ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್ ಸಾಂದರ್ಭಿಕ ಚಿತ್ರ 
ದೇಶ

ಪಾಕ್ ಮಂಡಿಯೂರಿದ್ದಕ್ಕೆ ಕದನ ವಿರಾಮಕ್ಕೆ ಒಪ್ಪಿದ್ದೇವೆ, ನಿಮ್ಮ ಮಧ್ಯಸ್ಥಿಕೆಯಿಂದಲ್ಲ; ಟ್ರಂಪ್'ಗೆ ಪ್ರಧಾನಿ ಮೋದಿ ಟಾಂಗ್; Video

ಟ್ರಂಪ್ ಅವರೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಪ್ರಧಾನಿ ಮೋದಿಯವರು ಕಾಶ್ಮೀರ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಭಾರತ ಎಂದಿಗೂ ಒಪ್ಪುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ನಾನೇ ಕದನ ವಿರಾಮ ಒಪ್ಪಂದ ಮಾಡಿಸಿದ್ದು ಎಂದು ವಿಶ್ವದ ಮುಂದೆ ಬಡಾಯಿ ಕೊಚ್ಚುತ್ತಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾಸ್ತವತೆಯ ಪರಿಚಯ ಮಾಡಿಸಿದ್ದಾರೆ.

ಮಂಗಳವಾರ ತಡರಾತ್ರಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಡುವೆ 35 ನಿಮಿಷಗಳ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪವಾಯಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಮಾಹಿತಿ ನೀಡಿದ್ದಾರೆ.

ಮಾತುಕತೆ ವೇಳೆ ಪ್ರಧಾನಿ ಮೋದಿಯವರು ಭಾರತದ ಭಯೋತ್ಪಾದನಾ ವಿರೋಧಿ ಕ್ರಮಗಳ ಬಗ್ಗೆ, ವಿಶೇಷವಾಗಿ ಆಪರೇಷನ್ ಸಿಂಧೂರ್ ಬಗ್ಗೆ ಟ್ರಂಪ್ ಬಳಿ ವಿವರವಾಗಿ ಚರ್ಚಿಸಿದರು ಎಂದು ಹೇಳಿದ್ದಾರೆ.

ಇದೇ ವೇಳೆ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸುವ ವಿಷಯವನ್ನೂ ಮೋದಿಯವರು ಪ್ರಸ್ತಾಪಿಸಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ವಿಚಾರದಲ್ಲಿ ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆಂದು ತಿಳಿಸಿದ್ದಾರೆ.

ಜಿ 7 ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಭೇಟಿಯಾಗಬೇಕಿತ್ತು. ಆದರೆ, ಅಧ್ಯಕ್ಷ ಟ್ರಂಪ್ ಅವರು ಅಮೆರಿಕಕ್ಕೆ ಬೇಗನೆ ಹಿಂತಿರುಗಬೇಕಾಯಿತು, ಇದರಿಂದಾಗಿ ಈ ಸಭೆ ನಡೆಯಲು ಸಾಧ್ಯವಾಗಲಿಲ್ಲ. ನಂತರ, ಅಧ್ಯಕ್ಷ ಟ್ರಂಪ್ ಅವರ ಕೋರಿಕೆಯ ಮೇರೆಗೆ, ಉಭಯ ರಾಷ್ಟ್ರಗಳ ನಾಯಕರು ಇಂದು ದೂರವಾಣಿ ಮೂಲಕ ಮಾತನಾಡಿದರು.

ಈ ಸಂಭಾಷಣೆ ಸುಮಾರು 35 ನಿಮಿಷಗಳ ಕಾಲ ನಡೆಯಿತು, ಇದರಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್ ಮತ್ತು ನಂತರದ ಭಾರತ-ಪಾಕಿಸ್ತಾನ ಉದ್ವಿಗ್ನತೆಯನ್ನು ವಿವರವಾಗಿ ಚರ್ಚಿಸಲಾಯಿತು.

ಏಪ್ರಿಲ್ 22 ರ ನಂತರ ಭಾರತವು ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳುವ ತನ್ನ ದೃಢನಿಶ್ಚಯದ ಬಗ್ಗೆ ಇಡೀ ಜಗತ್ತಿಗೆ ತಿಳಿಸಿದೆ ಎಂದು ಪ್ರಧಾನಿ ಮೋದಿ ಅಧ್ಯಕ್ಷ ಟ್ರಂಪ್ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಎಂದಿಗೂ ಮೂರನೇ ಶಕ್ತಿಯ ಮಧ್ಯಸ್ಥಿಕೆ ಕೇಳಿಲ್ಲ, ಮುಂದೆಯೂ ಕೇಳುವುದಿಲ್ಲ ಎಂದು ತಿಳಿಸಿದ್ದಾರೆಂದು ಮಿಶ್ರಿ ಅವರು ತಿಳಿಸಿದ್ದಾರೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಮಧ್ಯಸ್ಥಿಕೆ ಕುರಿತು, ಅಮೆರಿಕದೊಂದಿಗೆ ಯಾವುದೇ ಮಟ್ಟದಲ್ಲಿ ಮಾತುಕತೆ ನಡೆದಿಲ್ಲ. ಮಿಲಿಟರಿ ಕ್ರಮವನ್ನು ನಿಲ್ಲಿಸುವ ಕುರಿತು, ಭಾರತ ಮತ್ತು ಪಾಕಿಸ್ತಾನದ ನಡುವೆ ನೇರವಾಗಿ ಮಾತುಕತೆಗಳು ನಡೆದಿವೆ ಎಂದು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ, ಭಾರತ ಮೊದಲಿನಿಂದಲೂ ದ್ವಿಪಕ್ಷೀಯ ಮಾತುಕತೆಗೆ ಒತ್ತು ನೀಡಿದೆ. ಇದರಲ್ಲಿ ಮೂರನೇ ಶಕ್ತಿಯ ಮಧ್ಯಸ್ಥಿಕೆಯನ್ನು ಭಾರತ ಎಂದಿಗೂ ಒಪ್ಪಿಕೊಂಡಿಲ್ಲ. ಮುಂದೆ ಒಪ್ಪುವುದೂ ಇಲ್ಲ. ಈ ಪ್ರಾದೇಶಿಕ ವಿವಾದ ಬಗೆಹರಿಯಲು ಮೂರನೇ ಶಕ್ತಿಯ ಅವಶ್ಯಕತೆಯಯೇ ಇಲ್ಲ ಎಂಬುದು ಭಾರತದ ದೃಢವಾದ ನಿಲುವು ಎಂದು ಪ್ರಧಾನಿ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಮಾತನ್ನು ಮೌನವಾಗಿ ಆಲಿಸಿದ ಡೊನಾಲ್ಡ್‌ ಟ್ರಂಪ್‌ ಅವರು, ಈ ವಿಚಾರವಾಗಿ ಭಾರತದ ಅಭಿಪ್ರಾಯಕ್ಕೆ ಸಹಮತಿ ಇದೆ ಎಂದು ಹೇಳಿದ್ದಾಗಿ ಮೂಲಗಳು ಖಚಿತಪಡಿಸಿವೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತ "ಆಪರೇಷನ್‌ ಸಿಂಧೂರ" ಹೆಸರಿನ ಸೇನಾ ಕಾರ್ಯಾಚರಣೆಯನ್ನು ಕೈಗೊಂಡಿತ್ತು.

ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಸುಮಾರು 9 ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು, ಕ್ಷಿಪಣಿ ದಾಳಿ ನಡೆಸಿತ್ತು. ಇದರಿಂದ ಪಾಕಿಸ್ತಾನ ಭಾರೀ ಹಾನಿ ಎದುರಿಸುವಂತಾಗಿತ್ತು. ಬಳಿಕ ಪಾಕಿಸ್ತಾನ ಕೂಡಲೇ ಕದನ ವಿರಾಮ ಒಪ್ಪಂದಕ್ಕೆ ಭಾರತಕ್ಕೆ ಮನವಿ ಮಾಡಿತ್ತು. ಆದರೆ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾತ್ರ ತಮ್ಮಿಂದಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಹೇಳುತ್ತಿದ್ದರು. ಟ್ರಂಪ್ ಅವರ ಈ ಹೇಳಿಕೆಯನ್ನು ಭಾರತ ನಿರಾಕರಿಸಿತ್ತು.

ಭಾರತದ ವಿದೇಶಾಂಗ ಸಚಿವ ಡಾ.ಎಸ್.‌ ಜೈಶಂಕರ್‌ ಕೂಡ, ಅಮೆರಿಕಾ ಮಧ್ಯಸ್ಥಿಕೆ ವಾದವನ್ನು ನಿರಾಕರಿಸಿದ್ದರು. ಆದರೆ, ಮೋದಿಯವರು ಮೌನ ಕುರಿತು ವಿರೋಧ ಪಕ್ಷಗಳ ನಾಯಕರು ಟೀಕೆ ಮಾಡುತ್ತಿದ್ದರು. ಟ್ರಂಪ್ ಅವರೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಪ್ರಧಾನಿ ಮೋದಿಯವರು ಕಾಶ್ಮೀರ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಭಾರತ ಎಂದಿಗೂ ಒಪ್ಪುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT