ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ ಭೂಮಿ ಚೌಹಾಣ್ 
ದೇಶ

ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಟ್ರಾಫಿಕ್ ಜಾಮ್‌ನಿಂದ ತಡ; ಸ್ವಲ್ಪದರಲ್ಲೆ ಮಹಿಳೆ ಬಚಾವ್! Video

ಏರ್ ಇಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್ ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್ ಮೆಸ್‌ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ.

ಅಹಮದಾಬಾದ್: ಆಯಸ್ಸು ಗಟ್ಟಿಗಿದ್ದರೆ ಎಷ್ಟೇ ದೊಡ್ಡ ಅಪಾಯ ಎದುರಾದರೂ ಕೂದಲೆಳೆ ಅಂತರದಲ್ಲಿ ಪಾರಾಗ್ತಾರೆ ಎಂಬ ಮಾತು ಅನೇಕ ಸಲ ಸತ್ಯವೆನಿಸಿಕೊಂಡಿದೆ. ಇದೀಗ ಈ ಮಾತಿಗೆ ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ದುರಂತದ ವೇಳೆ ಕೂದಲೆಳೆ ಅಂತರದಲ್ಲಿ ಬದುಕುಳಿದ ಭೂಮಿ ಚೌಹಾಣ್ ಮತ್ತು ರೋಹನ್ ಬಗಾಡೆಯೇ ನಿದರ್ಶನವಾಗಿದ್ದಾರೆ.

ಏರ್ ಇಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್ ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್ ಮೆಸ್‌ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ.

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳಬೇಕಿದ್ದ ಭೂಮಿ ಟ್ರಾಫಿಕ್ ಕಾರಣದಿಂದ ವಿಮಾನ ನಿಲ್ದಾಣಕ್ಕೆ 10 ನಿಮಿಷ ತಡವಾಗಿ ಬಂದಿದ್ದರು. ಇದು ಅವರ ಜೀವ ಉಳಿಯಲು ಕಾರಣವಾಗಿದೆ.

ಈ ಬಗ್ಗೆ ಸ್ವತಃ ಭೂಮಿಯವರೇ ಪ್ರತಿಕ್ರಿಯಿಸಿದ್ದು, 'ಆ 10 ನಿಮಿಷ ತಡವಾಗಿದ್ದ ಕಾರಣಕ್ಕೆ ವಿಮಾನ ಹತ್ತಲು ಆಗಲಿಲ್ಲ. ಇದನ್ನು ಹೇಗೆ ವಿವರಿಸಬೇಕೆಂದು ತಿಳಿಯುತ್ತಿಲ್ಲ. ನನ್ನ ದೇಹ ಅಕ್ಷರಶಃ ನಡುಗುತ್ತಿದೆ. ದೇವರಿಗೆ ಕೃತಜ್ಞತೆ ಸಲ್ಲಿಸುವೆ' ಎಂದು ಹೇಳಿದ್ದಾರೆ.

ಇನ್ನು ಮತ್ತೊಂದು ಘಟನೆಯಲ್ಲಿ ಬಿ.ಜೆ ಆಸ್ಪತ್ರೆಯ ಇಂಟರ್ನಿ ರೋಹನ್ ಬಗಾಡೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ರೋಹನ್ ದುರಂತ ನಡೆದ ಹಾಸ್ಟೆಲ್‌ನಲ್ಲಿದ್ದರು. ದುರಂತಕ್ಕೂ ಕೇವಲ 15 ನಿಮಿಷದ ಮುನ್ನ ಊಟ ಮಾಡಿ ಮೆಸ್‌ನಿಂದ ತೆರಳಿ ಜೀವ ಉಳಿಸಿಕೊಂಡಿದ್ದಾರೆ.

ಈ ಬಗ್ಗೆ ರೋಹನ್ ಪ್ರತಿಕ್ರಿಯಿಸಿದ್ದು, 'ನಾನು ಇನ್ನು 15 ನಿಮಿಷಗಳ ಕಾಲ ಆ ಸ್ಥಳದಲ್ಲೇ ಇದ್ದಿದ್ದರೆ ಗಾಯಗೊಂಡ ಅನೇಕರಲ್ಲಿ ನಾನೂ ಒಬ್ಬನಾಗುತ್ತಿದ್ದೆ. ಆಗಷ್ಟೇ ಮೆಸ್‌ನಲ್ಲಿ ಊಟ ಮುಗಿಸಿ ಹಾಸ್ಟೆಲ್‌ಗೆ ತೆರಳಿದ್ದೆ. ಆಗ ದೊಡ್ಡ ಶಬ್ದ ಕೇಳಿಸಿತು. ಹೊರಬಂದು ನೋಡಿದಾಗ ವಿಮಾನ ಪತನವಾಗಿ ಆಕಾಶ ಕಪ್ಪು ಹೊಗೆಯಿಂದ ತುಂಬಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT