ಶಶಿ ತರೂರ್ - ಮಾಣಿಕಂ ಟ್ಯಾಗೋರ್ 
ದೇಶ

ಸ್ವತಂತ್ರ ಹಕ್ಕಿಯೂ ಹುಷಾರಾಗಿರಬೇಕು: ಶಶಿ ತರೂರ್ ಪೋಸ್ಟ್‌ಗೆ ಕಾಂಗ್ರೆಸ್ ತಿರುಗೇಟು

ತಿರುವನಂತಪುರಂ ಸಂಸದ ಸಾಮಾಜಿಕ ಮಾಧ್ಯಮದಲ್ಲಿ ಹಾರುತ್ತಿರುವ ಹಕ್ಕಿಯ ಫೋಟೋವನ್ನು ಹಂಚಿಕೊಂಡು, 'ರೆಕ್ಕೆ ನಿಮ್ಮದು, ಹಾರಲು ಯಾರ ಅನುಮತಿಯೂ ಬೇಕಾಗಿಲ್ಲ. ಆಕಾಶ ಯಾರದ್ದೂ ಅಲ್ಲ' ಎಂದು ಬರೆದಿದ್ದರು.

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಮತ್ತು ಪಕ್ಷದ ಉನ್ನತ ನಾಯಕರ ನಡುವಿನ ಬಿರುಕು ಮತ್ತಷ್ಟು ಹೆಚ್ಚುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌, ಪ್ರತಿ ಪೋಸ್ಟ್ ಗಳ ಮೂಲಕ ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು “ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿಯೇ ಮೊದಲು” ಎಂದು ತರೂರ್ ಅವರನ್ನು ಟೀಕಿಸಿದ ಒಂದು ದಿನದ ನಂತರ, ತಿರುವನಂತಪುರಂ ಸಂಸದ ಸಾಮಾಜಿಕ ಮಾಧ್ಯಮದಲ್ಲಿ ಹಾರುತ್ತಿರುವ ಹಕ್ಕಿಯ ಫೋಟೋವನ್ನು ಹಂಚಿಕೊಂಡು, 'ರೆಕ್ಕೆ ನಿಮ್ಮದು, ಹಾರಲು ಯಾರ ಅನುಮತಿಯೂ ಬೇಕಾಗಿಲ್ಲ. ಆಕಾಶ ಯಾರದ್ದೂ ಅಲ್ಲ' ಎಂದು ಬರೆದಿದ್ದರು.

ಈಗ ಶಶಿ ತರೂರ್ ಪೋಸ್ಟ್ ಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು, "ಹಾರಲು ಅನುಮತಿ ಕೇಳಬೇಡಿ. ಪಕ್ಷಿಗಳು ಮೇಲೆ ಹಾರಲು ಅನುಮತಿ ಅಗತ್ಯವಿಲ್ಲ ನಿಜ. ಆದರೆ ಇಂದು, ಸ್ವತಂತ್ರ ಹಕ್ಕಿ ಕೂಡ ಆಕಾಶದಲ್ಲಿ ಹಾರಬೇಕಾದರೆ ಹುಷಾರಾಗಿರಬೇಕು. ಏಕೆಂದರೆ, ಗಿಡುಗಗಳು, ರಣಹದ್ದುಗಳು ಮತ್ತು ‘ಹದ್ದುಗಳು’ ಯಾವಾಗಲೂ ಬೇಟೆಯಾಡುತ್ತಲೇ ಇರುತ್ತವೆ. ಸ್ವಾತಂತ್ರ್ಯವು ಎಲ್ಲರಿಗೂ ಮುಕ್ತವಲ್ಲ. ವಿಶೇಷವಾಗಿ ಪರಭಕ್ಷಕಗಳು ದೇಶಭಕ್ತಿಯನ್ನು ಗರಿಗಳಾಗಿ ಧರಿಸಿದಾಗ ಸ್ವಾತಂತ್ರ್ಯ ಮುಕ್ತವಲ್ಲ” ಎಂದು ಎಚ್ಚರಿಸಿದ್ದಾರೆ.

ಟಾಗೋರ್ ಅವರ ಪೋಸ್ಟ್‌ನಲ್ಲಿ ಪರಭಕ್ಷಕ ಪಕ್ಷಿಗಳ ಚಿತ್ರಗಳೂ ಇವೆ. ಇದು ಪಕ್ಷದೊಳಗಿನ ಆಂತರಿಕ ಉದ್ವಿಗ್ನತೆಯನ್ನು ಸೂಚಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT