ಸಂಗ್ರಹ ಚಿತ್ರ 
ದೇಶ

24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಾಲಾ ಶಿಕ್ಷಕನ ಬಂಧನ!

8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳು ಕಿರುಕುಳದ ಬಗ್ಗೆ ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ ನಂತರ ಈ ವಿಚಾರ ಬೆಳಕಿಗೆ ಬಂದಿದ್ದು, ಶಾಲಾ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶಿಮ್ಲಾ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳು ಕಿರುಕುಳದ ಬಗ್ಗೆ ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ ನಂತರ ಈ ವಿಚಾರ ಬೆಳಕಿಗೆ ಬಂದಿದ್ದು, ಶಾಲಾ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ.

ಶಿಕ್ಷಕ ತಮ್ಮನ್ನು ಅನುಚಿತವಾಗಿ ಮುಟ್ಟಿದ್ದಾರೆ ಎಂದು ಆರೋಪಿಸಿ 24 ವಿದ್ಯಾರ್ಥಿಗಳು ಶುಕ್ರವಾರ ಪ್ರಾಂಶುಪಾಲರಿಗೆ ಲಿಖಿತ ದೂರು ನೀಡಿದ್ದಾರೆ. ನಂತರ ದೂರನ್ನು ಶಾಲೆಯ ಲೈಂಗಿಕ ಕಿರುಕುಳ ವಿರೋಧಿ ಸಮಿತಿಗೆ ರವಾನಿಸಲಾಗಿದೆ ಎಂದು ಶಾಲಾ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿದ್ಯಾರ್ಥಿಗಳ ಪೋಷಕರನ್ನು ಸಭೆಗೆ ಕರೆಯಲಾಗಿತ್ತು ಮತ್ತು ಅವರಲ್ಲಿ ಹೆಚ್ಚಿನವರಿಗೆ ತಮ್ಮ ಮಕ್ಕಳು ಎದುರಿಸುತ್ತಿರುವ ಕಿರುಕುಳದ ಬಗ್ಗೆ ತಿಳಿದಿರಲಿಲ್ಲ ಎಂಬುದು ಕಂಡುಬಂದಿದೆ ಎಂದು ಅವರು ಹೇಳಿದರು.

ಸದ್ಯ ಶಿಕ್ಷಕನನ್ನು ಬಂಧಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

UKP 3ನೇ ಹಂತ: ನೀರಾವರಿ ಭೂಮಿಗೆ 40 ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ

Operation Sindoor ವೇಳೆ ಮೂರನೇ ದೇಶದ ಮಧ್ಯಸ್ಥಿಕೆ ಇರಲಿಲ್ಲ: ಟ್ರಂಪ್ ಮುಖವಾಡ ಬಯಲು ಮಾಡಿದ ಪಾಕ್ ಸಚಿವ

Gaza ವಶಕ್ಕೆ ಇಸ್ರೇಲ್ ಕಾರ್ಯಾಚರಣೆ; US ಕುಮ್ಮಕ್ಕು: IDF ದಾಳಿಯಲ್ಲಿ 62 ಪ್ಯಾಲೆಸ್ತೀನಿಯರು ಸಾವು, ಲಕ್ಷಾಂತರ ಮಂದಿ ಪಲಾಯನ!

Devil ಸಿನಿಮಾ ಚಿತ್ರೀಕರಣ ವೇಳೆ ನೆಲದ ಮೇಲೆ ಬಿದ್ದು ನರಳಾಡಿದ Darshan: Video ನೋಡಿ ರೊಚ್ಚಿಗೆದ್ದ DBoss ಫ್ಯಾನ್ಸ್!

Asia Cup 2025: ಟೂರ್ನಿಯಿಂದ ಪಾಕಿಸ್ತಾನ ಹೊರನಡೆದರೆ ಏನಾಗಬಹುದು? ಯಾರಿಗೆ ನಷ್ಟ!

SCROLL FOR NEXT