ಮಮತಾ ಬ್ಯಾನರ್ಜಿ 
ದೇಶ

ರಾಜಸ್ಥಾನದಲ್ಲಿ ವಲಸೆ ಕಾರ್ಮಿಕರ ಬಂಧನ; ಮಮತಾ ಬ್ಯಾನರ್ಜಿ ಮಧ್ಯಪ್ರವೇಶದ ನಂತರ ಬಿಡುಗಡೆ

ಪಶ್ಚಿಮ ಬಂಗಾಳದ 200 ವಲಸೆ ಕಾರ್ಮಿಕರನ್ನು ಮತ್ತು ಅಸ್ಸಾಂನ ಬಂಗಾಳಿ ಮಾತನಾಡುವ 200 ಕಾರ್ಮಿಕರನ್ನು ಬಿಡುಗಡೆ ಮಾಡಿದ್ದು, ಅವರು ಕೆಲಸಕ್ಕೆ ಮರಳಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮಧ್ಯಪ್ರವೇಶದ ನಂತರ, ರಾಜಸ್ಥಾನದಲ್ಲಿ ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ಬಂಧಿಸಲ್ಪಟ್ಟಿದ್ದ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಇಟಾಹಾರ್‌ನ ವಲಸೆ ಕಾರ್ಮಿಕರನ್ನು ಬಿಡುಗಡೆ ಮಾಡಲಾಗಿದೆ.

ಬಂಧಿತ ವಲಸೆ ಕಾರ್ಮಿಕರಲ್ಲಿ ಒಬ್ಬರಾದ ಐನುಲ್ ಹಕ್ ಬುಧವಾರ ಬೆಳಗ್ಗೆ ರಾಜಸ್ಥಾನದಿಂದ ದೂರವಾಣಿ ಮೂಲಕ ಪಶ್ಚಿಮ ಬಂಗಾಳದ 200 ವಲಸೆ ಕಾರ್ಮಿಕರನ್ನು ಮತ್ತು ಅಸ್ಸಾಂನ ಬಂಗಾಳಿ ಮಾತನಾಡುವ 200 ಕಾರ್ಮಿಕರನ್ನು ಬಿಡುಗಡೆ ಮಾಡಿದ್ದು, ಅವರು ಕೆಲಸಕ್ಕೆ ಮರಳಿದ್ದಾರೆ ಎಂದು ತಿಳಿಸಿದ್ದಾರೆ.

"ಪಶ್ಚಿಮ ಬಂಗಾಳ ಸರ್ಕಾರ ರಾಜಸ್ಥಾನ ಸರ್ಕಾರದೊಂದಿಗೆ ಮಾತನಾಡಿದ ನಂತರ ಮಂಗಳವಾರ ಮಧ್ಯಾಹ್ನ ನಮ್ಮನ್ನು ಬಿಡುಗಡೆ ಮಾಡಲಾಯಿತು. ನಾವು ಬುಧವಾರ ಬೆಳಗ್ಗೆ ನಮ್ಮ ನಮ್ಮ ಕೆಲಸಗಳಿಗೆ ಮರಳಿದ್ದೇವೆ. ಇದಕ್ಕಾಗಿ, ನಾವೆಲ್ಲರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಧನ್ಯವಾದ ಅರ್ಪಿಸುತ್ತೇವೆ" ಎಂದು ಹಕ್ ಹೇಳಿದ್ದಾರೆ.

ಮಂಗಳವಾರ, ರಾಜಸ್ಥಾನಕ್ಕೆ ಕೆಲಸಕ್ಕಾಗಿ ಪ್ರಯಾಣಿಸಿದ್ದ ತಮ್ಮ ಕ್ಷೇತ್ರದ ಸುಮಾರು 300 ವಲಸೆ ಕಾರ್ಮಿಕರನ್ನು, ಭಾರತೀಯ ಪೌರತ್ವದ ಪುರಾವೆಗಳನ್ನು ಹೊಂದಿದ್ದರೂ ಸಹ, ಬಾಂಗ್ಲಾದೇಶಿಗಳು ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ ಎಂದು ಇಟಾಹಾರ್ ಶಾಸಕ ಮೊಸರಾಫ್ ಹೊಸೈನ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಮನಕ್ಕೆ ತಂದಿದ್ದರು.

ಘಟನೆಯ ಬಗ್ಗೆ ತೀವ್ರ ಅಸಮಾಧಾನ ಮತ್ತು ಪ್ರತಿಭಟನೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, "ಬಂಗಾಳಿ ಮಾತನಾಡುವ ಜನರನ್ನು ಏಕೆ ಇಷ್ಟೊಂದು ತಾರತಮ್ಯದಿಂದ ನಡೆಸಿಕೊಳ್ಳಲಾಗುತ್ತಿದೆ? ಬಂಗಾಳಿ ಮಾತನಾಡುವ ಜನ ಈ ದೇಶದ ನಾಗರಿಕರಲ್ಲವೇ? ಇದು ಮೊದಲ ಬಾರಿಯಲ್ಲ. ಇದೇ ರೀತಿಯ ಘಟನೆಗಳು ಈ ಹಿಂದೆಯೂ ನಡೆದಿವೆ. ಪ್ರಧಾನಿಗೆ ತಿಳಿದಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ನಾನು ಪ್ರಧಾನಿಯೊಂದಿಗೆ ಮಾತನಾಡುತ್ತೇನೆ" ಎಂದು ಹೇಳಿದ್ದಾರೆ.

ಕಾರ್ಮಿಕರ ಬಿಡುಗಡೆಗಾಗಿ ರಾಜಸ್ಥಾನ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಧಾಂಶ್ ಪಂತ್ ಅವರನ್ನು ತಕ್ಷಣ ಸಂಪರ್ಕಿಸುವಂತೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರಿಗೆ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT