ಮುಂಬಯಿ: ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‌ನಲ್ಲಿ ಮಂಗಳವಾರ ಮುಂಜಾನೆ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಪ್ರಯಾಣಿಕರನ್ನು ಕೆಳಗಿಳಿಸಬೇಕಾಯಿತು.
ಮಂಗಳವಾರ ಮುಂಜಾನೆ ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ.
AI180 ವಿಮಾನವು ನಿಲ್ದಾಣಕ್ಕೆ ಸರಿಯಾದ ಸಮಯಕ್ಕೆ ಬಂದಿತು ಆದರೆ ಎಡಭಾಗದ ಎಂಜಿನ್‌ನಲ್ಲಿನ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ವಿಳಂಬವಾಯಿತು. ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಗದಿತ ನಿಲುಗಡೆಯ ಸಮಯದಲ್ಲಿ ಪ್ರಯಾಣಿಕರು ಇಳಿಯಬೇಕಾಯಿತು.
ಎಡ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಕೋಲ್ಕತ್ತಾದಿಂದ ಮುಂಬೈಗೆ ಟೇಕಾಫ್ ಆಗುವುದು ವಿಳಂಬವಾಯಿತು.ಏರ್ ಇಂಡಿಯಾ ವಿಮಾನ AI180 ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ವೇಳಾಪಟ್ಟಿಯ ಪ್ರಕಾರ ಹೊರಟಿತು. ಆದಾಗ್ಯೂ, ಅದು ಬೆಳಗ್ಗೆ 12:45 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಎಡ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು.
ನಾಲ್ಕು ಗಂಟೆಗಳಿಗೂ ಹೆಚ್ಚು ಸಮಯದ ನಂತರ, ಬೆಳಗ್ಗೆ 5:20 ಕ್ಕೆ, ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಯುವಂತೆ ಪ್ರಕಟಣೆ ಹೊರಡಿಸಲಾಯಿತು. ವಿಮಾನ ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕ್ಯಾಪ್ಟನ್ ಪ್ರಯಾಣಿಕರಿಗೆ ತಿಳಿಸಿದರು.