ಡಿಎನ್ ಎ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಅವಶೇಷಗಳ ಹಸ್ತಾಂತರ 
ದೇಶ

Air India plane crash: ದುರಂತದಲ್ಲಿ ಮೃತಪಟ್ಟ 18 ಜನರ ಗುರುತು ಇನ್ನೂ ಪತ್ತೆಯಾಗಿಲ್ಲ!

ಇಲ್ಲಿಯವರೆಗೆ 272 ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ.

ಅಹಮದಾಬಾದ್: ಏರ್ ಇಂಡಿಯಾ-171 ವಿಮಾನ ಅಪಘಾತ ಸಂಭವಿಸಿ ಕೆಲವು ದಿನಗಳಾದರೂ, ಮೃತರ ಸಂಖ್ಯೆ ಮತ್ತು ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ದುರದೃಷ್ಟಕರ ಏರ್ ಇಂಡಿಯಾ ವಿಮಾನದಲ್ಲಿ 242 ಮಂದಿ ಪ್ರಯಾಣಿಸುತ್ತಿದ್ದರೂ, ಅಹಮದಾಬಾದ್‌ನ ಬಿಜೆ ವೈದ್ಯಕೀಯ ಕಾಲೇಜು ಮತ್ತು ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾನೆ.

ಶನಿವಾರ, ಕಾಲೇಜಿನ ಜೂನಿಯರ್ ವೈದ್ಯರ ಸಂಘದ ಅಧ್ಯಕ್ಷ ಡಾ. ಧವಲ್ ಗಮೇಟಿ ಮಾತನಾಡಿ 270 ಶವಗಳನ್ನು ಸಿವಿಲ್ ಆಸ್ಪತ್ರೆಗೆ ಸ್ವೀಕರಿಸಲಾಗಿದೆ ಎಂದು ಹೇಳಿದರು. ಇಲ್ಲಿಯವರೆಗೆ 272 ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 13ಮಂದಿ ಇತರರೂ ಸೇರಿದ್ದಾರೆ - ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಇತರ 18 ವ್ಯಕ್ತಿಗಳು ಯಾರು (272 - [241 + 13]) ಏನು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಡಿಎನ್‌ಎ ಗುರುತಿನ ಪ್ರಕ್ರಿಯೆ ಮುಗಿದ ನಂತರವೇ ಸಾವಿನ ನಿಖರ ಸಂಖ್ಯೆ ತಿಳಿಯಬಹುದು ಎಂದು ಸರ್ಕಾರ ಹೇಳಿದೆ. ಇಲ್ಲಿಯವರೆಗೆ, ಡಿಎನ್‌ಎ ಪರೀಕ್ಷೆಯ ಮೂಲಕ 80 ಸಂತ್ರಸ್ತರನ್ನು ಗುರುತಿಸಲಾಗಿದೆ. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 33 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ರೂಪಾನಿ ಅವರ ಗೌರವಾರ್ಥವಾಗಿ ಗುಜರಾತ್ ಸರ್ಕಾರ ಸೋಮವಾರ ರಾಜ್ಯ ಶೋಕಾಚರಣೆಯನ್ನು ಘೋಷಿಸಿತು.

ಏತನ್ಮಧ್ಯೆ, ಪ್ರಧಾನ ಕಾರ್ಯದರ್ಶಿ ಡಾ. ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ಪ್ರಧಾನಿ ಕಚೇರಿಯ ಉನ್ನತ ಮಟ್ಟದ ತಂಡವು ನಡೆಯುತ್ತಿರುವ ಪರಿಹಾರ ಮತ್ತು ತನಿಖಾ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಅಹಮದಾಬಾದ್‌ಗೆ ಆಗಮಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT