ಇರಾನಿನ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಮೊಹಮ್ಮದ್ ಜಾವದ್ ಹೊಸೇನಿ PTI
ದೇಶ

Operation Sindhu: 'ನಾವು ಭಾರತೀಯರನ್ನು ನಮ್ಮ ಸ್ವಂತ ಜನರೆಂದು ಪರಿಗಣಿಸುತ್ತೇವೆ': Iran

ಕಳೆದ ವಾರ ಇರಾನ್‌ನ ಮಿಲಿಟರಿ ಮತ್ತು ಪರಮಾಣು ಮೂಲಸೌಕರ್ಯದ ಮೇಲೆ ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯಿಂದ ಪ್ರಚೋದಿಸಲ್ಪಟ್ಟ ಸಂಘರ್ಷದ ಸಾಕಷ್ಟು ಸಾವು ನೋವು ಸಂಭವಿಸಿದೆ.

ನವದೆಹಲಿ: ಸಂಘರ್ಷ ಪೀಡಿತ ಇರಾನ್ ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ರವಾನೆಗೆ ಸ್ಪಂದಿಸಿರುವ ಇರಾನ್ ಸರ್ಕಾರ ತನ್ನ ವಾಯುಪ್ರದೇಶ ತೆರೆದಿದ್ದು, 'ನಾವು ಭಾರತೀಯರನ್ನು ನಮ್ಮ ಸ್ವಂತ ಜನರೆಂದು ಪರಿಗಣಿಸುತ್ತೇವೆ' ಎಂದು ಹೇಳಿದೆ.

ಸಂಘರ್ಷ ಪೀಡಿತ ಇರಾನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಮೂರು ಚಾರ್ಟರ್ಡ್ ಸ್ಥಳಾಂತರಿಸುವ ವಿಮಾನಗಳ ಪೈಕಿ ಮೊದಲನೆಯದು ಭಾರತದ ಆಪರೇಷನ್ ಸಿಂಧು ರಕ್ಷಣಾ ಪ್ರಯತ್ನದ ಭಾಗವಾಗಿ ಶುಕ್ರವಾರ ತಡರಾತ್ರಿ ದೆಹಲಿಯಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ.

ಈ ಬೆಳವಣಿಗೆ ಬೆನ್ನಲ್ಲೇ ದೆಹಲಿಯಲ್ಲಿರುವ ಇರಾನಿನ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಮೊಹಮ್ಮದ್ ಜಾವದ್ ಹೊಸೇನಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದು, 'ನಾವು ಭಾರತೀಯರನ್ನು ನಮ್ಮ ಸ್ವಂತ ಜನರು ಎಂದು ಪರಿಗಣಿಸುತ್ತೇವೆ. ಇರಾನ್‌ನ ವಾಯುಪ್ರದೇಶವನ್ನು ಮುಚ್ಚಲಾಗಿದೆ. ಆದರೆ ಈ ಸಮಸ್ಯೆಯಿಂದಾಗಿ, ಭಾರತೀಯ ಪ್ರಜೆಗಳ ಸುರಕ್ಷಿತ ಪ್ರಯಾಣಕ್ಕಾಗಿ ಅದನ್ನು ತೆರೆಯಲು ನಾವು ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ' ಎಂದು ಹೇಳಿದರು.

ಸ್ಥಳಾಂತರಿಸುವಿಕೆ ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಇರಾನಿನ ವಿದೇಶಾಂಗ ಸಚಿವಾಲಯವು ಭಾರತದ ವಿದೇಶಾಂಗ ಸಚಿವಾಲಯದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ಭೂ-ರಾಜಕೀಯ ಸೂಕ್ಷ್ಮತೆಗಳಿಂದಾಗಿ ಯಾವುದೇ ಚಾರ್ಟರ್ಡ್ ವಿಮಾನಗಳು ಪಾಕಿಸ್ತಾನದ ವಾಯುಪ್ರದೇಶದ ಮೂಲಕ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರು ಮಾಹಿತಿ ನೀಡಿದರು.

"ಇರಾನ್‌ನ ಮಶಾದ್‌ನಿಂದ ಬಂದಿಳಿದ ಮಹಾನ್ ಏರ್ ಸ್ಥಳಾಂತರಿಸುವ ವಿಮಾನವು 290 ವಿದ್ಯಾರ್ಥಿಗಳನ್ನು ಹೊತ್ತೊ ಬಂದಿದ್ದು, ಅವರಲ್ಲಿ ಹೆಚ್ಚಿನವರು ಕಾಶ್ಮೀರದವರಾಗಿದ್ದಾರೆ. ಇದೀಗ ನವದೆಹಲಿಯಲ್ಲಿ ವಿಮಾನ ಸುರಕ್ಷಿತವಾಗಿ ಬಂದಿಳಿದಿದೆ.

ಸಮಯೋಚಿತ ಹಸ್ತಕ್ಷೇಪ ಮತ್ತು ಬೆಂಬಲಕ್ಕಾಗಿ ಭಾರತ ಸರ್ಕಾರ, ವಿದೇಶಾಂಗ ಸಚಿವಾಲಯ ಮತ್ತು ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಅವರ ವಾಪಸಾತಿಗಾಗಿ ಕಾತರದಿಂದ ಕಾಯುತ್ತಿದ್ದ ಕುಟುಂಬಗಳಿಗೆ ಇದು ಒಂದು ದೊಡ್ಡ ಪರಿಹಾರ ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘಟನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಕಳೆದ ವಾರ ಇರಾನ್‌ನ ಮಿಲಿಟರಿ ಮತ್ತು ಪರಮಾಣು ಮೂಲಸೌಕರ್ಯದ ಮೇಲೆ ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯಿಂದ ಪ್ರಚೋದಿಸಲ್ಪಟ್ಟ ಸಂಘರ್ಷದ ಸಾಕಷ್ಟು ಸಾವು ನೋವು ಸಂಭವಿಸಿದೆ. ಈ ಬೆಳವಣಿಗೆ ಬಳಿಕ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿದ್ದು, ಇರಾನ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸ್ ಕರೆತರಲು ಭಾರತ ಸರ್ಕಾರ ಆಪರೇಷನ್ ಸಿಂಧು ಕಾರ್ಯಾಚರಣೆ ಆರಂಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT