ವಿಮಾನ ಪತನ 
ದೇಶ

ಪದಗಳಿಗೂ ಮೀರಿದ ಹೃದಯವಿದ್ರಾವಕ ದುರಂತ: ಅಹಮದಾಬಾದ್‌ ವಿಮಾನ ಪತನಕ್ಕೆ ಪ್ರಧಾನಿ ಮೋದಿ ಸಂತಾಪ

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ.

ಅಹಮದಾಬಾದ್‌: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ.

ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, "ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತ ನಮ್ಮನ್ನು ದಿಗ್ಭ್ರಮೆಗೊಳಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಬಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ" ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಅವಾಮಿ ಲೀಗ್ ಪಕ್ಷದ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ

MUDA ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು: ಸಾರ್ವಜನಿಕ ಹಿತಾಸಕ್ತಿಗಳಲ್ಲಿ ರಾಜಕೀಯ ಸರಿಯಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಕಿವಿಮಾತು

Video-'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಕ್ರಮ ಸರಿ ಇದೆ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂನ್ನು ಸಮರ್ಥಿಸಿಕೊಂಡ BJP ಸಚಿವ ಗಿರಿರಾಜ್ ಸಿಂಗ್

ಡಿಕೆ.ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

SCROLL FOR NEXT