ಮಲ್ಲಿಕಾರ್ಜುನ ಖರ್ಗೆ -ಶಶಿ ತರೂರ್ 
ದೇಶ

'ನಮಗೆ ದೇಶ ಮೊದಲು, ಕೆಲವರಿಗೆ ನರೇಂದ್ರ ಮೋದಿ ಮೊದಲು': ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ; Video

ತರೂರ್ ಅವರ ಹೇಳಿಕೆಗಳು ಮತ್ತು ಖರ್ಗೆ ಅವರ ತೀಕ್ಷ್ಣ ಪ್ರತಿಕ್ರಿಯೆಯು, ಆಂತರಿಕ ಭಿನ್ನಾಭಿಪ್ರಾಯದ ಬಗ್ಗೆ ಕಾಂಗ್ರೆಸ್‌ನೊಳಗೆ ಹೆಚ್ಚುತ್ತಿರುವ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ.

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕೆ ಸಂಬಂಧಿಸಿದ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು' ಎಂದು ತೀಕ್ಷ್ಣವಾಗಿ ಟೀಕಿಸಿದ್ದಾರೆ.

ಪ್ರಧಾನಿ ಮೋದಿಯವರ ಶಕ್ತಿ, ಕ್ರಿಯಾಶೀಲತೆ ಮತ್ತು ಎಲ್ಲದರಲ್ಲೂ ತೊಡಗಿಕೊಳ್ಳುವ ಅವರ ಸಾಮರ್ಥ್ಯವು ಜಾಗತಿಕ ವೇದಿಕೆಯಲ್ಲಿ ಭಾರತಕ್ಕೆ 'ಬಹುದೊಡ್ಡ ಆಸ್ತಿ'ಯಾಗಿದೆ ಎಂದು ವಿವರಿಸಿದ ತರೂರ್ ಅವರ ಲೇಖನ 'ದಿ ಹಿಂದೂ' ಪತ್ರಿಕೆಯಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಈ ಟೀಕೆ ಬಂದಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ನಂತರ ಶಶಿ ತರೂರ್ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಪಕ್ಷದ ನಾಯಕರೊಂದಿಗಿನ ಅವರ ಸಂಬಂಧವನ್ನು ಮತ್ತಷ್ಟು ಹದಗೆಡಿಸಿತು. ಪಕ್ಷದ ಹಲವಾರು ಮುಖಂಡರು ಈಗಾಗಲೇ ತರೂರ್ ಪಕ್ಷದಿಂದ ವಿಮುಖರಾಗಿದ್ದಾರೆ ಎಂದು ಆರೋಪಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆಚ್ಚುತ್ತಿರುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ತರೂರ್, ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ, ತಮ್ಮ ಲೇಖನವನ್ನು ಬಿಜೆಪಿಗೆ 'ಸೇರಲು ಮಾಡುತ್ತಿರುವ' ಸಂಕೇತವಾಗಿ ನೋಡಬಾರದು. ತಾವು ರಾಷ್ಟ್ರೀಯ ಹಿತಾಸಕ್ತಿ ಮತ್ತು ಏಕತೆಯ ದೃಷ್ಟಿಯಿಂದ ಈ ಹೇಳಿಕೆಗಳನ್ನು ನೀಡಿರುವುದಾಗಿ ಸ್ಪಷ್ಟಪಡಿಸಿದ್ದರು.

ಆದಾಗ್ಯೂ, ಕಾಂಗ್ರೆಸ್ ತರೂರ್ ಅವರಿಂದ ದೂರವಿತ್ತು. ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನಾಟೆ ಸೋಮವಾರ, ತರೂರ್ ಅವರ ಹೇಳಿಕೆಗಳು ವೈಯಕ್ತಿಕವಾಗಿದ್ದು, ಕಾಂಗ್ರೆಸ್ ಅಧಿಕೃತ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. 'ಇದು ಅವರ ಸ್ವಂತ ಅಭಿಪ್ರಾಯವಾಗಿರಬಹುದು; ಇದು ಕಾಂಗ್ರೆಸ್ ಪಕ್ಷದ ಅಭಿಪ್ರಾಯವಲ್ಲ. ನಾವು ನಮ್ಮ ಅಭಿಪ್ರಾಯಗಳನ್ನು ಪುರಾವೆಗಳು ಮತ್ತು ದಾಖಲೆಗಳೊಂದಿಗೆ ಪ್ರಸ್ತುತಪಡಿಸಿದ್ದೇವೆ' ಎಂದಿದ್ದರು.

ಇಂದು ಈ ವಿಷಯವನ್ನು ಪ್ರಸ್ತಾಪಿಸಿದ ಖರ್ಗೆ, 'ಅವರು (ಶಶಿ ತರೂರ್) ಇಂಗ್ಲಿಷ್‌ನಲ್ಲಿ ತುಂಬಾ ನಿರರ್ಗಳವಾಗಿ ಮಾತನಾಡುತ್ತಾರೆ. ನನಗೆ ಇಂಗ್ಲಿಷ್ ಚೆನ್ನಾಗಿ ಓದಲು ಬರುವುದಿಲ್ಲ. ಅವರ ಭಾಷೆ ತುಂಬಾ ಚೆನ್ನಾಗಿದೆ. ಅದಕ್ಕಾಗಿಯೇ ನಾವು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದೇವೆ' ಎಂದು ಹೇಳಿದರು.

26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಇಡೀ ವಿರೋಧ ಪಕ್ಷವು ಭಾರತೀಯ ಸೇನೆಯ ಪರ ದೃಢವಾಗಿ ನಿಂತಿದೆ ಎಂದ ಖರ್ಗೆ, 'ನಾವು ದೇಶ ಮೊದಲು, ಪಕ್ಷ ನಂತರ ಎಂದು ಹೇಳಿದ್ದೆವು. ಆದರೆ ಕೆಲವರು ಮೋದಿ ಮೊದಲು, ದೇಶ ನಂತರ ಎಂದು ಭಾವಿಸುತ್ತಾರೆ. ಇದಕ್ಕೆ ನಾವು ಏನು ಮಾಡಬಹುದು?' ಎಂದು ಹೇಳಿದ್ದಾರೆ.

ತರೂರ್ ಅವರ ಹೇಳಿಕೆಗಳು ಮತ್ತು ಖರ್ಗೆ ಅವರ ತೀಕ್ಷ್ಣ ಪ್ರತಿಕ್ರಿಯೆಯು, ಪಕ್ಷವು ಕೇಂದ್ರ ಸರ್ಕಾರದ ವಿರುದ್ಧ ಆಕ್ರಮಣಕಾರಿಯಾಗಿ ಸವಾಲೆಸೆಯುತ್ತಿರುವ ವೇಳೆ, ಆಂತರಿಕ ಭಿನ್ನಾಭಿಪ್ರಾಯದ ಬಗ್ಗೆ ಕಾಂಗ್ರೆಸ್‌ನೊಳಗೆ ಹೆಚ್ಚುತ್ತಿರುವ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT