ಬಾಲಕ ಮಾಡಿದ ವಿಡಿಯೋ 
ದೇಶ

Air India Plane Crash: ವಿಮಾನ ಪತನದ ವೈರಲ್ ವಿಡಿಯೋ ಮಾಡಿದ ಬಾಲಕನ ಹೇಳಿಕೆ ದಾಖಲು

ವಿಡಿಯೋಗೆ ಸಂಬಂಧಿಸಿದಂತೆ ಬಾಲಕನನ್ನು ಬಂಧಿಸಲಾಗಿದೆ ಎಂಬ ಊಹಾಪೋಹಗಳನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಅಹಮದಾಬಾದ್: ಅಹಮದಾಬಾದ್ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಏರ್ ಇಂಡಿಯಾ ವಿಮಾನ ಪತನದ ದುರದೃಷ್ಟಕರ ದೃಶ್ಯವನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದ 17 ವರ್ಷದ ಬಾಲಕನ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಅಹಮದಾಬಾದ್ ಅಪರಾಧ ವಿಭಾಗ, ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ವಿಡಿಯೋ ಮಾಡಿದ ಬಾಲಕನ ಹೇಳಿಕೆಯನ್ನು ಸಾಕ್ಷಿಯಾಗಿ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.

ಏರ್ ಇಂಡಿಯಾ ವಿಮಾನ ಕಳೆದ ಗುರುವಾರ ಅತ್ಯಂತ ಕೆಟ್ಟ ದುರಂತಗಳಲ್ಲಿ ಒಂದಾಗಿ ಇತಿಹಾಸದಲ್ಲಿ ದಾಖಲಾಗುವ ಕೆಲವೇ ಕ್ಷಣಗಳ ಮುನ್ನ ಆರ್ಯನ್ ಎಂಬ ಬಾಲಕ ಅದರ ವಿಡಿಯೋ ಮಾಡಿದ್ದು, ವಿಡಿಯೋ ಮಾಡುವುದು ಹವ್ಯಾಸವಾಗಿತ್ತು.

ವಿಡಿಯೋಗೆ ಸಂಬಂಧಿಸಿದಂತೆ ಬಾಲಕನನ್ನು ಬಂಧಿಸಲಾಗಿದೆ ಎಂಬ ಊಹಾಪೋಹಗಳನ್ನು ಪೊಲೀಸರು ತಳ್ಳಿಹಾಕಿದ್ದಾರೆ.

"ಈ ವಿಡಿಯೋ ಮಾಡಿದ್ದಕ್ಕಾಗಿ ಯಾರನ್ನೂ ಬಂಧಿಸಲಾಗಿಲ್ಲ. ಮೊಬೈಲ್ ವಿಡಿಯೋದ ಸ್ಕ್ರೀನ್ ರೆಕಾರ್ಡಿಂಗ್ ವೈರಲ್ ಆಗಿದೆ. ವಿಡಿಯೋ ತೆಗೆದ ಅಪ್ರಾಪ್ತ ಬಾಲಕ ಪೊಲೀಸರಿಗೆ ವಿಡಿಯೋದ ವಿವರಗಳನ್ನು ನೀಡಿದ್ದಾನೆ. ಸಾಕ್ಷಿಯಾಗಿ ಹೇಳಿಕೆ ನೀಡಲು ಆತನ ತಂದೆಯೊಂದಿಗೆ ಬಂದಿದ್ದು, ನಂತರ ಆತನನ್ನು ಆತನ ತಂದೆಯೊಂದಿಗೆ ಕಳುಹಿಸಲಾಯಿತು. ಯಾರನ್ನೂ ಬಂಧಿಸಿಲ್ಲ" ಎಂದು ಅಪರಾಧ ಶಾಖೆ ತಿಳಿಸಿದೆ.

ವರದಿಗಾರರೊಂದಿಗೆ ಮಾತನಾಡಿದ ಆರ್ಯನ್, ರೆಕಾರ್ಡ್ ಮಾಡಲು ಪ್ರಾರಂಭಿಸಿದ 24 ಸೆಕೆಂಡುಗಳ ನಂತರ ವಿಮಾನ ಅಪಘಾತ ಸಂಭವಿಸಿತು ಎಂದು ಹೇಳಿದ್ದಾನೆ.

"ನಾನು ಕಣ್ಣಾರೆ ಕಂಡ ಕಾರಣ ನನಗೆ ತುಂಬಾ ಭಯವಾಯಿತು. ನನ್ನ ವಿಡಿಯೋವನ್ನು ಮೊದಲು ನನ್ನ ಸಹೋದರಿ ನೋಡಿದವಳು. ನಂತರ ಆಕೆ ನನ್ನ ತಂದೆಗೆ ತಿಳಿಸಿದಳು. ವಿಮಾನ ಅಪಘಾತಕ್ಕೀಡಾಗುತ್ತದೆ ಎಂದು ನನಗೆ ತಿಳಿದಿರಲಿಲ್ಲ" ಎಂದು ಆರ್ಯನ್ ಹೇಳಿದ್ದಾನೆ.

ವಿಡಿಯೋ ಮಾಡಿದ ನಂತರ ಆರ್ಯನ್ ತುಂಬಾ ಭಯಭೀತನಾಗಿದ್ದನು. ಈ ಪ್ರದೇಶ ಅಪಾಯಕಾರಿಯಾಗಿ ಪರಿಣಮಿಸಿರುವುದರಿಂದ ಅಲ್ಲಿ ವಾಸಿಸಲು ಬಯಸುವುದಿಲ್ಲ ಎಂದು ಆತನ ಸಹೋದರಿ ಹೇಳಿದ್ದಾರೆ.

ಅಪಘಾತದ ನಂತರ ಆರ್ಯನ್ ದುಃಖದಿಂದ ರಾತ್ರಿಯಿಡೀ ಎಚ್ಚರವಾಗಿದ್ದನು ಮತ್ತು ಏನನ್ನೂ ತಿನ್ನಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಜನರನ್ನು ಹೊತ್ತ ಬೋಯಿಂಗ್ 787 ಡ್ರೀಮ್‌ಲೈನರ್(AI 171) ವಿಮಾನ ಗುರುವಾರ ಮಧ್ಯಾಹ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರ ಪ್ರದೇಶದ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.

ಈ ದುರಂತದಲ್ಲಿ ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 270ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT