ಅಮಿತ್ ಶಾ-ದೇವೇಂದ್ರ ಫಡ್ನವೀಸ್ 
ದೇಶ

ಹಿಂದಿ ಹೇರಿಕೆ: ಮರಾಠಿ ಎದುರು ಮಂಡಿಯೂರಿದ ಮಹಾರಾಷ್ಟ್ರ ಸಿಎಂ ಫಡ್ನವಿಸ್; ತ್ರಿಭಾಷಾ ನೀತಿ ಆದೇಶ ರದ್ದು!

ಮಹಾರಾಷ್ಟ್ರ ಸರ್ಕಾರ ಇಂದು ತ್ರಿಭಾಷಾ ನೀತಿಗೆ ಸಂಬಂಧಿಸಿದ ತನ್ನ ಪರಿಷ್ಕೃತ ಸರ್ಕಾರಿ ಆದೇಶವನ್ನು (GR) ಹಿಂತೆಗೆದುಕೊಂಡಿದೆ.

ಮುಂಬೈ: ಮಹಾರಾಷ್ಟ್ರ ಸರ್ಕಾರ ಇಂದು ತ್ರಿಭಾಷಾ ನೀತಿಗೆ ಸಂಬಂಧಿಸಿದ ತನ್ನ ಪರಿಷ್ಕೃತ ಸರ್ಕಾರಿ ಆದೇಶವನ್ನು (GR) ಹಿಂತೆಗೆದುಕೊಂಡಿದೆ. ಮೂರನೇ ಭಾಷೆಯಾಗಿ ಹಿಂದಿ 'ಹೇರಿಕೆ' ಆರೋಪಗಳ ನಡುವೆ ಹೆಚ್ಚುತ್ತಿರುವ ವಿರೋಧದಿಂದಾಗಿ ಸರ್ಕಾರ ಈ ಕ್ರಮಕೈಗೊಂಡಿದೆ. ಇದರೊಂದಿಗೆ ಈ ನೀತಿಯನ್ನು ಪರಿಶೀಲಿಸಲು ಮತ್ತು ಕಾರ್ಯಗತಗೊಳಿಸಲು ಸರ್ಕಾರ ಹೊಸ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ತ್ರಿಭಾಷಾ ನೀತಿ ಮತ್ತು ಅದರ ಅನುಷ್ಠಾನ ವಿಧಾನದ ಕುರಿತು ಡಾ. ನರೇಂದ್ರ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಅವರು ಹೇಳಿದರು. ಈ ಸಮಿತಿಯ ವರದಿ ಬಂದ ನಂತರವೇ ನೀತಿಯನ್ನು ಜಾರಿಗೆ ತರಲಾಗುವುದು ಎಂದರು. ಸಮಿತಿಯ ಶಿಫಾರಸುಗಳು ಬರುವವರೆಗೆ, ತ್ರಿಭಾಷಾ ನೀತಿಗೆ ಸಂಬಂಧಿಸಿದ ಎರಡೂ GR ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಸಿಎಂ ಫಡ್ನವೀಸ್ ಸ್ಪಷ್ಟಪಡಿಸಿದ್ದಾರೆ. ಮರಾಠಿ ಭಾಷೆ ನಮಗೆ ಕೇಂದ್ರಬಿಂದುವಾಗಿದೆ ಎಂದು ಅವರು ಹೇಳಿದರು.

ಸರ್ಕಾರಿ ಆದೇಶದಲ್ಲಿ ಈ ಹಿಂದೆ ಏನು ಹೇಳಲಾಗಿತ್ತು?

ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಲಿಸಲಾಗುವುದು ಎಂದು ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿತ್ತು. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಪ್ರಾಥಮಿಕ ಹಂತದಲ್ಲಿ ಹಂತಹಂತವಾಗಿ ಅನುಷ್ಠಾನಗೊಳಿಸುವ ಭಾಗವಾಗಿತ್ತು. ಆದಾಗ್ಯೂ, ಒಂದು ತರಗತಿಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳು ಹಿಂದಿ ಬದಲಿಗೆ ಬೇರೆ ಯಾವುದೇ ಭಾರತೀಯ ಭಾಷೆಯನ್ನು ಆಯ್ಕೆ ಮಾಡಲು ಬಯಸಿದರೆ, ಶಾಲೆಯು ಆ ಭಾಷೆಯ ಶಿಕ್ಷಕರನ್ನು ವ್ಯವಸ್ಥೆ ಮಾಡಬೇಕಾಗುತ್ತದೆ ಅಥವಾ ಆ ವಿಷಯವನ್ನು ಆನ್‌ಲೈನ್‌ನಲ್ಲಿ ಕಲಿಸಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮಹಾರಾಷ್ಟ್ರ ಸರ್ಕಾರದ ಈ ನಡೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿದವು. ಸರ್ಕಾರವು ಪ್ರಾದೇಶಿಕ ಭಾಷೆಗಳನ್ನು ನಿರ್ಲಕ್ಷಿಸುವ ಮೂಲಕ ಹಿಂದಿಯನ್ನು ಉತ್ತೇಜಿಸುತ್ತಿದೆ. ಇದು ರಾಜ್ಯದ ಭಾಷಾ ವೈವಿಧ್ಯತೆ ಮತ್ತು ಮರಾಠಿ ಗುರುತಿಗೆ ಹಾನಿ ಮಾಡುತ್ತದೆ ಎಂದು ಅವರು ಆರೋಪಿಸಿದರು. ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಈ ನೀತಿಯನ್ನು ವಿರೋಧಿಸಿ ಮರಾಠಿ ಮಾತನಾಡುವ ಜನರು ಬೀದಿಗಿಳಿದು ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸುವಂತೆ ಮನವಿ ಮಾಡಿತು.

ಸರ್ಕಾರದ ಈ ನಿರ್ಧಾರದ ನಂತರ, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ಹೇಳಿಕೆ ಮುನ್ನೆಲೆಗೆ ಬಂದಿತ್ತು. ರಾಜ್ಯ ಸರ್ಕಾರವು ತ್ರಿಭಾಷಾ ನೀತಿಗೆ ಸಂಬಂಧಿಸಿದ ಎರಡೂ ಸರ್ಕಾರಿ ಆದೇಶಗಳನ್ನು (ಜಿಆರ್) ರದ್ದುಗೊಳಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಮರಾಠಿ ಸಾರ್ವಜನಿಕ ಭಾವನೆ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನವನ್ನು ಸಂಪೂರ್ಣವಾಗಿ ವಿಫಲಗೊಳಿಸಿದೆ ಎಂದು ಹೇಳಿದರು. ಇದು ತಡವಾಗಿ ಬಂದ ತಿಳುವಳಿಕೆಯಲ್ಲ, ಆದರೆ ಮರಾಠಿ ಜನರ ಕೋಪದ ಪರಿಣಾಮ ಸರ್ಕಾರ ಹಿಂದೆ ಸರಿಯಬೇಕಾಯಿತು ಎಂದು ರಾಜ್ ಠಾಕ್ರೆ ಹೇಳಿದರು. ಸರ್ಕಾರ ಹಿಂದಿ ಬಗ್ಗೆ ಏಕೆ ಇಷ್ಟೊಂದು ದೃಢವಾಗಿತ್ತು ಮತ್ತು ಈ ಒತ್ತಡ ಎಲ್ಲಿಂದ ಬಂತು ಎಂಬುದು ಇನ್ನೂ ನಿಗೂಢವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT