ಉತ್ತರ ಪ್ರದೇಶ ಪೊಲೀಸರ ಸಾಂದರ್ಭಿಕ ಚಿತ್ರ 
ದೇಶ

ಕಾನೂನು ಸುವ್ಯವಸ್ಥೆಗೆ ಧಕ್ಕೆ ಸಾಧ್ಯತೆ: ಅಯೋಧ್ಯೆಯಲ್ಲಿ ವಾರ್ಷಿಕ ಉರುಸ್ ಸಮಾರಂಭ ನಿಷೇಧ

ಕಳೆದ ಎರಡು ದಶಕಗಳಿಂದ ಅಯೋಧ್ಯೆಯಲ್ಲಿ ನಡೆಯುತ್ತಿರುವ ಉರುಸ್ ಸಮಾರಂಭವನ್ನು ಶನಿವಾರ ಮತ್ತು ಭಾನುವಾರ ನಿಗದಿಪಡಿಸಲಾಗಿತ್ತು.

ಅಯೋಧ್ಯೆ: ಅಯೋಧ್ಯೆಯಲ್ಲಿ ಶಾಂತಿ ಭಂಗ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳೀಯ ಆಡಳಿತವು ವಾರ್ಷಿಕ ಉರುಸ್ ಸಮಾರಂಭವನ್ನು ನಿಷೇಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ದಶಕಗಳಿಂದ ಅಯೋಧ್ಯೆಯಲ್ಲಿ ನಡೆಯುತ್ತಿರುವ ಉರುಸ್ ಸಮಾರಂಭವನ್ನು ಶನಿವಾರ ಮತ್ತು ಭಾನುವಾರ ನಿಗದಿಪಡಿಸಲಾಗಿತ್ತು.

ಆದರೆ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ದೂರಿನ ನಂತರ, ಅಯೋಧ್ಯಾ ಆಡಳಿತವು, ಖಾನ್‌ಪುರ ಮಸೋಧಾ ಪ್ರದೇಶದ ದಾದಾ ಮಿಯಾ ಬಜಾರ್‌ನಲ್ಲಿ ಪ್ರತಿ ವರ್ಷ ನಡೆಯುವ 'ದಾದಾ ಮಿಯಾ ಉರುಸ್'ಗೆ ಅನುಮತಿ ನಿರಾಕರಿಸಲಾಗಿದೆ.

ಮೂಲಗಳ ಪ್ರಕಾರ, ಸ್ಥಳೀಯ ವಿಎಚ್‌ಪಿ ಸದಸ್ಯರಾದ ಲಾಲ್ಜಿ ಶರ್ಮಾ ಮತ್ತು ಸೂರ್ಯಕಾಂತ್ ಪಾಂಡೆ ಅವರು ಖಾನ್‌ಪುರ ಮಸೋಧಾದಲ್ಲಿ "ಘಾಜಿ ಬಾಬಾ" ಹೆಸರಿನಲ್ಲಿ ಸಭೆ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

"ಉರುಸ್ ದಾದಾ ಮಿಯಾ" ಹೆಸರಿನಲ್ಲಿ ಉರುಸ್ ಆಯೋಜಿಸಲು ಆಯೋಜಕರು ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿದ್ದಾರೆ. ಆದರೆ ಅವರು "ಘಾಜಿ ಬಾಬಾ ಉರುಸ್" ಹೆಸರಿನಲ್ಲಿ ರಶೀದಿಗಳನ್ನು ಮುದ್ರಿಸುವ ಮೂಲಕ ದೇಣಿಗೆ ಸಂಗ್ರಹಿಸುತ್ತಿರುವುದು ಪೊಲೀಸ್ ತನಿಖೆಯಲ್ಲಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅನುಮತಿಯನ್ನು ರದ್ದುಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉರುಸ್ ಸಮಯದಲ್ಲಿ, ಆಯೋಜಕರು "ಮಾಟಮಂತ್ರ" ಮಾಡುವ ಮತ್ತು ಜನರನ್ನು "ದಾರಿ ತಪ್ಪಿಸುವ" ಕೆಲವು ಧರ್ಮಗುರುಗಳನ್ನು ಆಹ್ವಾನಿಸುತ್ತಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!