ವಿಶ್ವಾಸ್ ಕುಮಾರ್ ರಮೇಶ್ 
ದೇಶ

Air India Plane crash: ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್; ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗಿ

40 ವರ್ಷದ ಭಾರತೀಯ ಮೂಲದ ಬ್ರಿಟಿಷ್ ಉದ್ಯಮಿ ವಿಶ್ವಾಸ್ ಅವರನ್ನು ಮಂಗಳವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ರಮೇಶ್ ಅವರು ಅಹಮದಾಬಾದ್ ಸಿವಿಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅದೇ ವಿಮಾನದಲ್ಲಿ ತನ್ನೊಂದಿಗೆ ಪ್ರಯಾಣಿಸುತ್ತಿದ್ದ ಅವರ ಸಹೋದರ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಲೀಸೆಸ್ಟರ್‌ನ 40 ವರ್ಷದ ಭಾರತೀಯ ಮೂಲದ ಬ್ರಿಟಿಷ್ ಉದ್ಯಮಿ ವಿಶ್ವಾಸ್ ಅವರನ್ನು ಮಂಗಳವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

ಡಿಎನ್‌ಎ ಪರೀಕ್ಷೆ ಮೂಲಕ ವಿಶ್ವಾಸ್ ಅವರ ಸಹೋದರ ಅಜಯ್ ಅವರ ಮೃತದೇಹದ ಗುರುತನ್ನು ದೃಢಪಡಿಸಿದ ನಂತರ ಬುಧವಾರ ಬೆಳಗ್ಗೆ ಕುಟುಂಬಕ್ಕೆ ಹಸ್ತಾಂತರಿಸಲಾಯಿತು ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ವರದಿಗಾರರಿಗೆ ತಿಳಿಸಿದ್ದಾರೆ.

"ವಿಶ್ವಾಸ್ ಅವರ ಕುಟುಂಬವು ಈಗಾಗಲೇ ಯುನೈಟೆಡ್ ಕಿಂಗ್‌ಡಮ್‌ನಿಂದ ಇಲ್ಲಿಗೆ ಬಂದಿದೆ. ಅವರು ಚೇತರಿಸಿಕೊಂಡ ನಂತರ, ಮಂಗಳವಾರ ಸಂಜೆ 7.30 ಕ್ಕೆ ನಾವು ವಿಶ್ವಾಸ್‌ಗೆ ಡಿಸ್ಚಾರ್ಜ್ ಮಾಡಿದ್ದೇವೆ ಮತ್ತು ಡಿಎನ್‌ಎ ಹೊಂದಾಣಿಕೆಯ ನಂತರ ಅವರ ಸಹೋದರನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು" ಎಂದು ಅವರು ಹೇಳಿದ್ದಾರೆ.

ಡಿಯು ಮೂಲದವರಾದ ವಿಶ್ವಾಸ್ ಮತ್ತು ಅಜಯ್, ಕೇಂದ್ರಾಡಳಿತ ಪ್ರದೇಶದಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆದ ನಂತರ ಏರ್ ಇಂಡಿಯಾ ವಿಮಾನದಲ್ಲಿ ಲಂಡನ್‌ಗೆ ಹಿಂತಿರುಗುತ್ತಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ವಿಡಿಯೋದಲ್ಲಿ, ದಮನ್ ಮತ್ತು ಡಿಯು ಕೇಂದ್ರಾಡಳಿತ ಪ್ರದೇಶವಾದ ಡಿಯುನಲ್ಲಿ ವಿಶ್ವಾಸ್ ಅವರು ತನ್ನ ಸಹೋದರನ ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಸ್ಮಶಾನ ಸ್ಥಳಕ್ಕೆ ಹೋಗುತ್ತಿರುವುದನ್ನು ಕಾಣಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ