ಸಾಂದರ್ಭಿಕ ಚಿತ್ರ  
ದೇಶ

NEET UG 2025: ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದ NTA

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಎನ್ ಟಿಎ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್: neet.nta.nic.in ನಲ್ಲಿ ಅಂತಿಮ ಕೀ ಉತ್ತರಗಳನ್ನು ನೋಡಬಹುದು ಎಂದು ಸಂಸ್ಥೆ ಘೋಷಿಸಿದೆ.

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮೇ 4 ರಂದು ನಡೆಸಿದ NEET UG 2025 ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಂದು ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ವೈದ್ಯಕೀಯ ಪದವಿ ಮತ್ತು ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶವನ್ನು ನಿರ್ಧರಿಸುವ ಪರೀಕ್ಷೆಗೆ 20.87 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಎನ್ ಟಿಎ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್: neet.nta.nic.in ನಲ್ಲಿ ಅಂತಿಮ ಕೀ ಉತ್ತರಗಳನ್ನು ನೋಡಬಹುದು ಎಂದು ಸಂಸ್ಥೆ ಘೋಷಿಸಿದೆ.

ಜೂನ್ 3 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಯಿತು. ಯಾವುದೇ ವಿವಾದಿತ ಉತ್ತರಗಳಿಗೆ ಸವಾಲುಗಳನ್ನು ಸಲ್ಲಿಸಲು ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಕೀ ಉತ್ತರ ವಿಂಡೋ ಜೂನ್ 5 ರವರೆಗೆ ತೆರೆದಿತ್ತು.

ಈ ವರ್ಷ, ಭಾರತದಾದ್ಯಂತ 4,750 ಕೇಂದ್ರಗಳಲ್ಲಿ ಮತ್ತು ವಿದೇಶಗಳಲ್ಲಿ 14 ಕೇಂದ್ರಗಳಲ್ಲಿ ನಡೆಸಲಾದ ಪರೀಕ್ಷೆಗೆ 20.87 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಶ್ನೆ ಪತ್ರಿಕೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದಲ್ಲಿ 180 ಪ್ರಶ್ನೆಗಳನ್ನು ಒಳಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?