ಅಪಘಾತಕ್ಕೀಡಾದ ಬೊಲೆರೊ 
ದೇಶ

ಜಾರ್ಖಂಡ್: ಬೊಲೆರೊ-ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಇಂದು ಬೆಳಗ್ಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯಲ್ಲಿ ಈ ಅಪಘಾತ ನಡೆದಿದ್ದು, ಬೊಲೆರೊದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ರಾಂಚಿ: ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಶುಕ್ರವಾರ ಮದುವೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಬೊಲೆರೊ ವಾಹನ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯಲ್ಲಿ ಈ ಅಪಘಾತ ನಡೆದಿದ್ದು, ಬೊಲೆರೊದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ನೀಮ್ದಿಹ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಸಂತನ್ ತಿವಾರಿ ಅವರು ತಿಳಿಸಿದ್ದಾರೆ.

ಜಾರ್ಖಂಡ್‌ನ ಸೆರೈಕೆಲಾ-ಖರ್ಸವಾನ್ ಜಿಲ್ಲೆಯ ಚಾಂಡಿಲ್ ಉಪವಿಭಾಗದ ಗಡಿಯಲ್ಲಿರುವ ಪಶ್ಚಿಮ ಬಂಗಾಳದ ಬಲರಾಂಪುರ ಪೊಲೀಸ್ ಠಾಣೆ ಪ್ರದೇಶದ ನಾಮ್ಶೋಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹೀಂದ್ರಾ ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಜನ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿದ ಹಿಂತಿರುಗುತ್ತಿದ್ದರು ಎಂದು ತಿವಾರಿ ಹೇಳಿದ್ದಾರೆ.

ಡಿಕ್ಕಿಯ ರಭಸಕ್ಕೆ ಟ್ರಕ್​ ಭತ್ತದ ಗದ್ದೆಗೆ ನುಗ್ಗಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಒಂಬತ್ತೂ ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಎಲ್ಲರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪುರುಲಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಸ್ಥಳೀಯರು ಹೇಳುವಂತೆ ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿತ್ತು ಮತ್ತು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ, ಬಲರಾಂಪುರ ಮತ್ತು ಚಾಂಡಿಲ್ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ನಜ್ಜುಗುಜ್ಜಾದ ವಾಹನದಿಂದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಪ್ರಸ್ತುತ ಚಾಲಕನ ಪತ್ತೆಗೆ ಹುಡುಕಾಟ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?