ಪಚಮದಾರ ಮತ್ತು ಕಟೇಜಿರಿಯಾ ಅರಣ್ಯ ಪ್ರದೇಶಗಳಲ್ಲಿ ಎನ್ ಕೌಂಟರ್ ನಡೆದಿದೆ 
ದೇಶ

ಮಧ್ಯಪ್ರದೇಶ: ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ನಕ್ಸಲೀಯರ ಹತ್ಯೆ!

ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಗ್ರೆನೇಡ್ ಲಾಂಚರ್, ಸ್ವಯಂ-ಲೋಡಿಂಗ್ ರೈಫಲ್, ಎರಡು 315 ಬೋರ್ ರೈಫಲ್‌ಗಳು ಮತ್ತಿತರ ಶಸ್ತ್ರಾಸ್ತ್ರಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ಬಾಲಘಾಟ್: ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆಯಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ಬಾಲಾಘಾಟ್ ನಕ್ಸಲ್ ಪೀಡಿತ ಜಿಲ್ಲೆಯಾಗಿದ್ದು, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಗ್ರೆನೇಡ್ ಲಾಂಚರ್, ಸ್ವಯಂ-ಲೋಡಿಂಗ್ ರೈಫಲ್, ಎರಡು 315 ಬೋರ್ ರೈಫಲ್‌ಗಳು ಮತ್ತಿತರ ಶಸ್ತ್ರಾಸ್ತ್ರಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ.

ಪಚ್ಮರ್ಹಿಯಲ್ಲಿ ಬಿಜೆಪಿ ತರಬೇತಿ ಶಿಬಿರ ಉದ್ಘಾಟಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಈ ಎನ್ ಕೌಂಟರ್ ನಡೆದಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಿಎಂ ಮೋಹನ್ ಯಾದವ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಮಾರ್ಚ್ 2026 ರ ವೇಳೆಗೆ ನಕ್ಸಲಿಸಂ ಮುಕ್ತ ಅಭಿಯಾನದಲ್ಲಿ ರಾಜ್ಯ ಪ್ರಮುಖ ಯಶಸ್ಸನ್ನು ಸಾಧಿಸಿದೆ ಎಂದು ಬರೆದುಕೊಂಡಿದ್ದಾರೆ.

ಪಚಮದಾರ ಮತ್ತು ಕಟೇಜಿರಿಯಾ ಅರಣ್ಯ ಪ್ರದೇಶಗಳಲ್ಲಿ ಮಧ್ಯ ಪ್ರದೇಶದ ನಕ್ಸಲ್ ನಿಗ್ರಹ ಪಡೆ, ಜಿಲ್ಲಾ ಪೊಲೀಸ್ ಪಡೆ, ಸಿಆರ್ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಓರ್ವ ಮಹಿಳೆ ಹಾಗೂ ಮೂವರು ಮಹಿಳಾ ನಕ್ಸಲೀಯರು ಹತ್ಯೆಯಾಗಿದೆ. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video