ಏರ್ ಇಂಡಿಯಾ ವಿಮಾನ 
ದೇಶ

ದೆಹಲಿಯಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ, ಪ್ರಯಾಣ ರದ್ದು

ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಪುಣೆಯಲ್ಲಿ ಇಳಿದ ನಂತರ ಹಕ್ಕಿ ಡಿಕ್ಕಿಯಾಗಿರುವುದು ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಮುಂಬೈ: ದೆಹಲಿಯಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಶುಕ್ರವಾರ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ತನ್ನ ಪ್ರಯಾಣವನ್ನು ರದ್ದುಗೊಳಿಸಿದೆ.

ಜೂನ್ 12 ರಂದು ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಅಹಮದಾಬಾದ್‌ನಲ್ಲಿ ಪತನಗೊಂಡಿತ್ತು.

ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಪುಣೆಯಲ್ಲಿ ಇಳಿದ ನಂತರ ಹಕ್ಕಿ ಡಿಕ್ಕಿಯಾಗಿರುವುದು ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

'ಜೂನ್ 20 ರಂದು ಪುಣೆಯಿಂದ ದೆಹಲಿಗೆ ಹಾರಲು ನಿಗದಿಯಾಗಿದ್ದ AI2470 ವಿಮಾನವು ಪಕ್ಷಿ ಡಿಕ್ಕಿ ಹೊಡೆದ ಕಾರಣ ರದ್ದುಗೊಂಡಿದೆ. ವಿಮಾನವು ಪುಣೆಯಲ್ಲಿ ಸುರಕ್ಷಿತವಾಗಿ ಇಳಿದ ನಂತರ ಎಂಜಿನಿಯರಿಂಗ್ ತಂಡವು ವ್ಯಾಪಕ ತಪಾಸಣೆ ನಡೆಸುತ್ತಿದೆ. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರಿಗೆ ವಸತಿ ಸೌಕರ್ಯ ಒದಗಿಸುವುದು ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ' ಎಂದು ಏರ್ ಇಂಡಿಯಾ ಹೇಳಿದೆ.

ಟಿಕೆಟ್ ರದ್ದತಿ ಅಥವಾ ಕಾಂಪ್ಲಿಮೆಂಟರಿ ರೀಶೆಡ್ಯೂಲಿಂಗ್ ಮೇಲಿನ ರೀಫಂಡ್ ಆಯ್ಕೆಯನ್ನು ಸಹ ಪ್ರಯಾಣಿಕರಿಗೆ ನೀಡಲಾಗುತ್ತಿದೆ. ಪ್ರಯಾಣಿಕರನ್ನು ದೆಹಲಿಗೆ ಕರೆದೊಯ್ಯಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!