ಹಿಮಾಚಲ ಪ್ರದೇಶದಲ್ಲಿ ಪ್ರವಾಹ 
ದೇಶ

ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಪೋಟ, ಪ್ರವಾಹ: ಇಲ್ಲಿವರೆಗೂ ಐವರ ಮೃತದೇಹ ವಶಕ್ಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಹಿಮಾಚಲ ಪ್ರದೇಶದ ಕಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಬುಧವಾರ ಸಂಭವಿಸಿದ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದ ನಂತರ ಆರು ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದ ನಂತರ ನಾಪತ್ತೆಯಾಗಿರುವ ಆರು ಜನರ ಶೋಧ ಕಾರ್ಯಾಚರಣೆಯನ್ನು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಪೊಲೀಸ್ ಮತ್ತು ಗೃಹ ರಕ್ಷಕರ ಜಂಟಿ ತಂಡಗಳು ಶುಕ್ರವಾರ ಬೆಳಿಗ್ಗೆಯಿಂದ ಪುನರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ ಕಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಬುಧವಾರ ಸಂಭವಿಸಿದ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದ ನಂತರ ಆರು ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಕಾಂಗ್ರಾ ಜಿಲ್ಲೆಯ ಜಲವಿದ್ಯುತ್ ಯೋಜನೆ ಸ್ಥಳದಿಂದ ಇಲ್ಲಿಯವರೆಗೆ ಐದು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಇತರ ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕುಲು ಜಿಲ್ಲೆಯ ರೆಹ್ಲಾ ಬಿಹಾಲ್‌ನಲ್ಲಿ ನಾಪತ್ತೆಯಾದ ಮೂವರಿಗಾಗಿ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಬಾ ಜಿಲ್ಲೆಯ ಅರಣ್ಯ ಬಳಿಯ ಕ್ಯಾಂಪ್ ನಲ್ಲಿ 13 ಜನರಿದ್ದೇವು. ಈ ಪೈಕಿ ಐವರು ಬೆಟ್ಟಗಳ ಕಡೆಗೆ ಓಡಿಹೋದರೆ, ಉಳಿದವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ರಕ್ಷಿಸಲ್ಪಟ್ಟಿ ಕಾರ್ಮಿಕರು ತಿಳಿಸಿದ್ದಾರೆ.

ಮಳೆಯಿಂದಾಗಿ ಯೋಜನಾ ಕೆಲಸವನ್ನು ಸ್ಥಗಿತಗೊಳಿಸಲಾಗಿದ್ದು, ಯೋಜನಾ ಸ್ಥಳದಲ್ಲಿ ಹಾಕಲಾದ ತಾತ್ಕಾಲಿಕ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಪ್ರವಾಹದ ನೀರು ನಮ್ಮ ಕಡೆಗೆ ನುಗ್ಗಿತು ಎಂದು ಕಾರ್ಮಿಕರ ಹೇಳಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದರು.

ಯೋಜನಾ ಸ್ಥಳದಿಂದ ನೀರಿನಲ್ಲಿ ಕೊಚ್ಚಿ ಹೋಗಿರುವ ಜನರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಕಮಾಂಡೆಂಟ್ ಬಲ್ಜಿಂದರ್ ಸಿಂಗ್ ತಿಳಿಸಿದ್ದಾರೆ.

ಈ ಮಧ್ಯೆ ಹೊಳೆ ಬಳಿ ಶೆಲ್ಟರ್‌ಗಳನ್ನು ನಿರ್ಮಿಸಿದ್ದಾರೆ. ಹವಾಮಾನ ಹದಗೆಟ್ಟಾಗ ಕಾರ್ಮಿಕರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸದೆ ನಿರ್ಲಕ್ಷ್ಯ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಧರ್ಮಶಾಲಾ ಬಿಜೆಪಿ ಶಾಸಕ ಸುಧೀರ್ ಶರ್ಮಾ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT