ಏರ್ ಇಂಡಿಯಾ ವಿಮಾನ 
ದೇಶ

ಕ್ಯಾಬಿನ್‌ನಲ್ಲಿ ಸುಟ್ಟ ವಾಸನೆ: ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್!

ಶನಿವಾರ ಚೆನ್ನೈಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಕಂಡುಬಂದಿದೆ. ತದನಂತರ ಮುಂಬೈಗೆ ವಿಮಾನ ಮರಳಬೇಕಾಯಿತು.

ಮುಂಬೈ: ದೇಶದಲ್ಲಿ ಇತ್ತೀಚಿಗೆ ಸಂಭವಿಸಿದ ಅಹಮದಾಬಾದ್ ವಿಮಾನ ದುರಂತ ಸೇರಿದಂತೆ ಕೆಲ ವಿಮಾನ ತುರ್ತು ಲ್ಯಾಂಡಿಂಗ್, ಹುಸಿ ಬಾಂಬ್ ಬೆದರಿಕೆಯಂತಹ ಪ್ರಕರಣಗಳು ಮರು ಕಳಿಸುತ್ತಿದ್ದು, ಜನರು ವಿಮಾನದಲ್ಲಿ ಪ್ರಯಾಣಿಸಲು ಆತಂಕಪಡುವಂತಾಗಿದೆ.

ಇದೇ ರೀತಿ ಶನಿವಾರ ಚೆನ್ನೈಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಕಂಡುಬಂದಿದೆ. ತದನಂತರ ಮುಂಬೈಗೆ ವಿಮಾನ ಮರಳಬೇಕಾಯಿತು. ಆದರೆ, ವಾಪಸ್ಸಾದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಮುಂಬೈಯಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ AI 639 ವಿಮಾನದಲ್ಲಿ ಸುಟ್ಟ ವಾಸನೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮುಂಬೈಗೆ ಮರಳಿದೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.

ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ವಿಮಾನ ಬದಲಾವಣೆ ಪ್ರಾರಂಭಿಸಲಾಯಿತು. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಆದ ಅನಾನುಕೂಲವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಬೆಂಬಲ ಒದಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT