ಅಹಮದಾಬಾದ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ  
ದೇಶ

ವಿಮಾನ ದುರಂತದಿಂದ ನಾವೆಲ್ಲರೂ ತೀವ್ರ ಆಘಾತಗೊಂಡಿದ್ದೇವೆ: ಅಹಮದಾಬಾದ್ ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ

ತಮ್ಮವರನ್ನು ಕಳೆದುಕೊಂಡವರ ನೋವು ನಮಗೆ ಅರ್ಥವಾಗುತ್ತದೆ. ವರ್ಷಗಳವರೆಗೆ ಈ ಆಘಾತ ನಮ್ಮನ್ನು ಕಾಡಲಿದೆ ಎಂದಿದ್ದಾರೆ.

ಅಹಮದಾಬಾದ್‌ನಲ್ಲಿ 265 ಜನರು ಪ್ರಾಣ ಕಳೆದುಕೊಂಡ ಏರ್ ಇಂಡಿಯಾ AI 171 ವಿಮಾನ ಅಪಘಾತದ ಸ್ಥಳಕ್ಕೆ ಇಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಇಲ್ಲಿನ ನಾಗರಿಕ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದ ಮೋದಿ, ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಿಂದ ನಾವೆಲ್ಲರೂ ತೀವ್ರ ಆಘಾತಗೊಂಡಿದ್ದೇವೆ. ಇಷ್ಟೊಂದು ಹಠಾತ್ ಮತ್ತು ಹೃದಯವಿದ್ರಾವಕ ರೀತಿಯಲ್ಲಿ ಹಲವಾರು ಜೀವಗಳನ್ನು ಕಳೆದುಕೊಂಡಿರುವುದು ಪದಗಳಿಗೆ ನಿಲುಕದಷ್ಟು ದೊಡ್ಡ ದುರಂತ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು" ಎಂದು ಬರೆದುಕೊಂಡಿದ್ದಾರೆ.

ತಮ್ಮವರನ್ನು ಕಳೆದುಕೊಂಡವರ ನೋವು ನಮಗೆ ಅರ್ಥವಾಗುತ್ತದೆ. ವರ್ಷಗಳವರೆಗೆ ಈ ಆಘಾತ ನಮ್ಮನ್ನು ಕಾಡಲಿದೆ ಎಂದಿದ್ದಾರೆ.

ನಿನ್ನೆ ಮಧ್ಯಾಹ್ನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಮೇಘನಿನಗರ ಪ್ರದೇಶದ ಬಿಜೆ ವೈದ್ಯಕೀಯ ಕಾಲೇಜಿನ ಸಂಕೀರ್ಣಕ್ಕೆ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನ (AI171) ಅಪ್ಪಳಿಸಿದ ಸ್ಥಳವನ್ನು ಇಂದು ಪ್ರಧಾನಿ ಸುಮಾರು 20 ನಿಮಿಷಗಳ ಕಾಲ ಪರಿಶೀಲಿಸಿದರು.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಅವರು ವಿಮಾನ ಕಾಲೇಜು ಹಾಸ್ಟೆಲ್ ಹೇಗೆ ಅಪ್ಪಳಿಸಿತು ಎಂಬುದರ ಬಗ್ಗೆ ಮೋದಿಗೆ ವಿವರಿಸಿದರು.

ನಂತರ ಪ್ರಧಾನಿಯವರು ನಗರದ ಸಿವಿಲ್ ಆಸ್ಪತ್ರೆಗೆ ತೆರಳಿ ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿಯಾದರು. ಒಂದು ದಿನದ ಹಿಂದೆ ನಡೆದ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಶ್‌ಕುಮಾರ್ ರಮೇಶ್ ಅವರನ್ನು ಭೇಟಿಯಾದರು.

25 ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಸಿ7 ವಾರ್ಡ್‌ಗೆ ಅವರು ಭೇಟಿ ನೀಡಿ ವೈದ್ಯರೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರು ಆಸ್ಪತ್ರೆಯಲ್ಲಿ ಸುಮಾರು 10 ನಿಮಿಷಗಳ ಕಾಲ ಕಳೆದರು.

ಮೋದಿ ಅವರು ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಗುಜ್‌ಸೈಲ್ ಕಚೇರಿಯಲ್ಲಿ ರಾಜ್ಯ ಮತ್ತು ನಾಗರಿಕ ವಿಮಾನಯಾನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸ್ವಚ್ಛಗೊಳಿಸುವ ಕಾರ್ಯ

ಅಪಘಾತದ ಸ್ಥಳವನ್ನು ತೆರವುಗೊಳಿಸುವ ಕಾರ್ಯಾಚರಣೆ ರಾತ್ರಿಯಿಡೀ ಮುಂದುವರೆದಿದ್ದು, ಕೊನೆಯ ಹಂತದಲ್ಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ಉಪ ಆಯುಕ್ತ ಕಾನನ್ ದೇಸಾಯಿ ಅವರು ಸ್ಥಳವನ್ನು ತೆರವುಗೊಳಿಸುವ ಕಾರ್ಯಾಚರಣೆ ರಾತ್ರಿಯಿಡೀ ಮುಂದುವರೆದಿದ್ದು, ಕೆಲವು ಅವಶೇಷಗಳನ್ನು ಇನ್ನೂ ತೆಗೆದುಹಾಕಬೇಕಾಗಿದೆ ಎಂದು ಹೇಳಿದರು. ಶವಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ ಎಂದು ಅವರು ಹೇಳಿದರು.

ಇನ್ನೂ ಪತ್ತೆಯಾಗದ ವಿಮಾನ ಕಪ್ಪು ಪೆಟ್ಟಿಗೆ

265 ಶವಗಳನ್ನು ಸಿಟಿ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಕಾನನ್ ದೇಸಾಯಿ ಈ ಹಿಂದೆ ಹೇಳಿದ್ದರು. ಏರ್ ಇಂಡಿಯಾ ವಿಮಾನದ ಕಪ್ಪು ಪೆಟ್ಟಿಗೆಯನ್ನು ಇನ್ನೂ ಪತ್ತೆ ಮಾಡಿಲ್ಲ, ತನಿಖಾಧಿಕಾರಿಗಳು ವಿಮಾನ ಮತ್ತು ಕಾಕ್‌ಪಿಟ್ ರೆಕಾರ್ಡರ್‌ಗಳು ಕಾರಣವನ್ನು ಅರ್ಥಮಾಡಿಕೊಳ್ಳುವಲ್ಲಿ ಪ್ರಮುಖವಾಗಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT