296 ಭಾರತೀಯರು ದೆಹಲಿಗೆ ವಾಪಸ್ 
ದೇಶ

Operation Sindhu: ಇರಾನ್‌ನಿಂದ ಮತ್ತೆ 296 ಭಾರತೀಯರು ದೆಹಲಿಗೆ ವಾಪಸ್

ಆಪರೇಷನ್ ಸಿಂಧು ಕಾರ್ಯಾಚರಣೆಯಡಿ ಇಲ್ಲಿಯವರೆಗೆ 3154 ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಮನೆಗೆ ಕರೆತರಲಾಗಿದೆ" ಎಂದು ವಿದೇಶಾಂಗ ಸಚಿವಾಲಯ X ನಲ್ಲಿ ಪೋಸ್ಟ್‌ ಮಾಡಿದೆ.

ನವದೆಹಲಿ: ಸಂಘರ್ಷ ಪೀಡಿತ ಇರಾನ್‌ನಲ್ಲಿ ಸಿಲುಕಿದ್ದ 296 ಭಾರತೀಯರು ಮತ್ತು ನಾಲ್ವರು ನೇಪಾಳಿ ಪ್ರಜೆಗಳನ್ನು ಹೊತ್ತ ಮತ್ತೊಂದು ವಿಶೇಷ ವಿಮಾನ ಬುಧವಾರ ದೆಹಲಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇದರೊಂದಿಗೆ ಆಪರೇಷನ್ ಸಿಂಧು ಅಡಿಯಲ್ಲಿ ಸ್ಥಳಾಂತರಿಸಲಾದ ಒಟ್ಟು ಭಾರತೀಯರ ಸಂಖ್ಯೆ 3,154ಕ್ಕೆ ತಲುಪಿದೆ.

"ಜೂನ್ 25 ರಂದು ಸಂಜೆ 4:30 ಕ್ಕೆ ಮಶಾದ್‌ನಿಂದ ಹೊರಟು ನವದೆಹಲಿಗೆ ಬಂದಿಳಿದ ವಿಶೇಷ ವಿಮಾನದಲ್ಲಿ 296 ಭಾರತೀಯರು ಮತ್ತು 4 ನೇಪಾಳಿ ಪ್ರಜೆಗಳನ್ನು ಇರಾನ್‌ನಿಂದ ಸ್ಥಳಾಂತರಿಸಲಾಯಿತು. ಆಪರೇಷನ್ ಸಿಂಧು ಕಾರ್ಯಾಚರಣೆಯಡಿ ಇಲ್ಲಿಯವರೆಗೆ 3154 ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಮನೆಗೆ ಕರೆತರಲಾಗಿದೆ" ಎಂದು ವಿದೇಶಾಂಗ ಸಚಿವಾಲಯ X ನಲ್ಲಿ ಪೋಸ್ಟ್‌ ಮಾಡಿದೆ.

ಆಪರೇಷನ್ ಸಿಂಧು ಕಾರ್ಯಾಚರಣೆ ಅಡಿ ಭಾರತ ಮಂಗಳವಾರ ಇರಾನ್ ಮತ್ತು ಇಸ್ರೇಲ್ ನಿಂದ 1100 ಜನರನ್ನು ಕರೆತಂದಿತ್ತು.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಇರಾನ್ ನಿಂದ ಹೊರ ಹೋಗಲು ಬಯಸುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರ ಆಪರೇಷನ್ ಸಿಂಧು ಕಾರ್ಯಾಚರಣೆ ಪ್ರಾರಂಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT