ಸಾಂಕೇತಿಕ ಚಿತ್ರ 
ದೇಶ

2026 ರಿಂದ 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ: CBSE

ಮೇ ತಿಂಗಳಲ್ಲಿ ನಿಗದಿಪಡಿಸಲಾದ ಎರಡನೇ ಹಂತದ ಪರೀಕ್ಷೆಯು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಮುಂದಿನ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ಅವಧಿಯಲ್ಲಿ ಎರಡು ಬಾರಿ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನು ಬರೆಯಬೇಕು. ಆದರೆ ಫೆಬ್ರವರಿಯಲ್ಲಿ ನಡೆಯುವ ಮೊದಲ ಹಂತದ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ನಿಗದಿಪಡಿಸಲಾದ ಎರಡನೇ ಹಂತದ ಪರೀಕ್ಷೆಯು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮಾನದಂಡಗಳನ್ನು ಅನುಮೋದಿಸಿದೆ ಮತ್ತು ಈ ಕ್ರಮವನ್ನು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ(ಎನ್‌ಇಪಿ) ಶಿಫಾರಸು ಮಾಡಲಾಗಿದೆ.

ಮೊದಲ ಹಂತವನ್ನು ಫೆಬ್ರವರಿಯಲ್ಲಿ ಮತ್ತು ಎರಡನೇ ಹಂತವನ್ನು ಮೇನಲ್ಲಿ ನಡೆಸಲಾಗುವುದು. ಎರಡು ಹಂತಗಳ ಫಲಿತಾಂಶ ಕ್ರಮವಾಗಿ ಏಪ್ರಿಲ್ ಮತ್ತು ಜೂನ್‌ನಲ್ಲಿ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಅವರು ತಿಳಿಸಿದ್ದಾರೆ.

ಮೊದಲ ಹಂತಕ್ಕೆ(ವಿದ್ಯಾರ್ಥಿಗಳು) ಹಾಜರಾಗುವುದು ಕಡ್ಡಾಯವಾಗಿರುತ್ತದೆ ಮತ್ತು ಎರಡನೇ ಹಂತವು ಐಚ್ಛಿಕವಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಮತ್ತು ಭಾಷಾ ವಿಷಯ ಹೊರತುಪಡಿಸಿ ಇತರೆ ಯಾವುದೇ ಮೂರು ವಿಷಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ