್ಡ್ ವಿಂಗಡಣೆಗೆ ಆದೇಶ ನೀಡುವ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಿದೆ.

ರಾಜ್ ಠಾಕ್ರೆ ಅವರು ತಮ್ಮ ನಡುವಿನ ಹಿಂದಿನ ಭಿನ್ನಾಭಿಪ್ರಾಯಗಳು "ಕ್ಷುಲ್ಲಕ" ಮತ್ತು ಉದ್ಧವ್ ಠಾಕ್ರೆ ಅವರೊಂದಿಗೆ ಕೆಲಸ ಮಾಡುವುದು ಕಷ್ಟವಲ್ಲ ಎಂದು ಅವರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಉದ್ಧವ್ ಠಾಕ್ರೆ, ಮಹಾರಾಷ್ಟ್ರದ ಹಿತಾಸಕ್ತಿ ರಕ್ಷಿಸಲು ಕ್ಷುಲ್ಲಕ ಜಗಳಗಳನ್ನು ಬದಿಗಿಡಲು ಸಿದ್ಧ ಎಂದು ಹೇಳಿದ್ದರು.

2024 ರ ಲೋಕಸಭಾ ಚುನಾವಣೆಯಲ್ಲಿ ರಾಜ್ ಠಾಕ್ರೆ ಬಿಜೆಪಿಗೆ ಬೆಂಬಲ ನೀಡಿದ್ದರು. ಆದರೆ ಅವರ ಪಕ್ಷವು ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್